Karnataka Budget Complete Details: 2025 ರ ವರ್ಷದಲ್ಲಿ ದಾಖಲೆಯ ಬಜೆಟ್ (Karnataka Budget) ಮಂಡನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ರಾಜ್ಯದ ಎಲ್ಲಾ ರೈತರಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ ಎಂದು ಹೇಳಬಹುದು. ಈ ಬಾರಿಯ ಬಜೆಟ್ ನಲ್ಲಿ ಹಲವು ಯೋಜನೆಗಳ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ರೈತರಿಗಾಗಿ ಹೊಸ ಯೋಜನೆಯನ್ನ ಜಾರಿಗೆ ತರುವುದರ ಮೂಲಕ 2025 ವರ್ಷದಲ್ಲಿ ರಾಜ್ಯದ ರೈತರಿಗೆ ಬಂಪರ್ ಉಡುಗೊರೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 16 ನೇ ಬಹುದೊಡ್ಡ ಬಜೆಟ್ ಘೋಷಣೆ ಮಾಡಿದ್ದು ಈ ಸಮಯದಲ್ಲಿ ರೈತರ ಸಾಲಮನ್ನಾ ಕೂಡ ಮಾಡಿದ್ದಾರೆ.
ರೈತರ ಸಾಲ ಮನ್ನಾ ಮಾಡಿದ ಸಿದ್ದರಾಮಯ್ಯ
ಬಜೆಟ್ ನಲ್ಲಿ ಹಲವು ಯೋಜನೆಗಳನ್ನು ಅನುಷ್ಠಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಬ್ಯಾಂಕುಗಳನ್ನು ಇರುವ ರೈತರ ಸಾಲ ಮನ್ನಾ ಮಾಡಿದ್ದಾರೆ. ಇನ್ನು ರೈತರ ಸಾಲ ಮನ್ನಾ ಮಾಡಲು ಸಿದ್ದರಾಮಯ್ಯ ಅವರು ಸುಮಾರು 240 ಕೋಟಿ ರೂಪಾಯಿಯನ್ನು ಬಜೆಟ್ ನಲ್ಲಿ ಬಿಡುಗಡೆ ಮಾಡಿದ್ದಾರೆ. ಅದೇ ರೀತಿಯಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕೃಷಿ ಚಟುವಟಿಕೆಯನ್ನು ಇನ್ನಷ್ಟು ಮುಂದುವರೆಸುವ ಉದ್ದೇಶದಿಂದ ರಾಜ್ಯದ ಸುಮಾರು 37 ಲಕ್ಷ ರೈತರಿಗೆ 28000 ಕೋಟಿ ರೂಪಾಯಿ ಸಾಲ ಕೂಡ ಬಿಡುಗಡೆ ಮಾಡಿದ್ದಾರೆ.
ಈ ಎರಡು ಬ್ಯಾಂಕಿನಲ್ಲಿ ಸಾಲ ಮಾಡಿದ ರೈತರ ಸಾಲ ಮನ್ನಾ
ಹೌದು, ಬಜೆಟ್ ನಲ್ಲಿ ಸಾಲ ಮನ್ನಾ ಘೋಷಣೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು DCC ಬ್ಯಾಂಕ್ ಮತ್ತು ಪಿಕಾರ್ಡ್ ಬ್ಯಾಂಕಿನಲ್ಲಿ ಸಾಲ ಮಾಡಿದ ರೈತರು ಇನ್ನುಮುಂದೆ ಸಾಲಕ್ಕೆ ಬಡ್ಡಿಕಟ್ಟುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. ಈ ಎರಡು ಬ್ಯಾಂಕುಗಳಲ್ಲಿ ಇರುವ ರೈತರ ಸಾಲದ ಸಂಪೂರ್ಣ ಬಡ್ಡಿ ಮನ್ನಾ ಮಾಡಲು ಈಗ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ ಮತ್ತು ರೈತರ ಸಾಲಗಳ ಬಡ್ಡಿ ಮನ್ನಾ ಮಾಡಲು ಸುಮಾರು 240 ಕೋಟಿ ರೂಪಾಯಿಯನ್ನು ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ದಾರೆ.
ರೈತರ ಅಭಿವೃದ್ಧಿಗೆ ಇನ್ನಷ್ಟು ಕೋಟಿ ಸಾಲ ಬಿಡುಗಡೆ
ಮುಂದಿನ ದಿನಗಳಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ಸಮಯ ಆಗಬಾರದು ಅನ್ನುವ ಉದ್ದೇಶದಿಂದ ಸಿದ್ದರಾಮಯ್ಯ ಅವರು ರೈತರಿಗಾಗಿ ಮತ್ತಷ್ಟು ಸಾಲವನ್ನು ಕೊಡುವ ಯೋಜನೆ ಬಿಡುಗಡೆ ಮಾಡಿದ್ದಾರೆ ಮತ್ತು ಅದಕ್ಕಾಗಿ ಸುಮಾರು 28000 ಕೋಟಿ ರೂಪಾಯಿ ಅನುದಾನ ಕೂಡ ಬಿಡುಗಡೆ ಮಾಡಲಾಗಿದೆ. ಈ ಬಾರಿಯ ಬಜೆಟ್ ರೈತರಿಗೆ ಸಾಕಷ್ಟು ಪ್ರಯೋಜನವನ್ನು ಉಂಟುಮಾಡಿದೆ. ರೈತರಿಗಾಗಿ ಈ ಬಾರಿಯ ಬಜೆಟ್ ನಲ್ಲಿ ಹಲವು ಯೋಜನೆ ಬಿಡುಗಡೆ ಮಾಡಲಾಗಿದ್ದು ಇದು ರೈತರ ಸಂಸತಕ್ಕೆ ಕಾರಣವಾಗಿದೆ.