Rain Alert: ಮುಂದಿನ 48 ಘಂಟೆಗಳಲ್ಲಿ ಈ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ, ಆರೆಂಜ್ ಅಲರ್ಟ್.

ಮುಂದಿನ 48 ಗಂಟೆಗಳಲ್ಲಿ ಈ ಭಾಗಗಳಲ್ಲಿ ಬಾರಿ ಮಳೆಯಾಗುವ ಸಾಧ್ಯತೆ, ಆರೆಂಜ್ ಅಲರ್ಟ್ ನೀಡಿದ ಹವಾಮಾನ ಇಲಾಖೆ.

Rain Alert In Karnataka: ಹಲವು ದಿನಗಳಿಂದ ಜನರು ಬೇಸಿಗೆ ದಿನದ ಸುಡು ಬಿಸಿಲಿನಿಂದ ತತ್ತರಿಸಿದ್ದರು. ಇದೀಗ ಮಳೆಗಾಲ ಆರಂಭವಾಗಲು ಶುರುವಾಗಿದೆ. ಈಗಾಗಲೇ ರಾಜ್ಯದ ಕೆಲವು ಭಾಗಗಳಲ್ಲಿ ವರುಣನ ಆರ್ಭಟ ಶುರುವಾಗಿದೆ. ಇನ್ನುಮುಂದೆ ಸಹ ವರುಣನ ಆರ್ಭಟ ಹೆಚ್ಚಾಗಲಿದೆಯೆಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದಾರೆ.

Meteorological department notice about rain
Image Credit: latimes

ಮಳೆಯ ಬಗ್ಗೆ ಹವಾಮಾನ ಇಲಾಖೆ ಸೂಚನೆ
ದೆಹಲಿ ಏನ್ ಸಿ ಆರ್ ಸೇರಿದಂತೆ ಉತ್ತರ ಭಾರತದ ಹಲವು ಪ್ರದೇಶಗಳಲ್ಲಿ ಬುಧವಾರ ದಿನವಿಡೀ ಮೋಡ ಕವಿದ ವಾತಾವರಣವಿದ್ದು ನಯವಾದ ಗಾಳಿ ಬೀಸುತ್ತಿದೆ. ಇದರಿಂದ ಬಿಸಿಲಿನ ಬೇಗೆಯಿಂದ ಬೇಯುತ್ತಿದ್ದ ಜನತೆಗೆ ನೆಮ್ಮದಿ ಸಿಕ್ಕಂತೆ ಆಗಿದೆ.

ಮಳೆಯಿಂದಾಗಿ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಉತ್ತಮ ವಾತಾವರಣದಿಂದ ಜನಸಾಮಾನ್ಯರು ಕೊಂಚ ಖುಷಿ ಪಟ್ಟಿದ್ದಾರೆ. ಈಗ ಹವಾಮಾನ ಇಲಾಖೆಯು ಮೇ ಅಂತ್ಯದ ಹವಾಮಾನದ ಬಗ್ಗೆ ದೊಡ್ಡ ಅಪ್ಡೇಟ್ ನೀಡಿದ್ದು, ಹೇಗಿದೆ ಎಂದು ತಿಳಿಯೋಣ.

ಕರ್ನಾಟದಲ್ಲಿ ಮಳೆಯ ಸೂಚನೆ ನೀಡಿದ ಹವಾಮಾನ ಇಲಾಖೆ
ಮಾರ್ಚ್ ಮತ್ತು ಮೇ ತಿಂಗಳ ಬೇಸಿಗೆಯ ನಡುವೆ ಸಂಭವಿಸಿದ ಪೂರ್ವ ಮುಂಗಾರು ಮಳೆಯ ಪರಿಣಾಮದಿಂದ ಈ ಬಾರಿ ಕರ್ನಾಟಕದಲ್ಲಿ 52 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ರಾಜ್ಯಗಳಲ್ಲಿ 67.6 ಮೀ ಮೀ ಮಳೆಯನ್ನೂ ದಾಖಲಿಸಿದೆ. ಇನ್ನು ಕಳೆದ 4 ದಿನಗಳಲ್ಲಿ ಬೆಂಗಳೂರು ಸೇರಿ ಹಲವೆಡೆ 800 ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ.

Meteorological department issued warning of rain in Karnataka
Image Credit: ndtv

ಇನ್ನು ಮುಂದಿನ 2 ರಿಂದ ಮೂರೂ ದಿನ ಕರ್ನಾಟಕದಲ್ಲಿ ಮಳೆಯಾಗಲಿವೆ ಎಂದು ಇಲಾಖೆ ತಿಳಿಸಿವೆ. ಮೇ 25, 26 ಮತ್ತು 27 ರಂದು ಗುಡ್ಡಗಾಡು ಪ್ರದೇಶಗಳಲ್ಲಿ ಹಲವೆಡೆ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಪೂರ್ವ ಭಾರತದಲ್ಲಿ ಚಂಡಮಾರುತ ಪ್ರಭಾವಿಸುವ ಸಾಧ್ಯತೆಯೂ ಇದೆ ಎಂದು ಹೇಳಿದ್ದಾರೆ.

Join Nadunudi News WhatsApp Group

ದೆಹಲಿ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಉತ್ತರಾಖಂಡ, ಪಂಜಾಬ್, ಹರಿಯಾಣ ಮತ್ತು ಉತ್ತರಾಖಂಡದಲ್ಲಿ ಗಂಟೆಗೆ 50 ರಿಂದ 70 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸಬಹುದು. ಮತ್ತೊಂದೆಡೆ, ಮುಂದಿನ 2-3 ದಿನಗಳಲ್ಲಿ ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

Join Nadunudi News WhatsApp Group