Karnataka Rain Update: ಕರ್ನಾಟಕದಲ್ಲಿ ಒಣಹವೆ ಹೆಚ್ಚಾದ ಕಾರಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಾರೀ ಪ್ರಮಾಣದ ಮಳೆಯಾಗಲಿದೆ ಎಂದು ಹೇಳಬಹುದು. ಈಗಾಗಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಈ ಕಾರಣದಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಾರೀ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಕರ್ನಾಟಕ ಈ ಜಿಲ್ಲೆಗಳಲ್ಲಿ ಏಪ್ರಿಲ್ 27 ರ ಬಳಿಕ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಕರ್ನಾಟಕದ ಈ ಜಿಲ್ಲೆಗಳಲ್ಲಿ ಆಗಲಿದೆ ಬಾರೀ ಮಳೆ
ಹೌದು, ಹವಾಮಾನ ಇಲಾಖೆಯ ವರದಿಯ ಪ್ರಕಾರ, ಕರ್ನಾಟಕದ ಈ ಜಿಲ್ಲೆಗಳಲ್ಲಿ ಏಪ್ರಿಲ್ 27 ರ ನಂತರ ಬಾರೀ ಪ್ರಮಾಣದ ಮಳೆಯಾಗಲಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಇನ್ನು ಹವಾಮಾನ ಇಲಾಖೆಯ ವರದಿಯ ಪ್ರಕಾರ ಏಪ್ರಿಲ್ 27 ರ ನಂತರ ಉಡುಪಿ, ಬಾಗಲಕೋಟೆ, ಬೆಳಗಾವಿ, ದಕ್ಷಿಣ ಕನ್ನಡ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಉತ್ತರ ಕನ್ನಡ ಮತ್ತು ಶಿವಮೊಗ್ಗದಲ್ಲಿ ಏಪ್ರಿಲ್ 27 ರ ನಂತರ ಬಾರೀ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಏಪ್ರಿಲ್ 27 ರ ನಂತರ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಬಾರೀ ಪ್ರಮಣದ ಮಳೆಯಾಗಲಿದೆ ಜನರು ಎಚ್ಚರದಿಂದ ಇರಬೇಕಾಗಿದೆ. ಏಪ್ರಿಲ್ 27 ರ ನಂತರ ಗುಡುಗು ಮಿಂಚು ಸಹಿತ ಬಾರೀ ಪ್ರಮಾಣದ ಮಳೆಯಾಗಲಿದೆ ಮತ್ತು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಪ್ರಸ್ತುತ ವರ್ಷದಲ್ಲಿ ಮುಂಗಾರು ಮಳೆ ಬಹಳ ಬೇಗ ಆರಂಭ ಲಕ್ಷಣ ಕಾಣುತ್ತಿದೆ. ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಕಂಗಾಲಾಗಿರುವ ಜನತೆಗೆ ಮಳೆಯ ಮುನ್ಸೂಚನೆ ಮನಸ್ಸಿಗೆ ನೆಮ್ಮದಿ ತರಿಸಿದೆ ಎಂದು ಹೇಳಬಹುದು.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ
ಬಂಗಾಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ದೇಶದ ಹಲವು ರಾಜ್ಯದಲ್ಲಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಕಾರಣ ಬರಿ ಮಳೆ ಮಾತ್ರವಲ್ಲದೆ ಕರ್ನಾಟಕದಲ್ಲಿ ಮತ್ತು ದೇಶದ ಹಲವು ರಾಜ್ಯದಲ್ಲಿ ಬಾರಿ ಮಳೆ ಮತ್ತು ಬಿರುಗಾಳಿ ಬರುವ ಸಾಧ್ಯತೆ ಇದೆ ಎಂದು ವರದಿ ಮೂಲಗಳು ತಿಳಿಸಿದೆ.