ಬೆಂಗಳೂರು: ಕಂದಾಯ ಭೂಮಿಗಳಲ್ಲಿ ( Revenue Land ) ಅಕ್ರಮವಾಗಿ ಮನೆ ನಿರ್ಮಿಸಿಕೊಂಡವರು, ಸಕ್ರಮಕ್ಕಾಗಿ ಅರ್ಜಿ ಯಾವಾಗ ಕರೆಯುತ್ತಾರೆ ಎಂಬುದಾಗಿ ಎದುರು ನೋಡುತ್ತಿದ್ದರು. ಇದೀಗ ರಾಜ್ಯ ಸರ್ಕಾರ ಅಕ್ರಮವಾಗಿ ಕಂದಾಯ ಭೂಮಿಯಲ್ಲಿ ಮನೆ ನಿರ್ಮಾಣ ಮಾಡಿಕೊಂಡವರಿಂದ, ಸಕ್ರಮಗೊಳಿಸಲು ಅರ್ಜಿಯನ್ನು ಆಹ್ವಾನಿಸಿದೆ.
ಈ ಮೂಲಕ ಅಕ್ರಮವಾಗಿ ಮನೆ ನಿರ್ಮಿಸಿಕೊಂಡವರಿಗೆ ಗುಡ್ ನ್ಯೂಸ್ ನೀಡಿದೆ.ಈ ಕುರಿತಂತೆ ಸರ್ಕಾರದ ಸೂಚನೆ ಮೇರೆಗೆ ಕಂದಾಯ ಇಲಾಖೆ ( Revenue Department ) ಆದೇಶ ಹೊರಡಿಸಿದ್ದು, ಬೆಂಗಳೂರು ಗ್ರಾಮಾಂತರ ಪ್ರದೇಶದ ಸರ್ಕಾರಿ ಕಂದಾಯ ಭೂಮಿಗಳಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡಿಕೊಂಡಿರುವವರು ಸಕ್ರಮಗೊಳಿಸಿಕೊಳ್ಳೋದಕ್ಕೆ, ಕಂದಾಯ ಇಲಾಖೆಯಿಂದ ಸೂಕ್ತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸಲು ಆಹ್ವಾನಿಸಿದೆ. ಕಂದಾಯ ಭೂಮಿಗಳಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡಿಕೊಂಡವರು ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 31, 2022 ಕೊನೆಯ ದಿನಾಂಕವಾಗಿದೆ.
ಆದ್ದರಿಂದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು, ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಚಾರ ನೀಡಿ, ಹೀಗೆ ಅಕ್ರಮವಾಗಿ ಮನೆ ನಿರ್ಮಾಣ ಮಾಡಿಕೊಂಡವರಿಂದ ನಮೂನೆ 94ಸಿಸಿಯಲ್ಲಿ ಅರ್ಜಿ ಪಡೆದು, ಅಗತ್ಯ ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆ ಸೂಚಿಸಿದೆ. ಇದೇ ಮಾದರಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ಇದ್ದು, ಗ್ರಾಮೀಣ ಭಾಗದ ಜನರು ನಮೂನೆ 94ಸಿಸಿಯಲ್ಲಿ ಅರ್ಜಿಯನ್ನು ಸಲ್ಲಿಸಿ, ತಾವು ಅಕ್ರಮವಾಗಿ ನಿರ್ಮಿಸಿಕೊಂಡ ಮನೆಯನ್ನು ಸಕ್ರಮಗೊಳಿಸಿಕೊಳ್ಳಬಹುದಾಗಿದೆ.
