Gruha Lakshmi Scheme Rules: ಕರ್ನಾಟಕ ಕಾಂಗ್ರೆಸ್ ಸರ್ಕಾರ (Karnataka Congress Government) ಜಾರಿಗೆ ತಂಡ ಪ್ರಮುಖವಾದ ಯೋಜನೆಯಲ್ಲಿ ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಕೂಡ ಒಂದು. ರಾಜ್ಯದಲ್ಲಿ ಸುಮಾರು 2 ಕೋಟಿಗೂ ಅಧಿಕ ಮಹಿಳೆಯರು ಈ ಗೃಹಲಕ್ಷ್ಮಿ ಯೋಜನೆ ಲಾಭ ಪಡೆದುಕೊಳ್ಳುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ರಾಜ್ಯ ಮಹಿಳೆಯರು ಪ್ರತಿ ತಿಂಗಳು 2000 ರೂ ಪಡೆದುಕೊಳ್ಳುತ್ತಿದ್ದಾರೆ. BPL ರೇಷನ್ ಕಾರ್ಡ್ (BPL Ration Cards) ಹೊಂದಿರುವ ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಎರಡು ಸಾವಿರ ರೂ ಹಣ ಪಡೆದುಕೊಳ್ಳುತ್ತಿದ್ದಾರೆ. ಸದ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಕೆಲವು ಹೊಸ ನಿಯಮ ಜಾರಿಗೆ ತಂದಿದೆ ಮತ್ತು ಈಗ ಇನ್ನೊಂದು ಹೊಸ ನಿಯಮ ಜಾರಿಗೆ ತರಲು ಮುಂದಾಗಿದೆ.
ಇನ್ಮುಂದೆ ಈ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ ಯೋಜನೆ 2000 ರೂ
ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹೊಸ ನಿಯಮ ಮತ್ತು ಆದೇಶ ಹೊರಡಿಸಿದೆ ಮತ್ತು ಹೊಸ ನಿಯಮದ ಅಡಿಯಲ್ಲಿ ಈ ಮಹಿಳೆಯರು ಇನ್ನುಮುಂದೆ ಗೃಹಲಕ್ಷ್ಮಿ ಯೋಜನೆಯ 2000 ರೂ ಹಣವನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ. ಹಾಗಾದರೆ ಯಾವ ಮಹಿಳೆಯರು ಇನ್ನುಮುಂದೆ ಗೃಹಲಕ್ಷ್ಮಿ ಯೋಜನೆಯ 2000 ರೂ ಹಣ ಪಡೆದುಕೊಳ್ಳಲು ಸಾಧ್ಯವಿಲ್ಲ ಅನ್ನುವುದರ ಬಗ್ಗೆ ಮಾಹಿತಿ ಇಲ್ಲಿದೆ.
* ಯಾವ ಮಹಿಳೆಯರೂ ಇನ್ನೂ ಕೂಡ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸಿಕೊಂಡಿಲ್ಲವೋ ಅವರ ಖಾತೆಗೆ ಇನ್ನುಮುಂದೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗುವುದಿಲ್ಲ.
* ಬ್ಯಾಂಕ್ ಖಾತೆಗೆ ಪಾನ್ ಕಾರ್ಡ್ ಲಿಂಕ್ ಮಾಡದ ಮಹಿಳೆಯರು ಇನ್ನುಮುಂದೆ ಗೃಹಲಕ್ಷ್ಮಿ ಯೋಜನೆ ಹಣ ಪಡೆದುಕೊಳ್ಳಲು ಸಾಧ್ಯವಿಲ್ಲ.
* ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಮಾಡಿಸಿಕೊಳ್ಳದ ಮಹಿಳೆಯರು ಇನ್ನುಮುಂದೆ ಗೃಹಲಕ್ಷ್ಮಿ ಯೋಜನೆ ಹಣ ಪಡೆದುಕೊಳ್ಳಲು ಸಾಧ್ಯವಿಲ್ಲ.
