Gruha Lakshmi: 2 ತಿಂಗಳ ಗೃಹಲಕ್ಷ್ಮಿ ಹಣ ಬರುವ ದಿನಾಂಕ ತಿಳಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಹಿಳೆಯರಿಗೆ ಸಿಹಿಸುದ್ದಿ

Lakshmi Hebbalkar About Gruha Lakshmi Scheme: ಕಾಂಗ್ರೆಸ್ ಸರ್ಕಾರದ ಪ್ರಮುಖವಾದ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ (Gruha Lakshmi Scheme) ಸಂಬಂಧಿಸಿದಂತೆ ಅನೇಕ ಗೊಂದಲಗಳು ಎದುರಾಗಿದೆ ಎಂದು ಹೇಳಬಹುದು. ಕಳೆದ ಎರಡು ತಿಂಗಳಿಂದ ರಾಜ್ಯದ ಯಾವುದೇ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿಲ್ಲ. ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗದ ಕಾರಣ ಸಾಕಷ್ಟು ಮಹಿಳೆಯರು ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗುತ್ತಾ ಅಥವಾ ಇಲ್ಲವಾ ಅನ್ನುವ ಅನುಮಾನವನ್ನ ಕೂಡ ಹೊರಹಾಕಿದ್ದರು. ಸದ್ಯ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯದ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ರಾಜ್ಯದ ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ. 2 ತಿಂಗಳ ಗೃಹಲಕ್ಷ್ಮಿ ಹಣ ಬರುವ ದಿನಾಂಕ ತಿಳಿಸಿದ್ದಾರೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

WhatsApp Group Join Now
Telegram Group Join Now

ಮಹಿಳೆಯರ ಖತಾಗೆ 4,000 ರೂ ಜಮಾ ಆಗಲಿದೆ
ಗೃಹಲಕ್ಷ್ಮಿ ಯೋಜನೆ ಹಣ ಕಳೆದ ಎರಡು ತಿಂಗಳಿಂದ ಯಾವುದೇ ಮಹಿಳೆಯರ ಖಾತೆಗೆ ಜಮಾ ಆಗದ ಬೆನ್ನಲ್ಲೇ ರಾಜ್ಯದ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಘೋಷಣೆ ಮಾಡಿದ್ದಾರೆ. ಕೆಲವು ತಾಂತ್ರಿಕ ದೋಷಗಳ ಕಾರಣ ಮಹಿಳೆಯರ ಖಾತೆಗೆ ಹಣ ಜಮಾ ಮಾಡಲು ರಾಜ್ಯ ಸರ್ಕಾರದ ಬಳಿ ಸಾಧ್ಯವಿಲ್ಲ. ಸದ್ಯ ಎಲ್ಲಾ ತಾಂತ್ರಿಕ ಸಮಸ್ಯೆ ನಿವಾರಣೆ ಆಗಿದ್ದು ಮಾರ್ಚ್ ತಿಂಗಳ ಎರಡನೆಯ ವಾರದಲ್ಲಿ ಎಲ್ಲಾ ಮಹಿಳೆಯರ ಗೃಹಲಕ್ಷ್ಮಿ ಯೋಜನೆಯ 4,000 ರೂ, ಅಂದರೆ ಬಾಕಿ ಇರುವ ಎರಡು ತಿಂಗಳ ಹಣ ಜಮಾ ಆಗಲಿದೆ.

Latest New of gruha lakshmi scheme
Lakshmi Hebbalkar latest statement of gruha lakshmi scheme

