Gruha Lakshmi Scheme: ಮಹಿಳಾ ದಿನಾಚರಣೆಯ ದಿನವೇ ಗೃಹಲಕ್ಷ್ಮಿ ಯೋಜನೆಯ ಬಿಗ್ ಅಪ್ಡೇಟ್, ಖಾತೆಗೆ 6000 ರೂ ಬಿಡುಗಡೆ

Lakshmi Hebbalkar Interview: ರಾಜ್ಯದ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಈಗ ಮಹಿಳಾ ದಿನಾಚರಣೆಯ ದಿನವೇ ರಾಜ್ಯದ ಎಲ್ಲ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಹೌದು ಕಳೆದ ಎರಡು ತಿಂಗಳಿಂದ ರಾಜ್ಯದ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಹಣ ಜಮಾ ಆಗಿಲ್ಲ. ಇನ್ನು ರಾಜ್ಯ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಹಣ ಆಗದ ಕಾರಣ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ರದ್ದು ಮಾಡಿದೆ ಅನ್ನುವ ಅನುಮಾನವನ್ನು ಕೂಡ ಹೊರಹಾಕಿದ್ದರು. ಸದ್ಯ ಈಗ ರಾಜ್ಯದ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಎಲ್ಲಾ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.

WhatsApp Group Join Now
Telegram Group Join Now

ಮಹಿಳಾ ದಿನಾಚರಣೆಯ ದಿನವೇ ಸಿಹಿಸುದ್ದಿ
ದೇಶದಲ್ಲಿ ಇಂದು ಮಹಿಳಾ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ. ಇನ್ನು ಮಹಿಳಾ ದಿನಾಚರಣೆಯ ಅಂಗವಾಗಿ ಮಾಧ್ಯಮದ ಜೊತೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ. ಹೌದು, ಮಾಧ್ಯಮದ ಮುಂದೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೆಲವು ತಾಂತ್ರಿಕ ದೋಷಗಳ ಕಾರಣ ಗೃಹಲಕ್ಷ್ಮಿ ಯೋಜನೆಯ ಹಣ ಭಾಕಿ ಉಳಿದುಕೊಂಡಿದೆ ಎಂದು ಹೇಳಿದ್ದಾರೆ. ಸದ್ಯ ಈಗ ಬಜೆಟ್ ಕೂಡ ಘೋಷಣೆ ಮಾಡಲಾಗಿದೆ ಮತ್ತು ಬಜೆಟ್ ನಲ್ಲಿ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ದೊಡ್ಡ ನಿರ್ಧಾರ ಕೂಡ ಸಿದ್ದರಾಮಯ್ಯ ಅವರು ಮಾಡಿದ್ದಾರೆ ಎಂದು ಹೇಳಿದ್ದಾರೆ.

Gurha lakshmi scheme pending money release
Gruha lakshmi scheme pending money details

ಮಹಿಳೆಯರ ಭಾಕಿ ಇರುವ ಎಲ್ಲ ಹಣ ಜಮಾ
ಹೌದು, ಮಾಧ್ಯಮದ ಮುಂದೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದ್ಯ ಭಾಕಿ ಇರುವ ಎಲ್ಲಾ ಹಣವನ್ನು ಮುಂದಿನ ಒಂದು ವಾರದಲ್ಲಿ ಫಲಾನುಭವಿಗಳ ಖಾತೆಗೆ ಜಮಾ ಮಾಡುವ ಕೆಲಸ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಮಾರ್ಚ್ ತಿಂಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಭಾಕಿ ಇರುವ ಹಣ ಬಿಡುಗಡೆ ಆಗಲಿದೆ ಮತ್ತು ಮಹಿಳೆಯರು ಅನುಮಾನ ಹೊರಹಾಕುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು.

ಕಾಂಗ್ರೆಸ್ ಅಧಿಕಾರದಲ್ಲಿ ಇರುವ ತನಕ ಯೋಜನೆ ರದ್ದಾಗಲ್ಲ

BJP ಯವರು ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳು ರದ್ದಾಗುತ್ತದೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ, ಆದರೆ ಕಾಂಗ್ರೆಸ್ ಕರ್ನಾಟಕದಲ್ಲಿ ಅಧಿಕಾರದಲ್ಲಿ ಇರುವ ತನಕ ತಗೆದುಕೊಂಡ ಯಾವುದೇ ಯೋಜನೆ ರದ್ದಾಗುವುದಿಲ್ಲ ಎಂದು ಹೇಳುವುದರ ಮೂಲಕ ರಾಜ್ಯದ ಎಲ್ಲಾ ಮಹಿಳೆಯರಿಗೆ ಈ ಮೂಲಕ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುಡ್ ನ್ಯೂಸ್ ನೀಡಿದ್ದಾರೆ.

ಮಹಿಳೆಯರ ಖಾತೆಗೆ 6000 ರೂ ಜಮಾ

ಇನ್ನು ಗೃಹಲಕ್ಷ್ಮಿ ಯೋಜನೆಯ ಜನವರಿ, ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣವಾಗಿ ರಾಜ್ಯದ ಮಹಿಳೆಯರು ಮಾರ್ಚ್ ತಿಂಗಳಲ್ಲಿ ಬರೋಬ್ಬರಿ 6000 ರೂ ಹಣವನ್ನು ಪಡೆದುಕೊಳ್ಳಲಿದ್ದಾರೆ. ರಾಜ್ಯದ ಮಹಿಳೆಯರ ಖಾತೆಗೆ ಭಾಕಿ ಇರುವ ಎಲ್ಲಾ ಹಣ ಜಮಾ ಮಾಡುವ ಕೆಲಸ ಮಾಡಲಾಗುತ್ತಿದ್ದು ಮಾರ್ಚ್ ತಿಂಗಳ ಮೂರನೇ ವಾರದ ಒಳಗಾಗಿ ರಾಜ್ಯದ ಎಲ್ಲಾ ಮಹಿಳೆಯರು 6000 ರೂ ಹಣ ಪಡೆದುಕೊಳ್ಳಲಿದ್ದಾರೆ. ಬಜೆಟ್ ನಲ್ಲಿ ಇನ್ನೊಂದು ಘೋಷಣೆ ಮಾಡಲಾಗಿದೆ ಮತ್ತು ಮುಂದಿನ ದಿನಗಳಲ್ಲಿ DBT ಕರ್ನಾಟಕ ಬದಲಾಗಿ ಅಕ್ಕ ಕೋ ಆಪರೇಟಿವ್ ಸೊಸೈಟಿ (Akka Co-Operative Society) ಮೂಲಕ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಮಾಡಲಾಗುತ್ತದೆ.

Leave a Comment