Karnataka Budget Details: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ (Siddaramaiah) ಅವರು ಈಗ ತಮ್ಮ 16 ನೇ ಬಜೆಟ್ (karnataka Budget) ಅನ್ನು ಘೋಷಣೆ ಮಾಡಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರು 2025 ನೇ ಸಾಲಿನ ಬಜೆಟ್ ಘೋಷಣೆ ಮಾಡಿದ್ದಾರೆ ಮತ್ತು ಬಜೆಟ್ ಕೆಲವು ವರ್ಗದ ಜನರಿಗೆ ಗುಡ್ ನ್ಯೂಸ್ ನೀಡಿದರೆ ಇನ್ನೂ ಕೆಲವು ವರ್ಗದ ಜನರಿಗೆ ಬೇಸರದ ಸುದ್ದಿ ನೀಡಿದೆ. ಹೌದು, ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ ಬಜೆಟ್ ನಲ್ಲಿ ಹಲವು ಹೊಸ ಕಾರ್ಯಕ್ರಮಕ್ಕೆ ಅನುಷ್ಠಾನ ಮಾಡಲಾಗಿದೆ. ಈ ನಡುವೆ 2025 ರ ಬಜೆಟ್ ರಾಜ್ಯದಲ್ಲಿ ಮದ್ಯಪ್ರಿಯರಿಗೆ ಬೇಸರದ ಸುದ್ದಿಯನ್ನು ನೀಡಿದೆ.
ತಮ್ಮ 16 ನೇ ಬಜೆಟ್ ಘೋಷಣೆ ಮಾಡಿದ ಸಿದ್ದರಾಮಯ್ಯ
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 16 ನೇ ಅತೀ ದೊಡ್ಡ ಬಜೆಟ್ ಘೋಷಣೆ ಮಾಡಿದ್ದಾರೆ. ಇನ್ನು ಈ ಬಜೆಟ್ ನಲ್ಲಿ ಹಲವು ಯೋಜನೆಗಳಿಗೆ ಹಣವನ್ನು ಹೂಡಿಕೆ ಮಾಡುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಾರೆ. ಎತ್ತಿನಹೊಳೆ ಯೋಜನೆಗೆ 553 ಕೋಟಿ ರೂಪಾಯಿ ಹಣವನ್ನು ಮೀಸಲು ಇಡಲಾಗಿದೆ. ಅದೇ ರೀತಿಯಲ್ಲಿ ಅತಿಥಿ ಶಿಕ್ಷಕರ ವೇತನ ಹೆಚ್ಚಳ ಮಾಡುವ ಕುರಿತಂತೆ ನಿರ್ಧಾರ ಕೂಡ ತಗೆದುಕೊಳ್ಳಲಾಗುತ್ತಿದೆ. 1080 ಕೋಟಿ ರೂ ವೆಚ್ಚದಲ್ಲಿ ವೃಷಭಾವತಿ ವ್ಯಾಲಿ ಯೋಜನೆಗೆ ಚಾಲನೆ ಕೂಡ ನೀಡಲಾಗಿದೆ.

ಮದ್ಯಪ್ರಿಯರಿಗೆ ಬೇಸರದ ಸುದ್ದಿ
16 ನೇ ಬಜೆಟ್ ಘೋಷಣೆ ಮಾಡಿರುವ ಸಿದ್ದರಾಮಯ್ಯ ಅವರು ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಯ ಬಗ್ಗೆ ಕೂಡ ಮಾತನಾಡಿದ್ದಾರೆ. ರಾಜ್ಯ ಸರ್ಕಾರ ಈಗ ಅಬಕಾರಿ ಇಲಾಖೆಗೆ 36,500 ಕೋಟಿ ರೂ ಆದಾಯದ ಟಾರ್ಗೆಟ್ ನೀಡಿದೆ. ಅದೇ ರೀತಿಯಲ್ಲಿ ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಯ ಬಗ್ಗೆ ಕೂಡ ಸಿದ್ದರಾಮಯ್ಯ ಅವರು ಮಾತನಾಡಿದ್ದು ಮದ್ಯದ ಬೆಲೆ ಇನ್ನಷ್ಟು ಏರಿಕೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ಮತ್ತೆ ಮದ್ಯದ ಬೆಲೆ ಏರಿಕೆಯಾದರೆ ಇದು ರಾಜ್ಯದ ಮದ್ಯಪ್ರಿಯರ ಬೇಸರಕ್ಕೆ ಕಾರಣವಾಗಲಿದೆ. ಈಗಾಗಲೇ ರಾಜ್ಯ ಸರ್ಕಾರದ 5 ಗ್ಯಾರೆಂಟಿ ಯೋಜನೆಗಳ ಅನುಷ್ಠಾನದ ಉದ್ದೇಶದಿಂದ ರಾಜ್ಯದಲ್ಲಿ ಸಾಕಷ್ಟು ಮದ್ಯದ ಬೆಲೆ ಏರಿಕೆ ಮಾಡಿದೆ. ಈಗ ಮತ್ತೆ ಅಬಕಾರಿ ಇಲಾಖೆಗೆ 36,500 ಕೋಟಿ ರೂ ಟಾರ್ಗೆಟ್ ನೀಡಲಾಗಿದ್ದು ಇದರಿಂದ ಮದ್ಯದ ಮೇಲೆ ಇನ್ನಷ್ಟು ಏರಿಕೆ ಆಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಹೇಳಬಹುದು.
ಅಲ್ಪಸಂಖ್ಯಾತರಿಗೆ ಮೀಸಲಾತಿ ಘೋಷಣೆ
ಹೌದು, ಸಿದ್ದರಾಮಯ್ಯ ಅವರು 16 ನೇ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಘೋಷಣೆ ಮಾಡಿದ್ದಾರೆ. ಸರ್ಕಾರೀ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲಾಗುತ್ತದೆ ಎಂದು ಬಜೆಟ್ ಘೋಷಣೆ ಮಾಡಿದ್ದಾರೆ ಸಿದ್ದರಾಮಯ್ಯ ಅವರು. ಅದೇ ರೀತಿಯಲ್ಲಿ SC-ST ಸಮುದಾಯದವರಿಗೆ 2 ಕೋಟಿ ರೂ ವರೆಗಿನ ಕಾಮಗಾರಿ ಮೀಸಲಾತಿ ನೀಡಲಾಗುವುದು ಎಂದು ಎಂದು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.