Rain Updates In Karnataka: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದೆ. ಸತತವಾಗಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುತ್ತಿರುವುದರ ಕಾರಣ ಕರ್ನಾಟಕದಲ್ಲಿ ಬಾರೀ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗ ಎಚ್ಚರಿಕೆ ನೀಡಿದೆ. ರಾಜೆಯಾದಲ್ಲಿ ಬೇಸಿಗೆಯ ಬಿಸಿ ಬಹಳ ಹೆಚ್ಚಾಗಿದೆ ಮತ್ತು ಬೇಸಿಗೆ ಬಿಸಿ ನಡುವೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುತ್ತಿರುವುದನ್ನು ನಾವು ನೋಡಬಹುದು. ಇದರ ನಡುವೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಂಡುಬಂದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಕಾರಣ ಕರ್ನಾಟಕಕ್ಕೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಕರ್ನಾಟಕದಲ್ಲಿ ಆಗಲಿದೆ ಬಾರೀ ಮಳೆ
ಹವಾಮಾನ ಇಲಾಖೆಯ ವರದಿಯ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಕಾರಣ ಕರ್ನಾಟಕದ ಸುಮಾರು 24 ಜಿಲ್ಲೆಗಳಲ್ಲಿ ಬಾರೀ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಈಗಾಗಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರತಿನಿತ ಮಳೆಯಾಗುತ್ತಿದೆ ಮತ್ತು ಇದರ ನಡುವೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಹಾಗಾದರೆ ಕರ್ನಾಟಕದ ಯಾವ 24 ಜಿಲ್ಲೆಯಲ್ಲಿ ಬಾರೀ ಪ್ರಮಾಣದ ಮಳೆಯಾಗಲಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಕರ್ನಾಟಕದ ಈ 24 ಜಿಲ್ಲೆಯಲ್ಲಿ ಆಗಲಿದೆ ಬಾರೀ ಮಳೆ
ಹವಾಮಾನ ಇಲಾಖೆಯ ವರದಿಯ ಪ್ರಕಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಉತ್ತರ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ರಾಮನಗರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಮೈಸೂರು, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಬಾರೀ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬಂಗಾಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಂಡಕಾರಣ ಇದು ಕರ್ನಾಟಕದ ನೇರ ಪರಿಣಾಮ ಬೀರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಗುಡುಗು ಸಿಡಿಲು ಸಹಿತ ಬಾರೀ ಮಳೆ
ವೇಗದ ಗಾಳಿ ಇರುವ ಗುಡುಗು ಸಿಡಿಲು ಸಹಿತ ಬಾರೀ ಪ್ರಮಾಣದ ಮಳೆಯಾಗಲಿದ್ದು ಜನರು ಬಹಳ ಎಚ್ಚರದಿಂದ ಇರುವುದು ಉತ್ತಮ. ಅದೇ ರೀತಿಯಲ್ಲಿ ಮೀನುಗಾರರು ಸ್ವಲ್ಪ ಎಚ್ಚರಿಕೆಯಿಂದ ಇರಬೇಕು ಮತ್ತು ಮುಂದಿನ ಎರಡು ದಿನ ಮೀನುಗಾರಿಕೆಗೆ ಹೋಗದೆ ಇರುವುದು ಒಳ್ಳೆಯದು. ಕರ್ನಾಟಕದ 24 ಜಿಲ್ಲೆಗಳಲ್ಲಿ ಬಾರೀ ಪ್ರಮಾಣದ ಮಳೆಯಾಗಲಿದ್ದು ಕರ್ನಾಟಕದ 24 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.