PM Viksit Bharat Rojgar Yojana Details: ಕೇಂದ್ರದ ನರೇಂದ್ರ ಮೋದಿ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ದೇಶದಲ್ಲಿ ಆಗಸ್ಟ್ 1 ನೇ ತಾರೀಕಿನಿಂದ ಪ್ರಧಾನಮಂತ್ರಿ ವಿಕಸಿತ್ ಭಾರತ್ ರೋಜ್ಗಾರ್ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಹೊಸದಾಗಿ ಉದ್ಯೋಗ ಆರಂಭಿಸುವ ಉದ್ಯೋಗಗಳಿಗೆ 15000 ರೂ ತನಕ ಆರ್ಥಿಕ ಸಹಾಯವನ್ನು ಈ ಪ್ರಧಾನಮಂತ್ರಿ ವಿಕಸಿತ್ ಭಾರತ್ ರೋಜ್ಗಾರ್ ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ. ಪ್ರಧಾನಮಂತ್ರಿ ವಿಕಸಿತ್ ಭಾರತ್ ರೋಜ್ಗಾರ್ ಯೋಜನೆಯ ಅರ್ಹತೆ ಮತ್ತು ಯೋಜನೆಯ ಲಾಭಗಳ ಬಗ್ಗೆ ಸಂಪೂರ್ಣ ಮಾಹಿತಿ ಲೇಖನದಲ್ಲಿ ತಿಳಿದುಕೊಳ್ಳಬಹುದು.
ಪ್ರಧಾನಮಂತ್ರಿ ವಿಕಸಿತ್ ಭಾರತ್ ರೋಜ್ಗಾರ್ ಯೋಜನೆಯ ಉದ್ದೇಶ
PM-VBRY ಯೋಜನೆಯನ್ನು ಆಗಸ್ಟ್ 1, 2025 ರಿಂದ ಜಾರಿಗೆ ತರಲಾಗುವುದು. ಈ ಯೋಜನೆಯು ಎರಡು ವರ್ಷಗಳ ಅವಧಿಯಲ್ಲಿ 3.5 ಕೋಟಿಗಿಂತಲೂ ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ, ಇದರಲ್ಲಿ 1.92 ಕೋಟಿ ಜನರು ಮೊದಲ ಬಾರಿಗೆ ಔಪಚಾರಿಕ ಕ್ಷೇತ್ರದಲ್ಲಿ ಉದ್ಯೋಗಕ್ಕೆ ಸೇರಲಿದ್ದಾರೆ. ಈ ಯೋಜನೆಗೆ ಕೇಂದ್ರ ಸರ್ಕಾರವು ₹99,446 ಕೋಟಿ ಬಂಡವಾಳವನ್ನು ಮೀಸಲಿಟ್ಟಿದೆ.
ಈ ಯೋಜನೆಯೂ ಯಾರಿಗೆ ಲಾಭ?
ಹೊಸ ಉದ್ಯೋಗಿಗಳಿಗೆ ಹೆಚ್ಚಿನ ಲಾಭ
ಕರ್ಮಚಾರಿ ಭವಿಷ್ಯ ನಿಧಿ ಸಂಸ್ಥೆ (EPFO) ಯಲ್ಲಿ ಮೊದಲ ಬಾರಿಗೆ ನೋಂದಾಯಿಸಿಕೊಂಡ ಉದ್ಯೋಗಿಗಳಿಗೆ ಒಂದು ತಿಂಗಳ ವೇತನಕ್ಕೆ ಸಮನಾದ ಅಥವಾ ಗರಿಷ್ಠ ₹15,000 ಆರ್ಥಿಕ ಸಹಾಯವನ್ನು ಎರಡು ಕಂತುಗಳಲ್ಲಿ ನೀಡಲಾಗುವುದು: ಮೊದಲ ಕಂತು 6 ತಿಂಗಳ ನಿರಂತರ ಸೇವೆಯ ನಂತರ ಮತ್ತು ಎರಡನೇ ಕಂತು 12 ತಿಂಗಳ ಸೇವೆ ಮತ್ತು ಆರ್ಥಿಕ ಸಾಕ್ಷರತೆ ಕಾರ್ಯಕ್ರಮವನ್ನು ಪೂರ್ಣಗೊಳಿಸಿದ ನಂತರ.
