2023 PUC Result: PUC ಫಲಿತಾಂಶ ಪ್ರಕಟ, ಯಾವ ಜಿಲ್ಲೆಗೆ ಪ್ರಥಮ ಸ್ಥಾನ ಮತ್ತು ಯಾವ ಜಿಲ್ಲೆಗೆ ಕೊನೆಯ ಸ್ಥಾನ.
PUC ಫಲಿತಾಂಶ ಪ್ರಕಟ, ಯಾವ ಯಾವ ಜಿಲ್ಲೆಗಳು ಯಾವ ಸ್ಥಾನ ಪಡೆದುಕೊಂಡಿದೆ ನೋಡಿ.
PUC Result 2023: ಈಗಾಗಲೇ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ನಡೆದು ಹೋಗಿದೆ. ಸಾಕಷ್ಟು ದಿನಗಳಿಂದ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ರಾಜ್ಯಾದ್ಯಂತ ಇಂದು 2022-23 ನೇ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.
ಸದ್ಯ ಫಲಿತಾಂಶ ಪ್ರಕಟ ಆಗಿದ್ದು ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ರಿಸಲ್ಟ್ ಪಡೆಯಬಹುದಾಗಿದೆ.
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದ ಜಿಲ್ಲೆ
ಇಂದು 11 ಗಂಟೆಗೆ 2022 23 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಭಾರಿ ಯಾವ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ ಎಂಬ ಮಾಹಿತಿ ಇಲ್ಲಿದೆ. ಈ ಭಾರಿ ಶೇಕಡಾ 74.64 ಫಲಿತಾಂಶ ಬಂದಿದೆ. ಕಳೆದ ಬಾರಿ 61.88 ಫಲಿತಾಂಶ ಬಂದಿತ್ತು. ಈ ಬಾರಿಯೂ ಸಹ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಇನ್ನು ಉಡುಪಿ ಜಿಲ್ಲೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.
ಪರೀಕ್ಷೆಯಲ್ಲಿ ಉತ್ತೀರ್ಣರಾದ ಒಟ್ಟು ವಿದ್ಯಾರ್ಥಿಗಳು
ಕೆಎಸ್ಈಎಬಿ ಅಧ್ಯಕ್ಷ ಡಾ. ರಾಮಚಂದ್ರನ್ ಅವರು ಸುದ್ದಿಗೋಷ್ಠಿಯಲ್ಲಿ ಇಂದು ದ್ವಿತೀಯ ಪಿಯುಸಿ ಫಲಿತಾಂಶವನ್ನು ಬಿಡುಗಡೆ ಮಾಡಿದ್ದಾರೆ. ಒಟ್ಟು 61 ಕೇಂದ್ರಗಳಲ್ಲಿ ಮೌಲ್ಯಮಾಪನ ಮಾಡಲಾಗಿದೆ. ಒಟ್ಟು 7,02,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಇಷ್ಟು ದಿನ ಫಲಿತಾಂಶ ಪ್ರಕಟಣೆಗಾಗಿ ಕಾದಿದ್ದಾರೆ. ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಸುದ್ದಿಗೋಷ್ಠಿ ಮಾಡಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ವೆಬ್ ಸೈಟ್ ನಲ್ಲಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳು www.karresults.nic.in ವೆಬ್ ಸೈಟ್ ಗೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದಾಗಿದೆ.