Megha Shetty: ಸಕತ್ ಜಿಮ್ ಮಾಡಿದ ನಟಿ ಮೇಘ ಶೆಟ್ಟಿ, ವೈರಲ್ ಆಗಿದೆ ನಟಿಯ ವರ್ಕ್ ಔಟ್ ಫೋಟೋಸ್.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಮೇಘ ಶೆಟ್ಟಿ ವ್ಯಾಯಾಮ ಮಾಡಿ ಬೆವರು ಸುರಿಸುತ್ತಿರುವ ಫೋಟೋಗಳು.
Megha Shetty GYM Workout: ಕಿರುತೆರೆಯ ಖ್ಯಾತ ನಟಿ ಮೇಘಾ ಶೆಟ್ಟಿ (Megha Shetty) ಇದೀಗ ಸುದ್ದಿಯಲ್ಲಿದ್ದಾರೆ. ಜೊತೆ ಜೊತೆಯಲಿ ಧಾರಾವಾಹಿ ಮೂಲಕ ಜನರ ಮನ ಗೆದ್ದ ನಟಿ ಮೇಘಾ ಶೆಟ್ಟಿ ಈಗ ಸಿನಿಮಾದಲ್ಲಿ ಸಹ ನಟಿಸುತ್ತಿದ್ದಾರೆ.
ನಟಿ ಮೇಘಾ ಶೆಟ್ಟಿ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ನಟಿಸಿ ಹೆಚ್ಚು ಜನಪ್ರಿಯತೆ ಪಡೆದಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜೊತೆ ಜೊತೆಯಲಿ ಧಾರಾವಾಹಿ ಈಗಾಗಲೇ ಮುಗಿದಿದೆ.
ನಟಿ ಮೇಘಾ ಶೆಟ್ಟಿ ವರ್ಕೌಟ್ ಮಾಡುತ್ತಿರುವ ಫೋಟೋ ವೈರಲ್
ಧಾರಾವಾಹಿ ಕೊನೆಯ ದಿನದ ಶೂಟಿಂಗ್ ಸಂದರ್ಭದಲ್ಲಿ ನಟಿ ಮೇಘಾ ಶೆಟ್ಟಿ ಧಾರಾವಾಹಿ ಬಗ್ಗೆ ಮತ್ತು ತಂಡದ ಬಗ್ಗೆ ಭಾವುಕತೆಯ ಮಾತನ್ನು ಆಡಿದ್ದಾರೆ. ಇದೀಗ ನಟಿ ಮೇಘಾ ಶೆಟ್ಟಿ ವರ್ಕೌಟ್ ಮಾಡಿದ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು ಬಾರಿ ವೈರಲ್ ಆಗುತ್ತಿದೆ.
ಈ ಫೋಟೋ ನೋಡಿ ಅಭಿಮಾನಿಗಳು ಮೆಚ್ಚುಗೆಯ ಕಮೆಂಟ್ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿಆಕ್ಟಿವ್ ಆಗಿರುವ ಮೇಘಾ ಶೆಟ್ಟಿ ಹೆಚ್ಚಾಗಿ ಫೋಟೋಶೂಟ್ ಮೂಲಕವೇ ಸುದ್ದಿಯಲ್ಲಿರುತ್ತಾರೆ ಎನ್ನಬಹುದು.
ವರ್ಕೌಟ್ ಮಾಡಿ ಬೆವರಿಳಿಸಿದ ನಟಿ ಮೇಘಾ ಶೆಟ್ಟಿ
ನಟಿ ಮೇಘಾ ಶೆಟ್ಟಿ ಧಾರಾವಾಹಿ ಮುಗಿಸಿ ಸಿನಿಮಾಗಳತ್ತ ಮುಖ ಮಾಡಿದ್ದಾರೆ. ಸಿನಿಮಾದಲ್ಲಿ ಮಿಂಚಲು ನಟಿ ಮೇಘಾ ಶೆಟ್ಟಿ ಅವರು ಸಖತ್ ಜಿಮ್ ವರ್ಕೌಟ್ ಮಾಡುತ್ತಿದ್ದಾರೆ. ಇದರ ಕುರಿತಾಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ನಟಿ ಮೇಘಾ ಶೆಟ್ಟಿ ಹೆಚ್ಚಾಗಿ ಅಭಿಮಾನಿಗಳ ಜೊತೆ ಫೋಟೋವನ್ನು ಹಂಚಿಕೊಳ್ಳುತ್ತ ಇರುತ್ತಾರೆ. ಇದೀಗ ಜಿಮ್ ನಲ್ಲಿ ವರ್ಕೌಟ್ ಮಾಡಿ ಬೆವರಿಳಿಸದ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿ ಮೇಘಾ ಶೆಟ್ಟಿ ಅಭಿಮಾನಿಗಳು ಫಿದಾ ಆಗಿದ್ದಾರೆ.