Rain Alert: ಮುಂದಿನ 2 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ, ಯಲ್ಲೋ ಅಲರ್ಟ್

Karnataka Rain Alert: ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಕಾರಣ ಕರ್ನಾಟಕದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆ ಆಗುತ್ತಿರುವುದನ್ನು ನಾವು ಗಮನಿಸಬಹುದು. ರಾಜ್ಯದಲ್ಲಿ ಬೇಸಿಗೆ ಬಿಸಿ ಹೆಚ್ಚಾಗಿದೆ ಎಂದು ಹೇಳಬಹುದು, ಬೇಸಿಗೆ ಬಿಸಿ ಹೆಚ್ಚಾದ ಕಾರಣ ಹಲವು ಭಾಗಗಳಲ್ಲಿ ನೀರಿನ ಕೊರತೆ ಕೂಡ ಉಂಟಾಗಿದೆ. ಇದರ ನಡುವೆ ಈಗ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಉಂಟಾಗಿದೆ. ಹೌದು ಮಾರ್ಚ್ ತಿಂಗಳಲ್ಲಿ ಈಗ ಪೂರ್ವ ಮುಂಗಾರು ಆರಂಭ ಆಗಿದೆ ಮತ್ತು ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

WhatsApp Group Join Now
Telegram Group Join Now

ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ
ಹೌದು, ಕರ್ನಾಟಕದಲ್ಲಿ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಉಂಟಾದ ಕಾರಣ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಮೈಸೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗುಡುಗು ಸಿಡುಲು ಸಹೋತ ಭಾರಿ ಮಳೆ
ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಮುಂದಿನ ಎರಡು ಈ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಉತ್ತರಕನ್ನಡ ಸೇರಿದಂತೆ ಕೊಡಗು ಜಿಲ್ಲೆಗಳಲ್ಲಿ ಮುಂದಿನ ಎರಡು ಗುಡುಗು ಸಿಡುಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಎಚ್ಚರಿಕೆ ನೀಡಿದೆ. ಈ ಜಿಲ್ಲೆಗಳಲ್ಲಿ 40 ವೇಗದಲ್ಲಿ ಗಾಳಿ ಬಿಸಲಿದ್ದು ಮೀನುಗಾರರು ಎರಡು ದಿನ ಎಚ್ಚರಿಕೆಯಿಂದ ಇರಬೇಕಾಗಿದೆ.

ಅವಧಿಗೂ ಮುನ್ನವೇ ಬಂತು ಮುಂಗಾರು ಪೂರ್ವ ಮಳೆ
ಹೌದು, ಅವಧಿಗೂ ಮುನ್ನವೇ ಮುಂಗಾರು ಪೂರ್ವ ಮಳೆ ಆರಂಭ ಆಗಲಿದೆ. ಹವಾಮಾನ ಇಲಾಖೆ ತಿಳಿಸಿದೆ ಮತ್ತು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಮುಂಗಾರು ಬಹಳ ಬೇಗ ಆರಂಭ ಆಗಲಿದೆ ಮತ್ತು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ವರ್ಷಧಾರೆ ಬಹಳ ಉತ್ತಮವಾಗಿರಲಿದೆ.

Leave a Comment