Rain Update: ದೇಶದಲ್ಲಿ ದಿನಗಳು ಉರುಳುತ್ತಿದಂತೆ ಬಿಸಿಲಿನ ಬೇಗೆ ಹೆಚ್ಚಾಗುತ್ತಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಪ್ರಸ್ತುತ ವರ್ಷದಲ್ಲಿ ಬಿಲಿಸಿನ ತಾಪ ಹೆಚ್ಚಾಗಿದೆ ಎಂದು ಹೇಳಬಹುದು. ಅದೆಷ್ಟೋ ಜಿಲ್ಲೆಗಳಲ್ಲಿ ಬಿಸಿಲಿನ ತಾಪಕ್ಕೆ ಈಗಲೇ ನೀರಿನ ಸಮಸ್ಯೆ ಉಂಟಾಗಿದೆ. ಹೌದು ರಾಜ್ಯದಲ್ಲಿ ತಾಪಮಾನ ಹೆಚ್ಚಾಗಿದ್ದು ಈ ನಡುವೆ ಹವಾಮಾನ ಇಲಾಖೆ ತಾಪಮಾನ ಹೆಚ್ಚಾದ ಬಗ್ಗೆ ಎಚ್ಚರಿಕೆ ನೀಡಿತ್ತು. ಸದ್ಯ ಬಿಸಿಲಿನ ಬೇಗೆಗೆ ಬೇಸತ್ತ ಜನರಿಗೆ ಹವಾಮಾನ ಇಲಾಖೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹೌದು ರಾಜ್ಯದ ಈ 11 ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹಾಗಾದರೆ ಯಾವ ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ರಾಜ್ಯದಲ್ಲಿ ಹೆಚ್ಚಾದ ತಾಪಮಾನ
ರಾಜ್ಯದಲ್ಲಿ ತಾಪಮಾನ ಹೆಚ್ಚಾಗಿತ್ತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿಲಿನ ತಾಪ ಹೆಚ್ಚಾಗಿದ್ದು ಈ ಕಾರಣಗಳಿಂದ ರಾಜ್ಯದ ಈ 11 ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ. ಮಾರ್ಚ್ ತಿಂಗಳಲ್ಲಿ ಸತತ ಮೂರೂ ದಿನಗಳ ಅವಧಿಪೂರ್ವ ಮುಂಗಾರು ಆರಂಭ ಆಗಲಿದೆ. ನಾಳೆಯಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಮತ್ತು ಉಡುಪಿ ಸೇರಿದಂತೆ 11 ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ.

ಈ 11 ಜಿಲ್ಲೆಗಳಲ್ಲಿ ಆಗಲಿದೆ ಭರ್ಜರಿ ಮಳೆ
ರಾಜ್ಯದಲ್ಲಿ 12 ರಿಂದ 14 ನೇ ತಾರೀಕಿನ ತನಕ ಭರ್ಜರಿ ಮಳೆಯಾಗಲಿದೆ. ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗಲಿದೆ ಮತ್ತು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಮತ್ತು ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಗುಡುಗು ಸಿಡಿಲು ಸಹಿತ ಮಳೆಯಾಗಲಿದ್ದು ಮೀನುಗಾರರು ಕೂಡ ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 15 ರ ನಂತರ ಮುಂಗಾರು ಆರಂಭ
ಹೌದು, ಹವಾಮಾನ ಇಲಾಖೆ ನೀಡಿರುವ ವರದಿಯ ಪ್ರಕಾರ ಮೇ ತಿಂಗಳ 15 ರ ನಂತರ ರಾಜ್ಯದಲ್ಲಿ ಮುಂಗಾರು ಆರಂಭ ಆಗಲಿದೆ ಎಂದು ಹೇಳಲಾಗುತ್ತಿದೆ. ಮೇ 15 ರ ನಂತರ ಮುಂಗಾರು ಆರಂಭ ಆಗಲಿದೆ ಮತ್ತು ಕಳೆದ ವರ್ಷದ ಹಾಗೆ ಈ ವರ್ಷ ಕೂಡ ವರ್ಷಧಾರೆ ಚನ್ನಾಗಿ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 15 ರ ನಂತರ ರಾಜ್ಯಕ್ಕೆ ಮುಂಗಾರು ಪ್ರವೇಶ ಆಗಲಿದ್ದು ರೈತರು ಕೃಷಿ ಚಟುವಟಿಕೆ ಬೇಗ ಆರಂಭ ಮಾಡಬಹುದು.