* BPL ರೇಷನ್ ಕಾರ್ಡ್ ರದ್ದಾದ ಕುಟುಂಬದ ಮಹಿಳೆಯರು ಇನ್ನುಮುಂದೆ ಗೃಹಲಕ್ಷ್ಮಿ ಯೋಜನೆ ಹಣ ಪಡೆದುಕೊಳ್ಳಲು ಸಾಧ್ಯವಿಲ್ಲ.
* ಬ್ಯಾಂಕ್ ಖಾತೆಗೆ ಮೊಬೈಲ್ ಸಂಖ್ಯೆ ಲಿಂಕ್ ಮಾಡದ ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಹಣ ಪಡೆದುಕೊಳ್ಳಲು ಸಾಧ್ಯವಿಲ್ಲ.
* ಬ್ಯಾಂಕ್ ಖಾತೆಗೆ KYC ಅಪ್ಡೇಟ್ ಮಾಡದ ಮಹಿಳೆಯರು ಇನ್ನುಮುಂದೆ ಗೃಹಲಕ್ಷ್ಮಿ ಯೋಜನೆ ಹಣ ಪಡೆದುಕೊಳ್ಳಲು ಸಾಧ್ಯವಿಲ್ಲ

27 ಲಕ್ಷ BPL ರೇಷನ್ ಕಾರ್ಡ್ ರದ್ದು
ರಾಜ್ಯ ಸರ್ಕಾರ ಸದ್ಯ 27 BPL ರೇಷನ್ ಕಾರ್ಡುಗಳನ್ನು ರದ್ದು ಮಾಡಿದೆ. ಹೌದು ಸರ್ಕಾರೀ ನೌಕರಿಯಲ್ಲಿ ಇರುವವರು, ಸ್ವಂತ ಬಿಸಿನೆಸ್ ಮಾಡುವವರು ಮತ್ತು ಆದಾಯ ತೆರಿಗೆ ಪಾವತಿ ಮಾಡುವವರು ಕೂಡ BPL ರೇಷನ್ ಕಾರ್ಡ್ ಪಡೆದುಕೊಂಡಿರುವುದು ಈಗ ಸರ್ಕಾರದ ಗಮನಕ್ಕೆ ಬಂದಿದೆ. ಸದ್ಯ ರಾಜ್ಯ ಸರ್ಕಾರ ಬಡತನ ರೇಖೆಗಿಂತ ಮೇಲೆ ಇದ್ದ ಕುಟುಂಬದವರು ಕೂಡ BPL ರೇಷನ್ ಮಾಡಿಸಿಕೊಂಡಿದ್ದು ಅಂತಹ ಕುಟುಂಬಗಳ ರೇಷನ್ ಕಾರ್ಡ್ ರದ್ದು ಮಾಡಿದೆ.
ಮೂಲಗಳಿಂದ ತಿಳಿದುಬಂದಿರುವ ಮಾಹಿತಿಯ ಪ್ರಕಾರ ಸುಮಾರು 27 ಲಕ್ಷ BPL ರೇಷನ್ ಕಾರ್ಡುಗಳನ್ನ ರದ್ದು ಮಾಡಲಾಗಿದೆ. ಅದೇ ರೀತಿಯಲ್ಲಿ ಯಾರು ಬಡತನ ರೇಖೆಗಿಂತ ಮೇಲೆ ಇದ್ದು ಅವರು BPL ರೇಷನ್ ಕಾರ್ಡ್ ಮಾಡಿಸಿಕೊಂಡಿದ್ದರೋ ಅವರು ತಕ್ಷಣ ತಮ್ಮ ರೇಷನ್ ಕಾರ್ಡ್ ಅನ್ನು APL ಆಗಿ ಪರಿವರ್ತನೆ ಮಾಡಿಕೊಳ್ಳಬೇಕು, ಇಲ್ಲವಾದರೆ ಅವರ ಮೇಲೆ ಕೇಸ್ ದಾಖಲು ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.