Sidddaramaiah About Sugarcane MRP: ಕರ್ನಾಟಕದಲ್ಲಿ ಕಬ್ಬು ಬೆಳೆಯುವ ರೈತರು ಪ್ರತಿಭಟನೆ ಮಾಡುತ್ತಿದ್ದು ಸದ್ಯ ಪ್ರತಿಭಟನೆಯ ಕಾವು ಹೆಚ್ಚಾಗಿದೆ. ಕೆಬ್ಬಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ ಅನ್ನುವ ಕಾರಣಕ್ಕೆ ರೈತರು ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಈ ನಡುವೆ ಮಾಧ್ಯಮದ ಜೊತೆ ಮಾತನಾಡಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನೇರವಾಗಿ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.
ಕೇಂದ್ರದ ಮೇಲೆ ನೇರವಾಗಿ ಆರೋಪ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕಬ್ಬು ಬೆಳೆಯುವ ರೈತರು ಹೋರಾಟ ಮಾಡುತ್ತಿರುವ ಈ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇರವಾಗಿ ಕೇಂದ್ರದ ಮೇಲೆ ಆರೋಪ ಮಾಡಿದ್ದಾರೆ. ಕಬ್ಬಿಗೆ ಬೆಲೆ ನಿಗದಿ ಮಾಡುವುದು ಕೇಂದ್ರ ಸರ್ಕಾರ ಎಂದು ಹೇಳುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿ ಮಾಧ್ಯಮದ ಮುಂದೆ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.
ಕಬ್ಬಿಗೆ ಗರಿಷ್ಟ ಚಿಲ್ಲರೆ ದರ (MRP) ನಿಗದಿ ಮಾಡುವುದು ಕೇಂದ್ರ ಸರ್ಕಾರ
ಮಾಧ್ಯಮದ ಮುಂದೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರು ಬೆಳೆದ ಕಬ್ಬಿಗೆ ಗರಿಷ್ಟ ಚಿಲ್ಲರೆ ದರ (MRP) ನಿಗದಿ ಮಾಡುವುದು ಕೇಂದ್ರ ಸರ್ಕಾರ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ಬೆಲೆ ನಿಗಾಡಿ ನಿಗದಿ ಮಾಡುವ ಹೊಣೆ ನಮ್ಮ ಸರ್ಕಾರದ್ದು ಅಲ್ಲ ಎಂದು ಆರೋಪ ತಳ್ಳಿಹಾಕಿದ್ದಾರೆ. ರಾಜ್ಯದ ರೈತರು ಪ್ರತಿ ಟನ್ ಕಬ್ಬಿಗೆ 3500 ರೂ ಬೆಲೆ ಕೇಳುತ್ತಿದ್ದಾರೆ, ಆದರೆ ಸಕ್ಕರೆ ಕಾರ್ಖಾನೆ ಮಾಲೀಕರು ಇದಕ್ಕೆ ಒಪ್ಪದ ಕಾರಣ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ.
ಕಬ್ಬು ಬೆಲೆಯಲ್ಲಿ ಕೇಂದ್ರದ ಪಾತ್ರ ಏನು?
ಕಬ್ಬುಗಳ ಬೆಲೆಯಲ್ಲಿ ನ್ಯಾಯಯುತವಾದ ಮತ್ತು ಲಾಭದಾಯಕವಾದ ಬೆಲೆಯಲ್ಲಿ ಕೇಂದ್ರ ಸರ್ಕಾರ ನಿಗದಿ ಮಾಡುತ್ತದೆ. ಅದೇ ರೀತಿಯಲ್ಲಿ ಈಗಾಗಲೇ ಕೇಂದ್ರ ಸರ್ಕಾರ ತಿ ಟನ್‌ಗೆ ಸುಮಾರು 3,150 ರೂಪಾಯಿ FRP ಘೋಷಿಸಿದೆ. ಸಕ್ಕರೆ ಕಾರ್ಖಾನೆಗಳು ಎಥೆನಾಲ್, ವಿದ್ಯುತ್ ಮುಂತಾದ ಉಪ ಉತ್ಪನ್ನಗಳಿಂದ ಹೆಚ್ಚು ಆದಾಯ ಪಡೆಯುತ್ತವೆ, ಆದರೆ ಕಬ್ಬು ಬೆಳೆದ ರೈತರಿಗೆ ಹೆಚ್ಚಿನ ಲಾಭ ಸಿಗುತ್ತಿಲ್ಲ ಅನ್ನುವುದು ರೈತರ ಅಭಿಪ್ರಾಯವಾಗಿದೆ.
ರಾಜ್ಯ ಕೊಡುವ ತೆರಿಗೆ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಿಂದ ಕೇಂದ್ರಕೆ ಹೋಗುವ ತೆರಿಗೆ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಕರ್ನಾಟಕ ರಾಜ್ಯದ ಸರ್ಕಾರ ಸರಿಸುಮಾರು 4.5 ಕೋಟಿ ರೂಪಾಯಿ ಹಣವನ್ನು ಕೇಂದ್ರಕ್ಕೆ ತೆರಿಗೆ ಪಾವತಿ ಮಾಡುತ್ತೆ, ಆದರೆ ಅದರಿಂದ ರಾಜ್ಯಕ್ಕೆ ವಾಪಾಸ್ ಬರುವುದು ಒಂದು ರೂಪಾಯಿಗೆ ಕೇವಲ 14 ರಿಂದ 15 ಪೈಸೆ ಮತ್ತು ಉಳಿದ 85 ಪೈಸೆ ಕೇಂದ್ರ ಇಟ್ಟುಕೊಳ್ಳುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಇನ್ನಷ್ಟು ತೀವ್ರವಾದ ರೈತರ ಹೋರಾಟ
ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ಹಾವೇರಿ ಸೇರಿದಂತೆ ಹಲವು ಜಿಲ್ಲೆಯಲ್ಲಿ ಈಗ ರೈತರ ಹೋರಾಟ ತೀವ್ರತೆ ಪಡೆದುಕೊಂಡಿದೆ. ರಾಜ್ಯದಲ್ಲಿ 26 ಕ್ಕೂ ಅಧಿಕ ಸಕ್ಕರೆ ಕಾರ್ಖಾನೆ ಕೂಡ ಸ್ಥಗಿತವಾಗಿದೆ. ರೈತರು ರಸ್ತೆ ತಡೆ, ಟೈಯರ್ ಸುಡುವ ಮೂಲಕ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಅವರು ಸಿಎಂ ಅವರಿಗೆ ಮಧ್ಯಪ್ರವೇಶಿಸಿ 3,500 ರೂಪಾಯಿ ಬೆಲೆ ಖಾತ್ರಿ ಮಾಡುವಂತೆ ಕೋರಿದ್ದಾರೆ. ಕಾರ್ಖಾನೆಗಳು 3300 ರೂ ನೀಡಲು ಮತ್ತು ರಾಜ್ಯ ಸರ್ಕಾರ ಉಳಿದ 200 ನೀಡಲು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಸದ್ಯ ರೈತರ ಈ ಹೋರಾಟ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
Disclaimer: This information is provided for awareness purposes only. For personalised legal advice, consult a qualified professional and refer to official government notifications.

