Gruha Lakshmi: ಯುಗಾದಿ ಹಬ್ಬದ ಮರುದಿನವೇ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಹೆಬ್ಬಾಳ್ಕರ್, ಖಾತೆಗೆ 2000 ರೂ ಜಮಾ

Gruha Lakshmi Scheme March Month Installment: ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಕಾಂಗ್ರೆಸ್ ಸರ್ಕಾರದ ಬಹುದೊಡ್ಡ ಯೋಜನೆ ಆಗಿದೆ ಮತ್ತು ಈ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ರಾಜ್ಯದ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ ಹಣವನ್ನು ನೀಡಲಾಗುತ್ತದೆ. ಕರ್ನಾಟಕ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ಗೃಹಲಕ್ಷ್ಮಿ ಯೋಜನೆಯನ್ನು ಘೋಷಣೆ ಮಾಡಿತ್ತು ಮತ್ತು ಘೋಷಣೆ ಮಾಡಿದ ರೀತಿಯಲ್ಲಿ ರಾಜ್ಯದ ಪ್ರತಿ ಮಹಿಳೆಯರಿಗೆ ಈ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ 2000 ರೂ ಹಣವನ್ನು ನೀಡಲಾಗುತ್ತಿದೆ. ಇದರ ನಡುವೆ ಕಳೆದ ಎರಡು ತಿಂಗಳುಗಳಿಂದ ರಾಜ್ಯದ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲ ಎಂದು ಹೇಳಬಹುದು.

WhatsApp Group Join Now
Telegram Group Join Now

ಕೆಲವು ತಾಂತ್ರಿಕ ದೋಷಗಳ ಕಾರಣ ರಾಜ್ಯದ ಬಜೆಟ್ ಘೋಷಣೆಯ ಕಾರಣ ರಾಜ್ಯದ ಮಹಿಳೆಯರ ಖಾತೆಗೆ ಕಳೆದ ಎರಡು ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಆಗಿಲ್ಲ. ಇದರ ನಡುವೆ ಈಗ ಯುಗಾದಿ ಹಬ್ಬದ ಮರುದಿನವೇ ರಾಜ್ಯದ ಮಹಿಳೆಯರಿಗೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ ಎಂದು ಹೇಳಬಹುದು. ಹಾಗಾದರೆ ಯುಗಾದಿ ಹಬ್ಬದ ಮರುದಿನವೇ ರಾಜ್ಯದ ಮಹಿಳೆಯರಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿರುವ ಗುಡ್ ನ್ಯೂಸ್ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ
ಯುಗಾದಿ ಹಬ್ಬದ ಮರುದಿನವೇ ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ಮಾರ್ಚ್ ತಿಂಗಳ ಕೊನೆಯ ವಾರದಲ್ಲಿ ಈಗ ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ ಹಣವನ್ನು ಬಿಡುಗಡೆ ಮಾಡುವುದರ ಮೂಲಕ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಮಹಿಳೆಯರಿಗೆ ಈ ಮೂಲಕ ಗುಡ್ ನ್ಯೂಸ್ ನೀಡಿದೆ ಎಂದು ಹೇಳಬಹುದು.

ಇನ್ನು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಾಧ್ಯಮದ ಮುಂದೆ ಮಾತನಾಡಿದ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ 2000 ರೂ ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ ಮತ್ತು ಆ ಹಣವನ್ನು ಮಹಿಳೆಯರು ಪಡೆದುಕೊಳ್ಳಬಹದು ಎಂದು ಹೇಳಿದ್ದಾರೆ. ಕೆಲವು ತಾಂತ್ರಿಕ ದೋಷಗಳ ಕಾರಣ ಮಹಿಳೆಯರ ಖಾತೆಗೆ ಹಮ್ ಜಾಮಾ ಆಗದೆ ಬಾಕಿ ಉಳಿದುಕೊಂಡಿದ್ದು ಸದ್ಯ ಆ ಹಣವನ್ನು ಜಮಾ ಮಾಡುವ ಕೆಲಸ ಮಾಡಲಾಗುತ್ತಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.

DBT ಕರ್ನಾಟಕ (DBT Karnataka) ಮೂಲಕ ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ ಹಣ ಬಿಡುಗಡೆ ಮಾಡಲಾಗಿದೆ ಮತ್ತು DBT ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಇನ್ಸ್ಟಾಲ್ (DBT Karnataka Mobile Application) ಮಾಡಿಕೊಳ್ಳುವುದರ ಮೂಲಕ ಗೃಹಲಕ್ಷ್ಮಿ ಯೋಜನೆಯ ಸಂಪೂರ್ಣ ಸ್ಟೇಟಸ್ ಅನ್ನು ಕೂಡ ಚೆಕ್ ಮಾಡಿಕೊಳ್ಳಬಹುದು. ಯಾವ ಮಹಿಳೆಯರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಲಿಂಕ್, ಪಾನ್ ಸಂಖ್ಯೆ ಲಿಂಕ್, KYC ಅಪ್ಡೇಟ್ ಮತ್ತು NPCI ಮ್ಯಾಪಿಂಗ್ (NPCI Maping) ಮಾಡಿಕೊಂಡಿಲ್ಲವೋ ಅಂತಹ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿರುವುದಿಲ್ಲ. ಅದೇ ರೀತಿಯಲ್ಲಿ ಮಹಿಳೆಯರ ಬ್ಯಾಂಕ್ ಖಾತೆಯಲ್ಲಿ ಬೇರೆ ಯಾವುದಾದರೂ ದೋಷಗಳು ಇದ್ದರೂ ಕೂಡ ಅವರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಜಮಾ ಆಗುವುದಿಲ್ಲ.

ಮಹಿಳೆಯರು ತಮ್ಮ ಮೊಬೈಲ್ ನಲ್ಲಿ DBT ಕರ್ನಾಟಕ ಅಪ್ಲಿಕೇಶನ್ ಇನ್ಸ್ಟಾಲ್ ಮಾಡಿಕೊಂಡು ತಮ್ಮ ಆಧಾರ್ ಸಂಖ್ಯೆ ಹಾಕಿ ಲಾಗಿನ್ ಮಾಡಿಕೊಂಡು ಅಪ್ಲಿಕೇಶನ್ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣ ಯಾವ ದಿನಾಂಕದಂದು ಖಾತೆಗೆ ಜಮಾ ಆಗಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಚೆಕ್ ಮಾಡಿಕೊಳ್ಳಬಹುದು.

Leave a Comment