Board Exam: 5 ಮತ್ತು 8ನೇ ತರಗತಿ ಮಕ್ಕಳಿಗೆ ಹೊಸ ನಿಯಮ, ಫೇಲ್ ಆದರೆ ಭಯಪಡುವ ಅಗತ್ಯ ಇಲ್ಲ.

5 ಮತ್ತು 8 ನೇ ತರಗತಿ ಮಕ್ಕಳು ಫೇಲ್ ಆದರೆ ಪುರಕೆ ಪರೀಕ್ಷೆ ನಡೆಸುವಂತೆ ಆದೇಶವನ್ನ ಹೊರಡಿಸಲಾಗಿದೆ.

5th And 8th Students Board Exam Result: 2023 -24 ಶಾಲಿನ ಶಿಕ್ಷಣ ನೀತಿಯಲ್ಲಿ ಅನೇಕ ನಿಯಮಗಳು ಬದಲಾಗಿವೆ. ಈಗಾಗಲೇ 5 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಎಕ್ಸಾಮ್ ಮಾಡುವಂತೆ ಶಿಕ್ಷಣ ಇಲಾಖೆ ಸೂಚನೆ ಹೊರಡಿಸಿದೆ.

ಇನ್ನು ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆ 5 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ಬೋರ್ಡ್ ಎಕ್ಸಾಮ್ ನಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗಾಗಿ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರವನ್ನು ಘೋಷಿಸಿದೆ.

The government has issued an order that the fifth and eighth class children fail but they have to pass the supplementary examination.
Image Credit: indiatvnews

5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಎಕ್ಸಾಮ್
ರಾಜ್ಯದ ಎಲ್ಲಾ ಸರ್ಕಾರಿ ಹಾಗು ಖಾಸಗಿ ಶಾಲೆಗಳಿಗೆ 8 ಮತ್ತು 5 ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಬೋರ್ಡ್ ಎಕ್ಸಾಮ್ ನಡೆಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರಿಕ್ಷೆ ನಡೆಸುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಆಧರಿಸಿ ಶಾಲೆಗಳು ಮಕ್ಕಳಿಗೆ ಪರೀಕ್ಷೆ ನಡೆಸಬೇಕಾಗುತ್ತದೆ ಎಂದು ವರದಿ ಆಗಿದೆ.

The state government has issued an order that 5th and 8th class children should not fail
Image Credit: dtnext

5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳನ್ನು ಫೇಲ್ ಮಾಡುವಂತಿಲ್ಲ
5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಪ್ರತಿ ವರ್ಷ ಮಾಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಯಲ್ಲಿ ಫೇಲ್ ಆದರೆ ಅವರಿಗೆ ಪೂರಕ ಪರೀಕ್ಷೆ ನಡೆಸುವಂತೆ ಶಿಕ್ಷಣ ಇಲಾಖೆ ಸೂಚನೆ ಹೊರಡಿಸಿದೆ.

ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸಿ, ಕಲಿಕೆಯನ್ನು ಸುಧಾರಿಸಿ, ಪೂರಕ ಪರೀಕ್ಷೆ ನಡೆಸಿ ಫಲಿತಾಂಶವನ್ನು ನೀಡಿ ಮುಂದಿನ ತರಗತಿಗೆ ಕಳುಹಿಸಲಾಗುತ್ತದೆ. ಶಿಕ್ಷಣದಲ್ಲಿ ಹಿಂದಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

Join Nadunudi News WhatsApp Group

Join Nadunudi News WhatsApp Group