Gold Rate December 2025: ದೇಶದಲ್ಲಿ ದಿನಗಳು ಉರುಳುತ್ತಿದ್ದಂತೆ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ ಎಂದು ಹೇಳಬಹುದು. ಹೌದು, ದೇಶದಲ್ಲಿ ಚಿನ್ನದ ಬೆಲೆ ದಾಖಲೆಯ ಏರಿಕೆ ಕಂಡಿದ್ದು ಇದು ಬಡಜನರ ಮತ್ತು ಮಧ್ಯಮ ವರ್ಗದ ಜನರ ಬಿಸಾರಕ್ಕೆ ಕಾರಣವಾಗಿದೆ. ಈನಡುವೆ ದೇಶದಲ್ಲಿ ಚಿನ್ನದ ಖರೀದಿ ಮಾಡುವವರಿಗೆ ತಜ್ಞರಿಂದ ಒಂದು ಬೇಸರದ ಸುದ್ದಿ ಬಂದಿದೆ ಎಂದು ಹೇಳಬಹುದು. 2025 ರ ಡಿಸೆಂಬರ್ ಸಮಯದಲ್ಲಿ ಚಿನ್ನದ ಬೆಲೆ ಎಷ್ಟಾಗಲಿದೆ ಅನ್ನುವುದರ ಬಗ್ಗೆ ಈಗ ತಜ್ಞರು ಅಭಿಪ್ರಾಯವನ್ನು ಹೊರಹಾಕಿದ್ದು ಇದು ಚಿನ್ನ ಪ್ರಿಯರ ಬೇಸರಕ್ಕೆ ಕಾರಣವಾಗಿದೆ. ಹಾಗಾದರೆ ಡಿಸೆಂಬರ್ ಅಂತ್ಯದಲ್ಲಿ ದೇಶದಲ್ಲಿ ಚಿನ್ನದ ಬೆಲೆ ಎಷ್ಟಾಗಲಿದೆ ಮತ್ತು ಚಿನ್ನದ ಬೆಲೆ ಏರಿಕೆ ಆಗಲು ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ದೇಶದಲ್ಲಿ ದಾಖಲೆಯ ಏರಿಕೆ ಕಂಡ ಚಿನ್ನದ ಬೆಲೆ
ದೇಶದಲ್ಲಿ ಚಿನ್ನದ ಬೆಲೆ ಕಳೆದ ಎರಡು ತಿಂಗಳಿಂದ ದಾಖಲೆಯ ಮಟ್ಟದಲ್ಲಿ ಏರಿಕೆ ಕಾಣುತ್ತಿರುವುದನ್ನು ನಾವು ನೀವೆಲ್ಲ ಗಮನಿಸಿರಬಹುದು. ಕಳೆದ ವರ್ಷದ ಏಪ್ರಿಲ್ ತಿಂಗಳಲ್ಲಿ 7,000 ರೂಪಾಯಿಯ ಗಾಡಿಯಲ್ಲಿ ಇದ್ದ ಚಿನ್ನದ ಬೆಲೆ ಇಂದು 9,000 ಸಾವಿರಕ್ಕೆ ಬಂದು ತಲುಪಿದೆ. ಕಳೆದ ಒಂದು ವರ್ಷದಲ್ಲಿ ಚಿನ್ನದ ಬೆಲೆ ದಾಖಲೆಯ 2,000 ರೂಪಾಯಿ ಏರಿಕೆ ಕಂಡಿದೆ ಎಂದು ಹೇಳಬಹುದು. ಇನ್ನು ಇಂದು ಕರ್ನಾಟದಲ್ಲಿ 22 ಕ್ಯಾರಟ್ ನ ಒಂದು ಗ್ರಾಂ ಚಿನ್ನದ ಬೆಲೆ 8,945 ರೂಪಾಯಿ ಆಗಿದೆ ಮತ್ತು 24 ಕ್ಯಾರಟ್ ನ ಚಿನ್ನದ ಬೆಲೆ 9758 ರೂಪಾಯಿ ಆಗಿದೆ.