ಮಾರ್ಚ್ ತಿಂಗಳ ಎರಡನೆಯ ವಾರದಲ್ಲಿ ಹಣ ಜಮಾ
ಮಾಧ್ಯಮದ ಮುಂದೆ ಮಾತನಾಡಿದ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾರ್ಚ್ ತಿಂಗಳ ಎರಡನೆಯ ವಾರದಲ್ಲಿ ರಾಜ್ಯದ ಎಲ್ಲಾ ಮಹಿಳೆಯರ ಖಾತೆಗೆ 4,000 ರೂ ಆಗಲಿದೆ ಎಂದು ಆದೇಶವನ್ನ ಹೊರಡಿಸಿದ್ದಾರೆ. DBT Karnataka ಮೂಲಕ ರಾಜ್ಯದ ಮಹಿಳೆಯರಿಗೆ ಬಾಕಿ ಇರುವ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಮಾಡುವ ಕೆಲಸವನ್ನು ಮಾಡಲಾಗುತ್ತಿದೆ. ಇನ್ನು ಮಹಿಳೆಯರು DBT ಕರ್ನಾಟಕ ಅಪ್ಲಿಕೇಶನ್ (DBT Karnataka Mobile App) ಇನ್ಸ್ಟಾಲ್ ಮಾಡಿಕೊಂಡು ಯೋಜನೆಯ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.

ಈ ಮಹಿಳೆಯರ ಖಾತೆಗೆ ಜಮಾ ಆಗಲ್ಲ ಗೃಹಲಕ್ಷ್ಮಿ ಯೋಜನೆ ಹಣ
ಅದೇ ರೀತಿಯಲ್ಲಿ ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮಾರ್ಚ್ ತಿಂಗಳಲ್ಲಿ ಪಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಇನ್ನುಮುಂದೆ ಗೃಹಲಕ್ಷ್ಮಿ ಯೋಜನೆ ಹಣ ಪಡೆಯದ ಮಹಿಳೆಯರ ಪಟ್ಟಿ ಈ ರೀತಿಯಲ್ಲಿದೆ.
* ಬ್ಯಾಂಕ್ ಖಾತೆಗೆ KYC ಅಪ್ಡೇಟ್ ಮಾಡದ ಮಹಿಳೆಯರು
* ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಲಿಂಕ್ ಮಾಡದ ಮಹಿಳೆಯರು
* ಬ್ಯಾಂಕ್ ಖಾತೆಗೆ ಪಾನ್ ಸಂಖ್ಯೆ ಲಿಂಕ್ ಮಾಡದ ಮಹಿಳೆಯರು
* ಬ್ಯಾಂಕ್ ಖಾತೆಗೆ ಇನ್ನೂ ಕೂಡ ಮೊಬೈಲ್ ಸಂಖ್ಯೆ ಲಿಂಕ್ ಮಾಡದ ಮಹಿಳೆಯರು
* ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಮಾಡದ ಮಹಿಳೆಯರು
* BPL ರೇಷನ್ ಕಾರ್ಡ್ ರದ್ದಾದ ಮಹಿಳೆಯರು

ಮೇಲ್ಕಂಡ ಎಲ್ಲಾ ಮಹಿಳೆಯರು ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆ ಹಣ ಪಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಸರ್ಕಾರ ಈ ಮೂಲಕ ಆದೇಶವನ್ನ ಕೂಡ ಹೊರಡಿಸಿದೆ. ಮಹಿಳೆಯರು BDT ಕರ್ನಾಟಕ ಅಪ್ಲಿಕೇಶನ್ ಇನ್ಸ್ಟಾಲ್ ಮಾಡಿಕೊಂಡು ಮೊಬೈಲ್ ಸಂಖ್ಯೆ ಹಾಕಿ ಲಾಗಿನ್ ಮಾಡಿಕೊಂಡು ಗೃಹಲಕ್ಷ್ಮಿ ಯೋಜನೆ ಸ್ಟೇಟಸ್ ಮತ್ತು ಮಾಹಿತಿಯನ್ನು ಸಂಪೂರ್ಣವಾಗಿ ಚೆಕ್ ಮಾಡಿಕೊಳ್ಳಬಹುದು. ಮಾರ್ಚ್ ತಿಂಗಳ ಎರಡನೆಯ ವಾರದಲ್ಲಿ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಇರುವ ಹಣ ಜಮಾ ಆಗಲಿದ್ದು ಯಾವುದೇ ಮಹಿಳೆಯರು ಅನುಮಾನ ಹೊರಹಾಕುವ ಅಗತ್ಯ ಇಲ್ಲ.

Leave a Comment