Gruha Lakshme Sheme Money Hike: ಕರ್ನಾಟಕ ಸರ್ಕಾರದ ಬಹುದೊಡ್ಡ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ (Gruha Lakshmi Scheme) ರಾಜ್ಯ ಮಹಿಳೆಯರು ಪ್ರತಿ ತಿಂಗಳು 2000 ರೂಪಾಯಿ ಹಣವನ್ನು ಪಡೆದುಕೊಳ್ಳುತ್ತಿದ್ದಾರೆ. ಹೌದು, ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ ರಾಜ್ಯದ ಎಲ್ಲಾ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ 2000 ರೂ ಜಮಾ ಮಾಡುವ ಘೋಷಣೆ ಮಾಡಿತ್ತು ಮತ್ತು ಕೊಟ್ಟ ಮಾತಿನಂತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದನಂತರ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತಂದಿತು. ಇದರ ನಡುಗೆ ಈಗ ಕರ್ನಾಟಕ ಸರ್ಕಾರ ಇನ್ನೊಂದು ಘೋಷಣೆಯನ್ನು ಮಾಡುವುದರ ಮೂಲಕ ರಾಜ್ಯದ ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದೆ. ಹೌದು, ಈಗ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮಹಿಳೆಯರ ಖಾತೆಗೆ 4000 ರೂ ಜಮಾ ಮಾಡಲು ಮುಂದಾಗಿದೆ.
ಮಹಿಳೆಯರ ಖಾತೆಗೆ ಬರಲಿದೆ ಗೃಹಲಕ್ಷ್ಮಿ 4000 ರೂ
ಹೌದು, ಗೃಹಲಕ್ಷ್ಮಿ ಯೋಜನೆಯ ಹಣವನ್ನು 4000 ರೂಪಾಯಿಗೆ ಏರಿಕೆ ಮಾಡುವ ಕುರಿತಂತೆ ಈಗ ವಿಧಾನಸಭೆಯಲ್ಲಿ ಚರ್ಚೆ ಮಾಡಲಾಗಿದೆ. ವಿಧಾನಸಭೆಯಲ್ಲಿ ಗ್ಯಾರೆಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಕುಣಿಗಲ್ ಶಾಸಕರಾದ ರಂಗನಾಥ್ ಅವರು ಗೃಹಲಕ್ಷ್ಮಿ ಯೋಜನೆಯ 2000 ರೂಪಾಯಿಯನ್ನು 4000 ರೂಪಾಯಿಗೆ ಏರಿಕೆ ಮಾಡುವುದರ ಚರ್ಚೆ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವ ತನಕ ರಾಜ್ಯದ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ 2000 ರೂ ಸಿಗುತ್ತದೆ ಮತ್ತು ಈ ಹಣ ಅದೆಷ್ಟೋ ಮಹಿಳೆಯರಿಗೆ ಆರ್ಥಿಕವಾಗಿ ಸಹಕಾರಿ ಕೂಡ ಆಗಿದೆ, ಈ ಕಾರಣಗಳಿಂದ ಮಹಿಳೆಯರ ಆರ್ಥಿಕ ಪರಿಸ್ಥಿತಿ ಸುಧಾರಿಸುವ ಉದ್ದೇಶದಿಂದ ಗೃಹಲಕ್ಷ್ಮಿ ಹಣವನ್ನು ಏರಿಕೆ ಮಾಡಬೇಕು ಎಂದು ಶಾಸಕರು ಹೇಳಿದ್ದಾರೆ.
ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಹಣ 4000 ಕ್ಕೆ ಏರಿಕೆ
ಇನ್ನು ಈ ಬಗ್ಗೆ ಮಾತನಾಡಿದ ಶಾಸಕರು 2028 ರಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಬಂದರೆ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ 4000 ರೂ ಜಮಾ ಮಾಡುವ ಬಗ್ಗೆ ತೀರ್ಮಾನ ತಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ. 2028 ರಲ್ಲಿ ಕಾಂಗ್ರೆಸ್ ಕರ್ನಾಟಕದಲ್ಲಿ ಅಧಿಕಾರ ಸ್ವೀಕಾರ ಮಾಡಿದರೆ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ 4000 ರೂ ಪಡೆದುಕೊಳ್ಳುವುದು ಗ್ಯಾರೆಂಟಿ ಎಂದು ಹೇಳಬಹುದು. ಸದ್ಯ ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ ಮತ್ತು ಈ ಹಣ ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯದ ಮಹಿಳೆಯರ ಖಾತೆಗೆ ಜಮಾ ಕೂಡ ಆಗಲಿದೆ.
ಪೆಂಡಿಂಗ್ ಉಳಿದುಕೊಂಡಿದೆ ಎರಡು ತಿಂಗಳ ಹಣ
ಗೃಹಲಕ್ಷ್ಮಿ ಯೋಜನೆಯ ಫೆಬ್ರವರಿ ತಿಂಗಳ ಹಣ ಬಾಕಿ ಉಳಿದುಕೊಂಡಿದ್ದು ಇದು ರಾಜ್ಯದ ಮಹಿಳೆಯರ ಬೇಸರಕ್ಕೆ ಕಾರಣವಾಗಿತ್ತು. ಸದ್ಯ ರಾಜ್ಯ ಸರ್ಕಾರ ಈಗ DBT ಕರ್ನಾಟಕ ಮೂಲಕ ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಹಣ ಬಿಡುಗಡೆ ಮಾಡಿದೆ. ಕೆಲವು ತಾಂತ್ರಿಕ ದೋಷಗಳ ಕಾರಣ ಹಣ ಬಾಕಿ ಉಳಿದುಕೊಂಡಿದ್ದು ಈಗ ಹಣ ಬಿಡುಗಡೆ ಮಾಡಲಾಗುತ್ತಿದೆ. ಮಹಿಳೆಯರು ಮುಂದಿನ ದಿನಗಳಲ್ಲಿ ಸಕ್ಕ ಕೋ-ಆಪರೇಟಿವ್ ಸೊಸೈಟಿ ಮೂಲಕ ಗೃಹಲಕ್ಷ್ಮಿ ಹಣ ಪಡೆದುಕೊಳ್ಳಲಿದ್ದಾರೆ.