Benefits Of Bengaluru Second Airport: ಬೆಂಗಳೂರಿನ ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜನ ದಟ್ಟಣೆಯನ್ನು ಕಡಿಮೆ ಮಾಡಲು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರಿನಲ್ಲಿ ನಿರ್ಮಾಣ ಮಾಡಲು ಸರ್ಕಾರ ಯೋಜನೆಯನ್ನು ಹಾಕಿಕೊಂಡಿದೆ. ಬೆಂಗಳೂರು ತಂತ್ರಜ್ಞಾನ ಮತ್ತು ಕೈಗಾರಿಕಾ ಕೇಂದ್ರವಾಗಿ ಬೆಳೆಯುತ್ತಿರುವುದರಿಂದ ವಿಮಾನ ಸಂಚಾರದ ಬೇಡಿಕೆ ಭಾರೀ ಹೆಚ್ಚಳವಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅನಿವಾರ್ಯವಾಗಿದೆ. ಇದರ ನಡುವೆ ತಮಿಳುನಾಡು ಸರ್ಕಾರ ಕೂಡ ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಮುಂದಾಗಿತ್ತು. ಆದರೆ ಇದಕ್ಕೆ ಇದೀಗ ಕೇಂದ್ರ ಸರ್ಕಾರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಹಾಗಾದರೆ ಬೆಂಗಳೂರಿನಲ್ಲಿ ಎರಡನೆಯ ವಿಮಾನ ನಿಲ್ದಾಣ ಮಾಡುವುದರಿಂದ ಏನೇನು ಲಾಭ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಎರಡನೇ ವಿಮಾನ ನಿಲ್ದಾಣ ಏಕೆ ಅನಿವಾರ್ಯ
ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಿನದಿಂದ ದಿನಕ್ಕೆ ವಿಮಾನ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನು ಜನ ದಟ್ಟಣೆ ಹೆಚ್ಚಾಗಲಿದ್ದು, ಇದನ್ನು ತಪ್ಪಿಸುವ ಉದ್ದೇಶದಿಂದ ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅನಿವಾರ್ಯವಾಗಲಿದೆ. ದೆಹಲಿ ಮತ್ತು ಮುಂಬೈನಂತೆ ಬೆಂಗಳೂರೂ ಎರಡು ವಿಮಾನ ನಿಲ್ದಾಣಗಳನ್ನು ಹೊಂದಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ. ಈ ಯೋಜನೆಯಿಂದ ನಗರದ ಆರ್ಥಿಕ ಬೆಳವಣಿಗೆಗೆ ಹೆಚ್ಚಿನ ಪ್ರೋತ್ಸಾಹ ಬರಲಿದೆ.
ಎರಡನೇ ವಿಮಾನ ನಿಲ್ದಾಣದ ದೊಡ್ಡ ಸಮಸ್ಯೆ ಪರಿಹಾರ
ಬೆಂಗಳೂರಿನಲ್ಲಿ ಎರಡನೇ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲು ಮುಂದಾದ ಬೆನ್ನಲ್ಲೇ ತಮಿಳುನಾಡು ಸರ್ಕಾರ ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವ ಮೂಲಕ ಬೆಂಗಳೂರಿಗೆ ಪೈಪೋಟಿ ನೀಡಲು ಮುಂದಾಗಿತ್ತು. ತಮಿಳುನಾಡು ಸರ್ಕಾರ ಕರ್ನಾಟಕದ ಗಡಿಗೆ ಸಮೀಪದಲ್ಲಿರುವ ಹೊಸೂರಿನಲ್ಲಿ ಹೊಸ ವಿಮಾನ ನಿಲ್ದಾಣವನ್ನು ನಿರ್ಮಿಸಲು ಯೋಜನೆ ಹಾಕಿಕೊಂಡಿತ್ತು, ಆದರೆ ಕೇಂದ್ರ ಸರ್ಕಾರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ವಿಮಾನ ನಿಲ್ದಾಣದ ಬಗ್ಗೆ ಕೇಂದ್ರದ ಸ್ಪಷ್ಟನೆ
ಪ್ರಮುಖವಾಗಿ ಬೆಂಗಳೂರಿನ ಎರಡನೇ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ತಮಿಳುನಾಡಿನ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದಲ್ಲಿ ವಾಯುಮಾರ್ಗ ಪ್ರಮುಖ ಸಮಸ್ಯೆ ಆಗಿತ್ತು. ಆದರೆ ಈಗ ತಮಿಳುನಾಡಿನ ಯೋಜನೆ ತಲೆಕೆಳಗೆ ಆಗಿರುವುದರಿಂದ ಏರ್ ಟ್ರಾಫಿಕ್ ಸಮಸ್ಯೆ ಪರಿಹಾರವಾಗಿದೆ. ಕೇಂದ್ರ ಸರ್ಕಾರ ಮತ್ತು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL) ನಡುವೆ ಸಹಿ ಹಾಕಲಾದ ಒಪ್ಪಂದದ ಅಡಿಯಲ್ಲಿ, BIAL ನ ಸ್ಪಷ್ಟ ಅನುಮೋದನೆ ಇಲ್ಲದೆ 2033 ರ ವರೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ( KIA ) 150 ಕಿಲೋಮೀಟರ್ ವ್ಯಾಪ್ತಿಯೊಳಗೆ ಯಾವುದೇ ಹೊಸ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆಯಲ್ಲಿ ತಿಳಿಸಿದೆ.
ಎರಡನೆಯ ವಿಮಾನ ನಿಲ್ದಾಣದಿಂದ ಆಗುವ ಪ್ರಯೋಜನ
- ಬೆಂಗಳೂರಿನಲ್ಲಿ ವಿಮಾನ ಸಂಚಾರ ಸೌಲಭ್ಯ ಹೆಚ್ಚಾಗಲಿದೆ
- ಕೈಗಾರಿಕೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆ ಆಗಲಿದೆ
- ದೇಶೀಯ ಮತ್ತು ಅಂತಾರಾಷ್ಟ್ರೀಯ ಪ್ರಯಾಣ ಸುಗಮವಾಗಲಿದೆ.
- ರಿಯಲ್ ಎಸ್ಟೇಟ್ ಮತ್ತು ಪ್ರಾದೇಶಿಕ ಬೆಳವಣಿಗೆ
- ಪ್ರವಾಸೋದ್ಯಮ ಮತ್ತು ಹೂಡಿಕೆ ಆಕರ್ಷಣೆ
- ಉದ್ಯೋಗ ಸೃಷ್ಟಿ – ಈ ಯೋಜನೆಯಿಂದ ನೇರವಾಗಿ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿವೆ.
Disclaimer: This information is provided for awareness purposes only. For personalised legal advice, consult a qualified professional and refer to official government notifications.

