Akka Co-Operative Society: ರಾಜ್ಯ ಸರ್ಕಾರ ಬಹುದೊಡ್ಡ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ (Gruha Lakshmi Scheme) ಈಗ ಬಹುದೊಡ್ಡ ಬದಲಾವಣೆ ಮಾಡಲಾಗಿದೆ. ಸಿದ್ದರಾಮಯ್ಯ (Siddaramaiah) ಸರ್ಕಾರ ಈಗ ಗೃಹಲಕ್ಷ್ಮಿ ಯೋಜನೆಯಲ್ಲಿ ಮೇಜರ್ ಸರ್ಜರಿ ಮಾಡಿದ್ದಾರೆ ಎಂದು ಹೇಳಬಹುದು. ಹೌದು, ಕಳೆದ ಎರಡು ತಿಂಗಳಿಂದ ರಾಜ್ಯದ ಯಾವುದೇ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲ. ಹಣ ಜಮಾ ಆಗದ ಕಾರಣ ಸಾಕಷ್ಟು ಮಹಿಳೆಯರು ರಾಜ್ಯ ಸರ್ಕಾರದ ಬಳಿ ಮನವಿ ಕೂಡ ಮಾಡಿಕೊಂಡಿದ್ದರು. ಇದರ ನಡುವೆ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಕೂಡ ಮಾಡಿದ್ದಾರೆ. ಇನ್ನು ಈ ಬಾರಿಯ ಕರ್ನಾಟಕ ಬಜೆಟ್ (Karnataka Budget) ನಲ್ಲಿ ಸಿದ್ದರಾಮಯ್ಯ ಅವರು ಗೃಹಲಕ್ಷ್ಮಿ ಯೋಜನೆಯಲ್ಲಿ ಬಹುದೊಡ್ಡ ಬದಲಾವಣೆ ಮಾಡಿದ್ದಾರೆ.
ಇನ್ನುಮುಂದೆ ಮಹಿಳೆಯರ ಖಾತೆಗೆ ಸುಲಭವಾಗಿ ಬರಲಿದೆ ಹಣ
ಈ ಹಿಂದೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು DBT ಕರ್ನಾಟಕ ಮೂಲಕ ರಾಜ್ಯದ ಮಹಿಳೆಯರ ಖಾತೆಗೆ ಜಮಾ ಮಾಡುವ ಕೆಲಸವನ್ನು ಸರಕಾರ ಮಾಡುತ್ತಿತ್ತು, ಆದರೆ ಈಗ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಲು ರಾಜ್ಯ ಸರ್ಕಾರ ಬೇರೆ ವಿಧಾನವನ್ನು ಜಾರಿಗೆ ತಂದಿದೆ. ಹೌದು, ಜಾರಿಗೆ ಬಂದಿರುವ ಹೊಸ ವಿಧಾನದಿಂದ ಇನ್ನುಮುಂದೆ ರಾಜ್ಯದ ಮಹಿಳೆಯರ ಖಾತೆಗೆ ಸುಲಭವಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಲಿದೆ.

ಅಕ್ಕ ಕೋ ಆಪರೇಟಿವ್ ಸೊಸೈಟಿ ಮೂಲಕ ಹಣ ಜಮಾ
ಸದ್ಯ ಸಿದ್ದರಾಮಯ್ಯ ಅವರು ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಮಾಡುವುದಕ್ಕೆ ಸಂಬಂಧಿಸಿದಂತೆ ಹೊಸ ಆದೇಶ ಹೊರಡಿಸಿದ್ದಾರೆ ಮತ್ತು ಹೊಸ ಆದೇಶದ ಪ್ರಕಾರ ಮುಂದಿನ ದಿನಗಳಲ್ಲಿ ಅಕ್ಕ ಕೋ ಆಪರೇಟಿವ್ ಸೊಸೈಟಿ ಮೂಲಕ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಮಾಡುವ ಕೆಲಸ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇನ್ನುಮುಂದೆ ಪ್ರತಿ ತಿಂಗಳು ನಿಗದಿತ ದಿನಾಂಕದಂದು ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಮಾಡುವ ಕೆಲಸ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡುವ ಸಮಯದಲ್ಲಿ ಹೇಳಿದ್ದಾರೆ.
ಈ ಮಹಿಳೆಯರ ಖಾತೆಗೆ ಜಮಾ ಆಗಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
ಇನ್ನು ರಾಜ್ಯ ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ ಇನ್ನುಮುಂದೆ ಈ ಕೆಲಕಂಡ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುವುದಿಲ್ಲ.
* ಬ್ಯಾಂಕ್ ಖಾತೆಗೆ ಇನ್ನೂ ಕೂಡ KYC ಅಪ್ಡೇಟ್ ಮಾಡದ ಮಹಿಳೆಯರು
* ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ ಲಿಂಕ್ ಮಾಡದ ಮಹಿಳೆಯರು.
* ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಮಾಡಿಸದ ಮಹಿಳೆಯರ ಖಾತೆಗೆ
* ಆಧಾರ್ ಸಂಖ್ಯೆ ಮತ್ತು ಪಾನ್ ಸಂಖ್ಯೆ ಲಿಂಕ್ ಮಾಡದ ಮಹಿಳೆಯರ ಖಾತೆಗೆ
* IFSC ಸಂಖ್ಯೆಯಯನ್ನು ತಪ್ಪಾಗಿ ನೀಡಿದ ಮಹಿಳೆಯರ ಖಾತೆಗೆ.