Ration Card Update: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗಾಗಿ ಕಾಯುತ್ತಿರುವವರಿಗೆ ಬಿಗ್ ಅಪ್ಡೇಟ್.
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗಾಗಿ ಕಾಯುತ್ತಿರುವವರಿಗೆ ಬಿಗ್ ಅಪ್ಡೇಟ್
New Ration Card Application 2024: ಸದ್ಯ ರಾಜ್ಯದಲ್ಲಿ ಪಡಿತರ ಚೀಟಿಗೆ ಸಂಬಂಧಿಸಿದಂತೆ ಅನೇಕ ಅಪ್ಡೇಟ್ ಹೊರಬೀಳುತ್ತಿದೆ. ರಾಜ್ಯದ ಜನತೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗಾಗಿ ಕಾಯುತ್ತಿದ್ದಾರೆ. ಇದೀಗ ರಾಜ್ಯ ಸರ್ಕಾರ ಹೊಸ ರೇಷನ್ ಕಾರ್ಡ್ ಗಾಗಿ ಕಾಯುತ್ತಿರುವವರಿಗೆ ಸಿಹಿ ಸುದ್ದಿ ನೀಡಿದೆ. ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದನ್ನು ಬಿಗ್ ಅಪ್ಡೇಟ್ ಹೊರಬಿದ್ದಿದೆ.
ರಾಜ್ಯದಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗಾಗಿ ಕಾಯುತ್ತಿರುವವರು ಸರ್ಕಾರ ಹೊಸ ನಿಯಮಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ. ನೀವು ಸರ್ಕಾರ ಯಾವುದೇ ನಿಯಮವನ್ನು ಉಲ್ಲಂಘಿಸಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ರು ಕೂಡ ನಿಮ್ಮ ಅರ್ಜಿ ತಿರಸ್ಕಾರಗೊಳ್ಳುವುದರಲ್ಲಿ ಯಾವೂದೆ ಸಂದೇಹವಿಲ್ಲ.
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗಾಗಿ ಕಾಯುತ್ತಿರುವವರಿಗೆ ಬಿಗ್ ಅಪ್ಡೇಟ್
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಬಗ್ಗೆ ರಾಜ್ಯ ಸರ್ಕಾರ ಘೋಷಿಸಿದೆ. ಕರ್ನಾಟಕ ಪಡಿತರ ಚೀಟಿ ಪಟ್ಟಿಯಲ್ಲಿ ಹೆಸರಿಲ್ಲದ ಎಲ್ಲ ಜನರು ಈಗ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು ಮತ್ತು ಅರ್ಜಿಯ ಸ್ಥಿತಿಯನ್ನು ಸಹ ಪರಿಶೀಲಿಸಬಹುದು.
ಇದೀಗ ನಾವು ಈ ಲೇಖನದಲ್ಲಿ ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು, ಅರ್ಜಿ ಸಲ್ಲಿಕೆಗೆ ಬೇಕಾದ ಅರ್ಹತೆಗಳು ಹಾಗೆಯೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗೆ ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ. ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ನೀವು ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟ್ https://ahara.kar.nic.in/Home/EServices ಗೆ ಭೇಟಿ ನೀಡಬಹುದು. ಇಲ್ಲಿ ಕೇಳಲಾದ ಅಗತ್ಯ ಮಾಹಿತಿಯನ್ನು ನೀಡಿ ನೀವು ಹೊಸ ಪಡಿತರ ಚಿತೆಗೆ ಅರ್ಜಿಯನ್ನು ಸಲ್ಲಿಸಬಹುದು.
ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು….?
*ಅರ್ಜಿದಾರರು ಸ್ಥಳೀಯ ನಿವಾಸಿಯಾಗಿರುವುದು ಕಡ್ಡಾಯವಾಗಿರುತ್ತದೆ.
*ಅರ್ಜಿದಾರರು ಈಗಾಗಲೇ ಯಾವುದೇ ಪಡಿತರ ಚೀಟಿ ಹೊಂದಿರಬಾರದು.
*ಕುಟುಂಬದ ಅರ್ಹತೆಗೆ ಅನುಗುಣವಾಗಿ ಪಡಿತರ ಚೀಟಿಯನ್ನೂ ನೀಡಲಾಗುವುದು.
ಈ ದಾಖಲೆಗಳು ಇದ್ದರೆ ಮಾತ್ರ ಅರ್ಜಿ ಸಲ್ಲಿಕೆ ಸಾಧ್ಯ
*ಮತದಾರರ ಗುರುತಿನ ಚೀಟಿ
*ಆಧಾರ್ ಕಾರ್ಡ್
*ವಯಸ್ಸಿನ ಪ್ರಮಾಣಪತ್ರ
*ಚಾಲನಾ ಪರವಾನಿಗೆ
*ಸ್ವಯಂ ಘೋಷಿತ ಪ್ರಮಾಣಪತ್ರ
*ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
*ಮೊಬೈಲ್ ನಂ.
*ಮನೆಯ ಸದಸ್ಯರ ಬಗ್ಗೆ ಮಾಹಿತಿ