Board Exam Cancelled: 5, 8, 9 ಮತ್ತು 11 ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್, ಪರೀಕ್ಷೆ ರದ್ದುಪಡಿಸಿದ ಹೈಕೋರ್ಟ್

5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ ಹೈಕೋರ್ಟ್

5, 8, 9 And 11th Class Board Exam Cancelled: ಸದ್ಯ 2023 -24 ಶೈಕ್ಷಣಿಕ ಸಾಲಿನ ಅಂತಿಮ ಪರೀಕ್ಷೆ ಹತ್ತಿರವಾಗುತ್ತಿದೆ. ಈ ಬಾರಿ SSLC ಮತ್ತು ದ್ವಿತೀಯ PUC ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸುವುದಲ್ಲದೆ ರಾಜ್ಯ ಪಠ್ಯಕ್ರಮ ಹೊಂದಿರುವ ಶಾಲೆಗಳ 5, 8, 9 ಮತ್ತು 11 ನೇ ತರಗತಿಗಳ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆಗಳನ್ನು ನಡೆಸುವಂತೆ ಆದೇಶ ಹೊರಡಿಸಲಾಗಿದೆ. ಆದರೆ ಇದೀಗ 5, 8, 9 ಮತ್ತು 11 ನೇ ತರಗತಿಗಳ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ.

5, 8, 9 And 11th Class Board Exam Cancelled
Image Credit: News Next

5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ ಹೈಕೋರ್ಟ್
ರಾಜ್ಯ ಪಠ್ಯಕ್ರಮ ಹೊಂದಿರುವ ಶಾಲೆಗಳ 5, 8, 9 ಮತ್ತು 11 ನೇ ತರಗತಿಗಳ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಕುರಿತು ರಾಜ್ಯ ಸರ್ಕಾರ ಹೊರಡಿಸಿದ ಸುತ್ತೋಲೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ.

ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲು ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ನಿರ್ಧರಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ಆಕ್ಷೇಪಿಸಿ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ವಿ. ಹೊಸಮನಿ ಅವರಿದ್ದ ಏಕಸದಸ್ಯ ಪೀಠ ಪ್ರಕಟಿಸಿದೆ. ವಿಸ್ತೃತ ಆದೇಶ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. ನ್ಯಾಯಾಲಯದ ಈ ಆದೇಶದಿಂದ ಇದೇ ಮಾರ್ಚ್ 9 ರಿಂದ 11ರವರೆಗೆ ನಿಗದಿಯಾಗಿದ್ದ ಮಂಡಳಿ ಪರೀಕ್ಷೆಗಳು ರದ್ದಾಗಲಿವೆ.

5, 8, 9 And 11th Class Board Exam
Image Credit: Deccan Herald

ಹೈಕೋರ್ಟ್ ಮಹತ್ವದ ಆದೇಶ
ರಾಜ್ಯ ಶಿಕ್ಷಣ ಕಾಯಿದೆಯ ಸೆಕ್ಷನ್‌ 22ರ ಅಡಿ 2023ರ ಅಕ್ಟೋಬರ್ 6 ಮತ್ತು 9ರಂದು ಎರಡು ಸುತ್ತೋಲೆಗಳನ್ನ ಹೊರಡಿಸಿದ್ದ ರಾಜ್ಯ ಸರ್ಕಾರವು ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಾಗಿ ಹೇಳಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿದಾರರ‌ ಒಕ್ಕೂಟವು ಶಿಕ್ಷಣ ಇಲಾಖೆ ಸುತ್ತೋಲೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ. ಆದಾಗ್ಯೂ, ಬೋರ್ಡ್ ಪರೀಕ್ಷೆಗೆ ಕಲಿಕೆಯ ಮರುಪಡೆಯುವಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿದೆ ಎಂದು ಸರ್ಕಾರ ಹೇಳುತ್ತದೆ.

ಖಾಸಗಿ ಶಾಲೆಗಳ ಪಠ್ಯಕ್ರಮ ಮತ್ತು ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿದೆ. ಕಲಿಕೆಯ ಪುನಶ್ಚೇತನ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳಿಗೆ ಉತ್ತರಿಸುವುದು ಕಷ್ಟ. ಹೀಗಾಗಿ ಎಲ್ಲಾ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಹಂತದ ಪರೀಕ್ಷೆಗೆ ಅವಕಾಶ ನೀಡಬಾರದು ಎಂದು ವಾದಿಸಲಾಯಿತು.

Join Nadunudi News WhatsApp Group

Join Nadunudi News WhatsApp Group