ಉದ್ಯೋಗಿಯ ಮಾಸಿಕ ವೇತನವು ₹1 ಲಕ್ಷಕ್ಕಿಂತ ಕಡಿಮೆ ಇರಬೇಕು, ಯೂನಿವರ್ಸಲ್ ಅಕೌಂಟ್ ನಂಬರ್ (UAN) ಸಕ್ರಿಯವಾಗಿರಬೇಕು ಮತ್ತು ಬ್ಯಾಂಕ್ ಖಾತೆಯು ಆಧಾರ್‌ಗೆ ಜೋಡಣೆಯಾಗಿರಬೇಕು.
ಉದ್ಯೋಗದಾತರಿಗೆ ಕೂಡ ಹೆಚ್ಚಿನ ಲಾಭ
ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಉದ್ಯೋಗದಾತರಿಗೆ ತಿಂಗಳಿಗೆ ₹1,000 ರಿಂದ ₹3,000 ವರೆಗಿನ ಪ್ರೋತ್ಸಾಹ ಧನವನ್ನು ಒದಗಿಸಲಾಗುವುದು. 50 ಕ್ಕಿಂತ ಕಡಿಮೆ ಉದ್ಯೋಗಿಗಳಿರುವ ಸಂಸ್ಥೆಗಳು ವರ್ಷಕ್ಕೆ ಕನಿಷ್ಠ 2 ಹೊಸ ಉದ್ಯೋಗಿಗಳನ್ನು ಮತ್ತು 50 ಕ್ಕಿಂತ ಹೆಚ್ಚು ಉದ್ಯೋಗಿಗಳಿರುವ ಸಂಸ್ಥೆಗಳು ಕನಿಷ್ಠ 5 ಹೊಸ ಉದ್ಯೋಗಿಗಳನ್ನು ನೇಮಿಸಿಕೊಳ್ಳಬೇಕು.
PM-VBRY ಯೋಜನೆಯು ವೈಶಿಷ್ಯಗಳು
PM-VBRY ಯೋಜನೆಯು ಔಪಚಾರಿಕ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳನ್ನು ವಿಸ್ತರಿಸುವ ಗುರಿಯನ್ನು ಹೊಂದಿದೆ. ಯುವ ಉದ್ಯೋಗಿಗಳಿಗೆ ಆರ್ಥಿಕ ಸಾಕ್ಷರತೆಯನ್ನು ಉತ್ತೇಜಿಸುವುದು, ಔಪಚಾರಿಕ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ ಮಾಡುವುದು ಮತ್ತು ಉದ್ಯೋಗದಾತರಿಗೆ ಆರ್ಥಿಕ ಪ್ರೋತ್ಸಾಹ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶಗಳಾಗಿವೆ.
PM-VBRY ಯೋಜನೆಯು ಯಾವಾಗ ಜಾರಿಗೆ ಬರುತ್ತೆ?
PM-VBRY ಯೋಜನೆಯನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಮೂಲಕ ಜಾರಿಗೊಳಿಸಲಾಗುವುದು. ಈ ಯೋಜನೆಯು ಎರಡು ವರ್ಷಗಳಲ್ಲಿ 3.5 ಕೋಟಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ, ಇದರಲ್ಲಿ 1.92 ಕೋಟಿ ಜನರು ಮೊದಲ ಬಾರಿಗೆ ಔಪಚಾರಿಕ ಕ್ಷೇತ್ರದಲ್ಲಿ ಉದ್ಯೋಗಕ್ಕೆ ಸೇರಲಿದ್ದಾರೆ.
PM-VBRY ಯೋಜನೆಯ ಪ್ರಯೋಜನ
ಈ ಯೋಜನೆಯು ಯುವಕರಿಗೆ ಆರ್ಥಿಕ ಸಾಕ್ಷರತೆಯನ್ನು ಒದಗಿಸುವುದರ ಜೊತೆಗೆ, ಉದ್ಯೋಗದಾತರಿಗೆ ಹೊಸ ನೇಮಕಾತಿಗಳಿಗೆ ಪ್ರೋತ್ಸಾಹ ನೀಡುತ್ತದೆ. ಔಪಚಾರಿಕ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳ ಹೆಚ್ಚಳವು ದೇಶದ ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡುತ್ತದೆ.