Ayushman Bharat: ಇನ್ಮುಂದೆ ಇಂತವರಿಗೆ ಮಾತ್ರ ಆಯುಷ್ಮಾನ್ ಭಾರತ್ ಅಡಿಯಲ್ಲಿ ಸಿಗಲಿದೆ 5 ಲಕ್ಷ ಉಚಿತ, ಹೊಸ ರೂಲ್ಸ್

Ayushman Bharat Card New Update: ಬಡಜನರ ಜೀವ ಕಾಪಾಡುವ ಉದ್ದೇಶದಿಂದ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಪ್ರಮುಖವಾದ ಆರೋಗ್ಯ ಯೋಜನೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆ (Ayushman Bharat Scheme) ಪ್ರಮುಖವಾದ ಯೋಜನೆ ಎಂದು ಹೇಳಬಹುದು. ದೇಶದಲ್ಲಿ ಪ್ರತಿನಿತ್ಯ ಲಕ್ಷಾಂತರ ಬಡವರು ಈ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಉಚಿತ ಆರೋಗ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಬಹುದು. ಇದರ ನಡುವೆ ಆಯುಷ್ಮಾನ್ ಭಾರತ್ ಯೋಜನೆಗೆ ಸಂಬಂಧಿಸಿದಂತೆ ಈಗ ಕೇಂದ್ರ ಸರ್ಕಾರ ಕೆಲವು ಬದಲಾವಣೆಗಳನ್ನು ಜಾರಿಗೆ ತರಲು ಮುಂದಾಗಿದೆ. ಹೊಸ ಹಣಕಾಸು ವರ್ಷ ಏಪ್ರಿಲ್ 1 ನೇ ತಾರೀಕಿನಿಂದ ದೇಶಾದ್ಯಂತ ಆಯುಷ್ಮಾನ್ ಭಾರತ್ ಯೋಜನೆಗೆ ಸಂಬಂಧಿಸಿದಂತೆ ಹೊಸ ಬದಲಾವಣೆ ಜಾರಿಗೆ ಬರಲಿದೆ.

WhatsApp Group Join Now
Telegram Group Join Now

ಆಯುಷ್ಮಾನ್ ಭಾರತ್ ಯೋನನೆಯಲ್ಲಿ ಬಹುದೊಡ್ಡ ಬದಲಾವಣೆ
ಹೌದು, ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬಹುದೊಡ್ಡ ಬದಲಾವಣೆ ಮಾಡಲು ಈಗ ಮುಂದಾಗಿದೆ. ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ, ಇನ್ನುಮುಂದೆ ಇಂತಹ ಜನರು ಮಾತ್ರ ಕೇಂದ್ರದ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ 5 ಲಕ್ಷ ರೂಪಾಯಿಯ ತನಕ ಉಚಿತ ಚಿಕಿತ್ಸೆ ಪಡೆದುಕೊಳ್ಳಬಹುದು. ಆಯುಷ್ಮಾನ್ ಭಾರತ್ ಯೋಜನೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ ಮತ್ತು ಹೊಸ ಮಾರ್ಗಸೂಚಿಯ ಪ್ರಕಾರ, ಇನ್ನುಮುಂದೆ ಇಂತಹ ಜನರು ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಉಚಿತ ಚಿಕಿತ್ಸೆ ಪಡೆದುಕೊಳ್ಳಬಹುದು.

ಇನ್ನುಮುಂದೆ ಆಯುಷ್ಮಾನ್ ಭಾರತ್ ಯೋಜನೆಗೆ ಇವರು ಮಾತ್ರ ಅರ್ಹ
ಸದ್ಯ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಹೊಸ ಬದಲಾವಣೆ ಜಾರಿಗೆ ತಂದಿದೆ ಮತ್ತು ಹೊಸ ಬದಲಾವಣೆಯ ಪ್ರಕಾರ, ಇನ್ನುಮುಂದೆ 70 ವರ್ಷ ಮೇಲ್ಪಟ್ಟ ಜನರು ಕೂಡ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಉಚಿತವಾಗಿ 5 ಲಕ್ಷ ರೂಪಾಯಿಯ ತನಕ ಉಚಿತ ಚಿಕಿತ್ಸೆ ಪಡೆದುಕೊಳ್ಳಬಹುದು. ಅದೇ ರೀತಿಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಮತ್ತು ಹೊಸ ಮಾರ್ಗಸೂಚಿಯ ಪ್ರಕಾರ, ಇಂತವರು ಮಾತ್ರ ಇನ್ನುಮುಂದೆ ಆಯುಷ್ಮಾನ್ ಭಾರತ್ ಯೋಜನೆಗೆ ಅರ್ಹತೆ ಪಡೆದುಕೊಂಡಿರುತ್ತಾರೆ.

