Rain Alert: ಇಂದು ಮತ್ತು ನಾಳೆ ಈ 4 ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ, ರೆಡ್ ಅಲರ್ಟ್

Rain Alert: ಸದ್ಯ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಆರ್ಭಟ ಬಹಳ ಹೆಚ್ಚಾಗಿದೆ ಎಂದು ಹೇಳಬಹುದು. ಹೌದು, ಮುಂಗಾರು ಪೂರ್ವ ಮಳೆ ಆರಂಭ ಆಗಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದೆ. ರಾಜ್ಯದಲ್ಲಿ ಒಣಹವೆ ಹೆಚ್ಚಾಗಿದೆ ಮತ್ತು ಸಾಕಷ್ಟು ಜಿಲ್ಲೆಗಳಲ್ಲಿ ಈಗಾಗಲೇ ನೀರಿನ ಸಮಸ್ಯೆ ಉಂಟಾಗಿದೆ. ಹೌದು ರಾಜ್ಯದ ಬೇಸಿಗೆಯ ಬಿಸಿ ಹೆಚ್ಚಾಗಿದ್ದು ಸಾಕಷ್ಟು ಜಿಲ್ಲೆಗಳಲ್ಲಿ ಬಿಸಿಲಿನ ತಾಪಕ್ಕೆ ಜನರು ಕಂಗಾಲಾಗಿ ಹೋಗಿದ್ದಾರೆ ಎಂದು ಹೇಳಬಹುದು. ಇದರ ನಡುವೆ ಈಗ ರಾಜ್ಯ ಈ 4 ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಅನ್ನುವುದರ ಬಗ್ಗೆ ಮಾಹಿತಿ ಇಲ್ಲಿದೆ.

WhatsApp Group Join Now
Telegram Group Join Now

ರಾಜ್ಯದ ಈ 4 ಜಿಲ್ಲೆಗಳಲ್ಲಿ ಭರ್ಜರಿ ಮಳೆ
ಹೌದು, ಹವಾಮಾನ ಮೂಲಗಳಿಂದ ತಿಳಿದುಬಂದಿರುವ ಮಾಹಿತಿಯ ಪ್ರಕಾರ ರಾಜ್ಯದ ಈ 4 ಜಿಲ್ಲೆಗಳಲ್ಲಿ ಭಾರಿ ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಹಾಸನ, ಮೈಸೂರು, ದಕ್ಷಿಣಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ 4 ಜಿಲ್ಲೆಗಳಲ್ಲಿ ಭಾರೀ ಗುಡುಗು ಸಿಡಿಲು ಸಹಿತ ಮಳೆಯಾಗಲಿದ್ದು ಜನರ ಎಚ್ಚರದಿಂದ ಇರಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅವಧಿಗೂ ಮುನ್ನವೇ ಆರಂಭವಾದ ಮುಂಗಾರು ಪೂರ್ವ ಮಳೆ
ಹೌದು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಪ್ರಸ್ತುತ ವರ್ಷದಲ್ಲಿ ಅವಧಿಗೂ ಮುನ್ನವೇ ಮುಂಗಾರು ಪೂರ್ವ ಮಳೆ ಆರಂಭವಾಗಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು ಇನ್ನೂ ಕೂಡ ಸಾಕಷ್ಟು ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇದೆ ಎಂದು ಹೇಳಬಹುದು. ಅವಧಿಗೂ ಮುನ್ನವೇ ಮುಂಗಾರು ಪೂರ್ವ ಮಳೆ ಆರಂಭ ಆಗಿದ್ದು ಇದು ಜನರ ಸಂತಸಕ್ಕೆ ಕೂಡ ಕಾರಣವಾಗಿದೆ.

ಈ ವರ್ಷ ಬೇಗ ಆರಂಭ ಆಗಲಿದೆ ಮುಂಗಾರು ಮಳೆ
ಹವಾಮಾನ ಇಲಾಖೆಯ ವರದಿಯ ಪ್ರಕಾರ ಪ್ರಸ್ತುತ ವರ್ಷದಲ್ಲಿ ಅವಧಿಗೂ ಮುನ್ನವೇ ಮುಂಗಾರು ಮಳೆ ಆರಂಭ ಆಗಲಿದೆ. ಮೇ ತಿಂಗಳ ಮಧ್ಯದಲ್ಲಿ ಮುಂಗಾರು ಮಳೆ ಆರಂಭ ಆಗಲಿದ್ದು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಪ್ರಸ್ತುತ ವರ್ಷದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇಂದು ಮತ್ತು ನಾಳೆ ಮೈಸೂರು, ಕೊಡಗು, ಹಾಸನ ಮತ್ತು ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Comment