2025 ರ ಡಿಸೆಂಬರ್ ನಲ್ಲಿ ಚಿನ್ನದ ಬೆಲೆ ಎಷ್ಟಾಗಲಿದೆ
ತಜ್ಞರು 2025 ಡಿಸೆಂಬರ್ ತಿಂಗಳಲ್ಲಿ ಒಂದು ಚಿನ್ನದ ಬೆಲೆ ಎಷ್ಟಾಗಲಿದೆ ಅನ್ನುವುದರ ಬಗ್ಗೆ ಅಭಿಪ್ರಾಯವನ್ನು ಹೊರಹಾಕಿದ್ದಾರೆ. ಇನ್ನು ತಜ್ಞರ ಅಭಿಪ್ರಾಯದ ಪ್ರಕಾರ, ಡಿಸೆಂಬರ್ ತಿಂಗಳಲ್ಲಿ 22 ಕ್ಯಾರಟ್ ನ ಒಂದು ಗ್ರಾಂ ಚಿನ್ನದ ಬೆಲೆ 10,700 ರೂಪಾಯಿ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅದೇ ರೀತಿಯಲ್ಲಿ 24 ಕ್ಯಾರಟ್ ನ ಒಂದು ಗ್ರಾಂ ಚಿನ್ನದ ಬೆಲೆ 11,800 ರೂಪಾಯಿ ತನಕ ಹೋಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯ ಹೊರಹಾಕಿದ್ದಾರೆ. ಚಿನ್ನದ ಬೆಲೆಯಲ್ಲಿ ಮುಂದಿನ ವರ್ಷದಲ್ಲಿ ಗಣನೀಯ ಏರಿಕೆ ಆಗಲಿದ್ದು, ಮುಂದಿನ ಕೆಲವು ವರ್ಷದಲ್ಲಿ ಚಿನ್ನ ಕೇವಲ ಶ್ರೀಮಂತ ವ್ಯಕ್ತಿಗಳಿಗೆ ಮಾತ್ರ ಸೀಮಿತವಾಗಿದೆ.
ಚಿನ್ನದ ಬೆಲೆ ಏರಿಕೆಗೆ ಕಾರಣಗಳು ಏನು…?
ತಜ್ಞರ ಅಭಿಪ್ರಾಯದ ಪ್ರಕಾರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಗಣನೀಯ ಪ್ರಮಾಣದಲ್ಲಿ ಏರಿಕೆ ಆಗುತ್ತಿರುವುದು ಭಾರತದಲ್ಲಿ ಚಿನ್ನದ ಬೆಲೆ ಏರಿಕೆ ಆಗಲು ಪ್ರಮುಖವಾದ ಕಾರಣ ಎಂದು ಹೇಳಲಾಗುತ್ತಿದೆ. ಅದೇ ರೀತಿಯಲ್ಲಿ ಷೇರು ಮಾರುಕಟ್ಟೆಯಲ್ಲಿ ಆಗುತ್ತಿರುವ ಏರಿಳಿತ ಕೂಡ ಚಿನ್ನದ ಬೆಲೆ ಏರಿಕೆಗೆ ಪ್ರಮುಖವಾದ ಕಾರಣಗಳಲ್ಲಿ ಒಂದಾಗಿದೆ. ಮುಂದಿನ ಕೆಲವು ವರ್ಷದಲ್ಲಿ ಚಿನ್ನದ ಬೆಲೆ ಇನ್ನಷ್ಟು ಏರಿಕೆ ಆಗುವುದರ ಕಾರಣ ಶ್ರೀಮಂತರು ಮಾತ್ರ ಚಿನ್ನ ಖರೀದಿ ಮಾಡುತ್ತಾರೆ, ಆ ಕಾರಣಗಳಿಂದ ಚಿನ್ನ ತನ್ನ ಅಸ್ತಿತ್ವ ಕಳೆದುಕೊಳ್ಳುವ ಸಾಧ್ಯತೆ ಕೂಡ ಇದೆ ಎಂದು ಹೇಳಲಾಗುತ್ತಿದೆ.