Shakti Scheme: ಇನ್ಮುಂದೆ ಉಚಿತವಾಗಿ ಪ್ರಯಾಣಿಸಲು ಆಧಾರ್ ಕಾರ್ಡ್ ಬೇಕಿಲ್ಲ, ಮಹಿಳೆಯರಿಗೆ ಗುಡ್ ನ್ಯೂಸ್

Karnataka Congress Shakti Scheme New Rules: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬಹುದೊಡ್ಡ ಯೋಜನೆಯಾದ ಶಕ್ತಿ ಯೋಜನೆಯ (Shakti Scheme0 ಅಡಿಯಲ್ಲಿ ರಾಜ್ಯದಲ್ಲಿ ಸರ್ಕಾರೀ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಹೌದು, ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ರಾಜ್ಯದಲ್ಲಿ ಶಕ್ತಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ನೀಡಲಾಗುವುದು ಎಂದು ಹೇಳಿಕೆ ನೀಡಿತ್ತು ಮತ್ತು ಹೇಳಿಕೆ ನೀಡಿದ ಹಾಗೆ ರಾಜ್ಯದ ಮಹಿಳೆಯಯರಿಗೆ ಉಚಿತ ಬಸ್ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತಂದಿದೆ. ರಾಜ್ಯದಲ್ಲಿ ಪ್ರತಿನಿತ್ಯ ಲಕ್ಷಾಂತರ ಮಹಿಳೆಯರು ಈ ಶಕ್ತಿ ಯೋಜನೆಯ ಅಡಿಯಲ್ಲಿ ಉಚಿತವಾಗಿ ಬಸ್ ಪ್ರಯಾಣ ಮಾಡುತ್ತಿದ್ದಾರೆ.

WhatsApp Group Join Now
Telegram Group Join Now

ಉಚಿತ ಬಸ್ ಪ್ರಯಾಣಕ್ಕೆ ಆಧಾರ್ ಕಾರ್ಡ್ ಕಡ್ಡಾಯ
ಇನ್ನು ಶಕ್ತಿ ಯೋಜನೆಯ ಅಡಿಯಲ್ಲಿ ಉಚಿತವಾಗಿ ಬಸ್ ಪ್ರಯಾಣ ಮಾಡಲು ಆಧಾರ್ ಕಾರ್ಡ್ (Aadhaar Card) ಕಡ್ಡಾಯವಾಗಿದೆ. ಮಹಿಳೆಯರು ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ತೋರಿಸಿದರೆ ಮಾತ್ರ ಸರ್ಕಾರೀ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ಇನ್ನು ಈಗ ರಾಜ್ಯ ಸರ್ಕಾರ ಶಕ್ತಿ ಯೋಜನೆಯ ನಿಯಮವನ್ನು ಬದಲಾವಣೆ ಮಾಡುವುದರ ಮೂಲಕ ರಾಜ್ಯದ ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದೆ. ಹೌದು, ಇನ್ನುಮುಂದೆ ಮಹಿಳೆಯರು ಆಧಾರ್ ಕಾರ್ಡ್ ಇಲ್ಲದೆ ಕೂಡ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು.

ಇನ್ನುಮುಂದೆ ಆಧಾರ್ ಕಾರ್ಡ್ ಇಲ್ಲದೆ ಕೂಡ ಪ್ರಯಾಣ ಮಾಡಬಹುದು
ಹೌದು, ಇನ್ನುಮುಂದೆ ಮಹಿಳೆಯರು ಬಸ್ಸುಗಳಲ್ಲಿ ಪ್ರಯಾಣ ಮಾಡುವ ಸಮಯದಲ್ಲಿ ಆಧಾರ್ ಕಾರ್ಡ್ ತೋರಿಸುವ ಬದಲು ಸ್ಮಾರ್ಟ್ ಕಾರ್ಡ್ ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದು. ಕೆಲವು ತಿಂಗಳುಗಳ ಹಿಂದೆ ಕರ್ನಾಟಕ ಸರ್ಕಾರ ಸ್ಮಾರ್ಟ್ ಕಾರ್ಡ್ (Shakti Scheme Smart Card) ಯೋಜನೆಯನ್ನು ಜಾರಿಗೆ ತಂದು ಅದನ್ನು ಮಹಿಳೆಯರಿಗೆ ವಿತರಣೆ ಮಾಡುವ ಕೆಲಸ ಮಾಡುತ್ತಿದೆ. ಮಹಿಳೆಯರು ಆಧಾರ್ ಕಾರ್ಡ್ ಬದಲಿದೆ ಈ ಸ್ಮಾರ್ಟ್ ಕಾರ್ಡ್ ತೋರಿಸುವುದರ ಮೂಲಕ ಇನ್ನುಮುಂದೆ ಉಚಿತವಾಗಿ ಬಸ್ಸುಗಳಲ್ಲಿ ಪ್ರಯಾಣ ಮಾಡಬಹುದಾಗಿದೆ.

ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳುವುದು ಹೇಗೆ…?
ಸಕಷ್ಟು ಮಹಿಳೆಯರಿಗೆ ಈ ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳುವುದು ಹೇಗೆ ಅನ್ನುವುದರ ಬಗ್ಗೆ ಮಾಹಿತಿ ಬಂದಿಲ್ಲ. ಮಹಿಳೆಯರು ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳಲು ಗ್ರಾಮ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿನೀಡಬೇಕಾಗಿದೆ. ಗ್ರಾಮ ಒನ್ ಕಚೇರಿಯಲ್ಲಿ ನಿಮ್ಮ ಆಧಾರ್ ಕಾರ್ಡ್ ಮತ್ತು ಕೆಲವು ಅಗತ್ಯ ಮಾಹಿತಿಯನ್ನು ನೀಡುವುದರ ಮೂಲಕ ಮಹಿಳೆಯರು ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳಬಹುದು. ಅರ್ಜಿ ಸಲ್ಲಿಸಿದ ನಂತರ ನಿಮಗೆ ನೀಡಲಾಗುವ ರಸೀದಿಯನ್ನು ಸ್ಮಾರ್ಟ್ ಕಾರ್ಡ್ ಎಂದು ಕರೆಯಲಾಗುತ್ತದೆ ಮತ್ತು ಆ ರಸೀದಿಯನ್ನು ತೋರಿಸುವುದರ ಮೂಲಕ ಸರ್ಕಾರೀ ಬಸ್ಸುಗಳಲ್ಲಿ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದು.

Leave a Comment