Karnataka Rain Alerts: ರಾಜ್ಯದಲ್ಲಿ ಬೇಸಿಗೆ ಬಿಸಿ ಹೆಚ್ಚಾದ ಕಾರಣ ಜನರು ಹೈರಾಣಾಗಿ ಹೋಗಿದ್ದಾರೆ. ಇದರನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಅದರ ಪರಿಣಾಮ ನಮ್ಮ ಕರ್ನಾಟಕದ ಮೇಲೆ ಆಗುತ್ತಿದೆ ಮತ್ತು ಬಂಗಾಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ಇಂದಿನಿಂದ ಮೂರೂ ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬೇಸಿಗೆಯ ಬಿಸಿಯ ನಡುವೆ ರಾಜ್ಯದ ಈ ಜಿಲ್ಲೆಗಳಲ್ಲಿ ಬಾರೀ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹಾಗಾದರೆ ಮುಂದಿನ ಮೂರೂ ದಿನ ರಾಜ್ಯದ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಇರಲಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ರಾಜ್ಯದಲ್ಲಿ ಹೆಚ್ಚಾದ ಬೇಸಿಗೆಯ ಬಿಸಿ
ರಾಜ್ಯದ ಬೇಸಿಗೆಯ ಬಿಸಿ ಹೆಚ್ಚಾಗಿದ್ದು ಬಿಸಿಲಿನ ತಾಪಕ್ಕೆ ಜನರು ಕಂಗಾಲಾಗಿ ಹೋಗಿದ್ದಾರೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಮಳೆಯ ಪ್ರಭಾವ ಕಡಿಮೆ ಆಗಿತ್ತು, ಆದರೆ ಈಗ ಮತ್ತೆ ಮಳೆಯ ಆರ್ಭಟ ಹೆಚ್ಚಾಗಿದ್ದು ಮುಂದಿನ ಮೂರೂ ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಾರೀ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಬಾರೀ ಪ್ರಮಾಣದಲ್ಲಿ ಆಗಲಿದ್ದು ರಾಜ್ಯದ ಹಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ.
ಇಂದಿನಿಂದ ಮೂರೂ ದಿನ ಈ ಜಿಲ್ಲೆಗಳಲ್ಲಿ ಬಾರೀ ಮಳೆ
ಹವಾಮಾ ಇಲಾಖೆಯ ವರದಿಯ ಪ್ರಕಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕುಲಬುರಗಿ, ದಾವಣಗೆರೆ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೋಲಾರ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಮೂರೂ ದಿನ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದೇ ರೀತಿಯಲ್ಲಿ ಗದಗ, ಧಾರವಾಡ, ಕೊಪ್ಪಳ, ಯಾದಗಿರಿ, ಬಳ್ಳಾರಿ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಏಪ್ರಿಲ್ 30 ರ ತನಕ ಬಾರೀ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.