ಇನ್ನು ರಾಜ್ಯಾದ್ಯಂತ ವರುಣನ ಆರ್ಭಟಕ್ಕೆ ಜನ ಜೀವನ ಸಂಪೂರ್ಣ ಅಸ್ತವ್ಯವಸ್ಥಗೊಂಡಿದೆ. ಹಲವು ಗ್ರಾಮಗಳು ಜಾಲಾವೃತಗೊಂಡಿದ್ದು, ನೂರಾರು ಮನೆಗಳು ಕುಸಿದು ಬಿದ್ದಿವೆ, ಅಪಾರ ಪ್ರಮಾಣದ ಬೆಳೆ ನೀರು ಪಾಲಾಗಿವೆ. ಬೆಳೆದ ಬೆಳೆ ಕೈಗೆ ಸಿಗದೇ ರೈತರು ಕಂಗಾಲಾಗಿದ್ದಾರೆ.ಬರದನಾಡು ಎಂದೇ ಕರೆಯಲಾಗುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ 50 ವರ್ಷಗಳ ಇತಿಹಾಸದಲ್ಲಿಯೇ ಇಂಥಹ ರಣಭೀಕರ ಮಳೆ ನೋಡಿರಲಿಲ್ಲ ಎಂದು ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸೇತುವೆಗಳ ಮೇಲೆ ನೀರು ಹರಿಯುತ್ತಿದ್ದು, ಈಗಾಗಲೇ ಮೂವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಹಲವು ಗ್ರಾಮಗಳು ಜಲಾವೃತಗೊಂಡಿದ್ದು, 436 ಮನೆಗಳು ನೆಲಸಮವಾಗಿವೆ. ಮನೆ ಕಳೆದುಕೊಂಡವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಇನ್ನೂ 2-3 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಜನರು ನೀರಿಗಿಳಿಯುವ ದುಸ್ಸಾಹಸ ಮಾಡಬಾರದು. ಎಚ್ಚರಿಕೆ ನಡುವೆಯೂ ಹಲವರು ನೀರಿಗಿಳಿಯುವ ಮೂಲಕ ಪ್ರಾಣಾಪಾಯ ತಂದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ರಾಜ್ಯಾದ್ಯಂತ ವರುಣನ ಆರ್ಭಟಕ್ಕೆ ಜನ ಜೀವನ ಸಂಪೂರ್ಣ ಅಸ್ತವ್ಯವಸ್ಥಗೊಂಡಿದೆ. ಹಲವು ಗ್ರಾಮಗಳು ಜಾಲಾವೃತಗೊಂಡಿದ್ದು, ನೂರಾರು ಮನೆಗಳು ಕುಸಿದು ಬಿದ್ದಿವೆ, ಅಪಾರ ಪ್ರಮಾಣದ ಬೆಳೆ ನೀರು ಪಾಲಾಗಿವೆ. ಬೆಳೆದ ಬೆಳೆ ಕೈಗೆ ಸಿಗದೇ ರೈತರು ಕಂಗಾಲಾಗಿದ್ದಾರೆ.ಬರದನಾಡು ಎಂದೇ ಕರೆಯಲಾಗುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ 50 ವರ್ಷಗಳ ಇತಿಹಾಸದಲ್ಲಿಯೇ ಇಂಥಹ ರಣಭೀಕರ ಮಳೆ ನೋಡಿರಲಿಲ್ಲ ಎಂದು ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸೇತುವೆಗಳ ಮೇಲೆ ನೀರು ಹರಿಯುತ್ತಿದ್ದು, ಈಗಾಗಲೇ ಮೂವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಹಲವು ಗ್ರಾಮಗಳು ಜಲಾವೃತಗೊಂಡಿದ್ದು, 436 ಮನೆಗಳು ನೆಲಸಮವಾಗಿವೆ. ಮನೆ ಕಳೆದುಕೊಂಡವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಇನ್ನೂ 2-3 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಜನರು ನೀರಿಗಿಳಿಯುವ ದುಸ್ಸಾಹಸ ಮಾಡಬಾರದು. ಎಚ್ಚರಿಕೆ ನಡುವೆಯೂ ಹಲವರು ನೀರಿಗಿಳಿಯುವ ಮೂಲಕ ಪ್ರಾಣಾಪಾಯ ತಂದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.