* ಆಯುಷ್ಮಾನ್ ಭಾರತ್ ಯೋಜನೆಯನ್ನು ಇನ್ಮುಂದೆ ಭಾರತದ ಕಾಯಂ ನಿವಾಸಿ ಮಾತ್ರ ಪಡೆದುಕೊಳ್ಳಬಹುದು.

* ನಿರ್ಧಿಷ್ಟ ಆದಾಯ ಮಿತಿಯನ್ನು ಮೀರಿದ ಜನರು ಇನ್ನುಮುಂದೆ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಉಚಿತ ಚಿಕಿತ್ಸೆ ಪಡೆದುಕೊಳ್ಳಲು ಸಾಧ್ಯವಿಲ್ಲ.

* 70 ವರ್ಷ ಮೇಲ್ಪಟ್ಟ ಹಿಡಿಯ ನಾಗರಿಕರು ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಉಚಿತ ಚಿಕೆತ್ಸೆ ಪಡೆದುಕೊಳ್ಳಬೇಕಾದರೆ ಅವರು ಕಾರ್ಡ್ ಮಾಡಿಸಿಕೊಂಡಿರುವುದು ಕಡ್ಡಾಯ.

* ಸರ್ಕಾರೀ ವೈದ್ಯರಿಂದ ಅಥವಾ ಸಂಬಂಧಪಟ್ಟ ಅಧಿಕಾರಿಯಿಂದ ರೆಫೆರಲ್ ಸರ್ಟಿಫಿಕೇಟ್ ಇದ್ದರೆ ಮಾತ್ರ ಇನ್ನುಮುಂದೆ ಉಚಿತ ಚಿಕಿತ್ಸೆ ನೀಡಲಾಗುವುದು.

* ತುರ್ತು ಸೇವೆಗಳು ಮತ್ತು ಉಚಿತ ಔಷಧಿಗಳು ಬಡಜನರಿಗೆ ಮಾತ್ರ ಸೀಮಿತವಾಗಿದೆ.

* ಯಾವ ಯಾವ ಚಿಕಿತ್ಸೆಗೆ ಆಯುಷ್ಮಾನ್ ಭಾರತ್ ಯೋಜನೆ ಲಭ್ಯವಿದೆಯೋ ಅದನ್ನು ತಿಳಿದುಕೊಂಡಿರುವುದು ಅತ್ಯವಶ್ಯಕ ಮತ್ತು ಎಲ್ಲಾ ಚಿಕಿತ್ಸೆಗಳಿಗೆ ಆಯುಷ್ಮಾನ್ ಭಾರತ್ ಕಾರ್ಡ್ ಅನ್ವಯ ಆಗುವುದಿಲ್ಲ ಅನ್ನುವುದನ್ನು ಗಮನದಲ್ಲಿ ಇರಿಸಿಕೊಂಡಿರಬೇಕು.

ಇನ್ನೂ ಕೂಡ ಆಯುಷ್ಮಾನ್ ಭಾರತ್ ಕಾರ್ಡ್ ಮಾಡಿಸಿಕೊಳ್ಳದೆ ಇರುವವರು, ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಆಯುಷ್ಮಾನ್ ಭಾರತ್ ಕಾರ್ಡ್ ಮಾಡಿಸಿಕೊಳ್ಳಬೇಕು. ಬಡವರಿಗಾಗಿ ಜಾರಿಗೆ ಬಂದಿರುವ ಈ ಆಯುಷ್ಮಾನ್ ಭಾರತ್ ಯೋಜನೆಯ ಲಾಭ ಪ್ರತಿಯೊಬ್ಬ ಬಡ ಪಡೆದುಕೊಳ್ಳಬೇಕು ಅನ್ನುವುದು ಸರ್ಕಾರ ಆಶಯ ಆಗಿದೆ.

Leave a Comment