ಶನಿವಾರ ಹೃದಯಾಘಾತಕ್ಕೆ ಒಳಗಾಗಿ ನಿಧನರಾದಂತ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು, ಇಂದು ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಈ ಮೂಲಕ ಕಾಣದಂತೆ ಮಾಯವಾದನೋ, ನಮ್ಮ ಅಪ್ಪು ಕೈಲಾಸ ಸೇರಿಕೊಂಡೊನೋ ಎಂಬುದಾಗಿ ಕರುನಾಡೇ ಕಂಬನಿ ಮಿಡಿದಿದೆ.ಇದರ ನಡುವೆ ಪುನೀತ್ ರಾಜ್ ಕುಮಾರ್ ಅವರ ವಿವಿಧ ಕಾರ್ಯಗಳ ಹಿನ್ನಲೆಯಲ್ಲಿ, ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳಕ್ಕೆ ಗಣ್ಯರು ಆಗಮಿಸೋ ಕಾರಣದಿಂದಾಗಿ ಇಂದಿನಿಂದ ನವೆಂಬರ್ 2ರವರೆಗೆ ಕಂಠೀರವ ಸ್ಟುಡಿಯೋಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ನಟ ಪುನೀತ್ ರಾಜ್ ಕುಮಾರ್ ಇಂದು ಮಣ್ಣಲ್ಲಿ ಮಣ್ಣಾಗಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬಾರದ ಲೋಕಕ್ಕೆ ತೆರಳಿದ್ದಾರೆ. ನಿನ್ನೆ ಪುತ್ರಿ ಧೃತಿ ನ್ಯೂಯರ್ಕ್ ನಿಂದ ವಾಪಾಸ್ ಬಂದ ಕಾರಣ, ಇಂದು ಮುಂಜಾನೆಯೇ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ನಗರದ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.ಪುನೀತ್ ರಾಜ್ ಕುಮಾರ್ ಅವರ ಕುಟುಂಬಸ್ಥರಿಂದ ಸಮಾಧಿ ಸ್ಥಳಕ್ಕೆ ವಿವಿಧ ವಿಧಿವಿಧಾನ ನೆರವೇರಿಸೋದು, ಗಣ್ಯರು ಸಮಾಧಿ ಸ್ಥಳಕ್ಕೆ ಭೇಟಿ ನೀಡಿ, ಪುನೀತ್ ರಾಜ್ ಕುಮಾರ್ ಸಮಾಧಿ ದರ್ಶನ ಪಡೆಯೋ ಕಾರಣದಿಂದಾಗಿ ಇಂದಿನಿಂದ ನವೆಂಬರ್ 2ರವರೆಗೆ ಕಂಠೀರವ ಸ್ಟುಡಿಯೋಗೆ ಸಾರ್ವಜನಿಕರ ದರ್ಶನವನ್ನು ನಿಷೇಧಿಸಲಾಗಿದೆ.
ಇದರ ಬೆನ್ನಲ್ಲೇ ಮತ್ತೊಂದು ನಟನಿಗೆ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಭಾರತ ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ರವರು ಸದ್ಯ ಇದೀಗ ಆಸ್ಪತ್ರೆಗೆ ದಾಖಲಾಗಿದ್ದು ಗುರುವಾರ ಸಂಜೆ ವೇಳೆಗೆ ಅವರ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಕಾರಣದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದೇ ವರದಿಯಾಗಿದೆ. ಚೆನ್ನೈನ ಕಾವೇರಿ ಆಸ್ಪತ್ರೆಗೆ ರಜನಿಕಾಂತ್ ಅವರನ್ನು ದಾಖಲಿಸಲಾಗಿದ್ದು ಇದೀಗ ಚಿಕಿತ್ಸೆ ನೀಡಲಾಗುತ್ತಿದೆ. ಅಭಿಮಾನಿಗಳು ಆತಂಕಗೊಳ್ಳುವುದು ಬೇಡವೆಂದು ಆಸ್ಪತ್ರೆಯ ವಕ್ತಾರರು ತಿಳಿಸಿದ್ದು ರಜನೀಕಾಂತ್ ಸಾಮಾನ್ಯ ಆರೋಗ್ಯ ತಪಾಸಣೆಗೆಂದು ಕಾವೇರಿ ಆಸ್ಪತ್ರೆಗೆ ಬಂದಿದ್ದಾರೆ.
ಹೌದು ಅವರ ಆರೋಗ್ಯದಲ್ಲಿ ವ್ಯತ್ಯವವಾಗಿಲ್ಲವೆಂದು ರಜನೀಕಾಂತ್‌ರ ಪ್ರಚಾರ ವ್ಯವಸ್ಥಾಪಕ ರಿಯಾಜ್ ಕೆ ಅಹ್ಮದ್ ರವರು ಹೇಳಿದ್ದಾರೆ. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಅಣ್ಣಾತೆ ಚಿತ್ರದ ಚಿತ್ರೀಕರಣದ ವೇಳೆ ರಜನೀಕಾಂತ್ ಅವರ ಆರೋಗ್ಯದಲ್ಲಿ ವ್ಯತ್ಯಯವುಂಟಾದ ಕಾರಣ ಆಸ್ಪತ್ರೆ ಸೇರಿದ್ದು ಎರಡು ದಿನ ಹೈದರಾಬಾದ್‌ನ ಆಸ್ಪತ್ರೆಯಲ್ಲಿದ್ದ ರಜನೀಕಾಂತ್ ಆ ನಂತರ ಕೆಲ ತಿಂಗಳುಕಾಲ ಸಂಪೂರ್ಣವಾಗಿ ವಿಶ್ರಾಂತಿ ಪಡೆದಿದ್ದರು. ರಾಜಕೀಯ ಪ್ರವೇಶಕ್ಕೆ ಮನಸ್ಸು ಮಾಡಿದ್ದ ರಜನೀಕಾಂತ್ ರವರು ಆರೋಗ್ಯ ಸಮಸ್ಯೆಯಿಂದಾಗಿ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲವೆಂದು ಘೋಷಿಸಿದ್ದರು. ಇದರಿಂದಾಗಿ ರಜನೀಕಾಂತ್ ಅಭಿಮಾನಿಗಳು ತೀವ್ರ ಬೇಸರ ವ್ಯಕ್ತಪಡಿಸದ್ದು ಪ್ರತಿಭಟನೆಯನ್ನೂ ಕೂಡ ಮಾಡಿದ್ದರು.