Today Rain: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಿಡಿಲು ಸಹಿತ ಭಾರೀ ಮಳೆ, ಹವಾಮಾನ ಇಲಾಖೆ ಎಚ್ಚರಿಕೆ

Rain Today: ರಾಜ್ಯದಲ್ಲಿ ಬೇಸಿಗೆ ಹೆಚ್ಚಾದ ಬೆನ್ನಲ್ಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವುದು ನೀವೆಲ್ಲ ನೋಡುತ್ತಿದ್ದೀರಿ. ಮಾರ್ಚ್ 12 ನೇ ತಾರೀಕಿಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುದ್ದು ಜನಜೀವನ ಕೂಡ ಕಷ್ಟವಾಗಿತ್ತು. ಸದ್ಯ ಹವಾಮಾನ ಇಲಾಖೆ ಈಗ ಇನ್ನೊಂದು ಸೂಚನೆ ನೀಡಿದೆ ಮತ್ತು ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ಕೂಡ ನೀಡಿದೆ. ಮಾರ್ಚ್ ತಿಂಗಳ 12 ರಿಂದ 14 ರ ತನಕ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

WhatsApp Group Join Now
Telegram Group Join Now

ರಾಜ್ಯದ ಹೆಚ್ಚಾದ ಬೇಸಿಗೆ ಬಿಸಿ
ಹೌದು ಬೇಸಿಗೆ ಆರಂಭವಾದ ಬೆನ್ನಲ್ಲೇ ರಾಜ್ಯದಲ್ಲಿ ತಾಪಮಾನ ಬಹಳ ಹೆಚ್ಚಾಗಿದ್ದು ಸಾಕಷ್ಟು ಜಿಲ್ಲೆಗಳಲ್ಲಿ ಈಗಲೇ ನೀರಿನ ಸಮಸ್ಯೆ ಉಂಟಾಗಿದೆ. ಇದರ ನಡುವೆ ಮಾರ್ಚ್ 12 ಈ ತಾರೀಕಿನಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆ ಆಗಿದೆ. ಇಂದು ಕೂಡ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಪ್ರಮಾದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಈ ಜಿಲ್ಲೆಗಳಲ್ಲಿ ಆಗಲಿದೆ ಭಾರೀ ಮಳೆ
ರಾಜ್ಯದಲ್ಲಿ ಪೂರ್ವ ಮುಂಗಾರು ಬಹಳ ಬೇಗ ಆರಂಭ ಆಗಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಹವಾಮಾನ ವೈಪರೀತ್ಯ ಉಂಟಾದ ಕಾರಣ ಕರ್ನಾಕದಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಕರ್ನಾಟಕದ ಒಳನಾಡು ಆಗಿರುವ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಮೈಸೂರು ಮತ್ತು ಚಾಮರಾಜನಗರದಲ್ಲಿ ಇಂದು ಭಾರೀ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಳೆಯಿಂದ ತಂಪಾದ ವಾತಾವರಣ
ಹೌದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಕೆಲವು ಭಾಗಗಳಲ್ಲಿ ನಿನ್ನೆ ಭಾರಿ ಪ್ರಮಾಣದ ಮಳೆಯಾದ ಕಾರಣ ವಾತಾವರಣ ತಂಪಾಗಿದೆ. ಇನ್ನು ಇಂದು ಕೂಡ ರಾಜ್ಯದ ಹಲವು ಜಿಲ್ಲೆಯಲ್ಲಿ ಮಳೆಯಾಗಲಿದ್ದು ಈ ಮಳೆ ವಾತಾವರಣವನ್ನು ಇನ್ನಷ್ಟು ತಂಪಾಗಿಸುತ್ತದೆ.

Leave a Comment