Jio Annual Plan: ಮೂರು ರೀತಿಯ ವಾರ್ಷಿಕ ರಿಚಾರ್ಜ್ ಪ್ಲಾನ್ ಗಳನ್ನೂ ಬಿಡುಗಡೆ ಮಾಡಿದ ಜಿಯೋ.
ಇದೀಗ ಜಿಯೋ ತನ್ನ ಗ್ರಾಹಕರಿಗೆ 365 ದಿನಗಳ ಮಾನ್ಯತೆಯ ಮೂರು ಹೊಸ ರಿಚಾರ್ಜ್ ಪ್ಲಾನ್ ಅನ್ನು ಬಿಡುಗಡೆಗೊಳಿಸಿದೆ.ಜಿಯೋದ ಹೊಸ ವಾರ್ಷಿಕ ಯೋಜನೆಯ ವಿಶೇಷತೆಯ ಬಗ್ಗೆ ತಿಳಿಯೋಣ.
Jio Annual Recharge Plan: ಪ್ರತಿಷ್ಠಿತ ಟೆಲಿಕಾಂ ಕಂಪೆನಿಯಾದ ಜಿಯೋ (Jio) ಇದೀಗ ಹೊಸ ಹೊಸ ರಿಚಾರ್ಜ್ ಪ್ಲಾನ್ ಗಳನ್ನೂ ಬಿಡುಗಡೆ ಮಾಡುತ್ತಿವೆ. ವಿವಿಧ ರೀತಿಯ ಆಕರ್ಷಕ ರಿಚಾರ್ಜ್ ಪ್ಲಾನ್ ಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ. ಓಟಿಟಿ ಸೌಲಭ್ಯದ ಜೊತೆಗೆ ಹೆಚ್ಚಿನ ಡೇಟಾ ಸೌಲಭ್ಯವನ್ನು ನೀಡುತ್ತಿದೆ.
ಇದೀಗ ಜಿಯೋ ತನ್ನ ಗ್ರಾಹಕರಿಗೆ 365 ದಿನಗಳ ಮಾನ್ಯತೆಯ ಮೂರು ಹೊಸ ರಿಚಾರ್ಜ್ ಪ್ಲಾನ್ ಅನ್ನು ಬಿಡುಗಡೆಗೊಳಿಸಿದೆ. ಈ ಯೋಜನೆಯು ಗ್ರಾಹಕರಿಗೆ ತಿಂಗಳ ರಿಚಾರ್ಜ್ ಅನ್ನು ತಪ್ಪಿಸಲಿದೆ. ಜಿಯೋದ ಹೊಸ ವಾರ್ಷಿಕ ಯೋಜನೆಯ ವಿಶೇಷತೆಯ ಬಗ್ಗೆ ತಿಳಿಯೋಣ.
ಜಿಯೋ 2999 ರೂ. ಯೋಜನೆ
ಜಿಯೋ ತನ್ನ ಗ್ರಾಹಕರಿಗಾಗಿ 365 ದಿನಗಳ ಮಾನ್ಯತೆಯ ರಿಚಾರ್ಜ್ ಪ್ಲಾನ್ ಅನ್ನು ಘೋಷಿಸಿದೆ. ರೂ. 2999 ರಿಚಾರ್ಜ್ ಮಾಡಿದರೆ ಅನ್ಲಿಮಿಟೆಡ್ ಪ್ಲಾನ್ ನ ಪ್ರಯೋಜನವನ್ನು ಪಡೆಯಬಹುದು. ಪ್ರತಿನಿತ್ಯ 2.5GB ಡೇಟಾ ಜೊತೆಗೆ 100 SMS ಗಳ ಪ್ರಯೋಜನವನ್ನು ಪಡೆಯಬಹುದು.
ಜಿಯೋ 2879 ರೂ. ಯೋಜನೆ
ಜಿಯೋ ತನ್ನ ಗ್ರಾಹಕರಿಗಾಗಿ 365 ದಿನಗಳ ಮಾನ್ಯತೆಯ ರಿಚಾರ್ಜ್ ಪ್ಲಾನ್ ಅನ್ನು ಘೋಷಿಸಿದೆ. ರೂ. 2879 ರಿಚಾರ್ಜ್ ಮಾಡಿದರೆ ಅನ್ಲಿಮಿಟೆಡ್ ಕರೆಯ ಪ್ರಯೋಜನವನ್ನು ಪಡೆಯಬಹುದು. ಪ್ರತಿನಿತ್ಯ 2GB ಡೇಟಾ ಜೊತೆಗೆ 100 SMS ಗಳ ಪ್ರಯೋಜನವನ್ನು ಪಡೆಯಬಹುದು. ಜಿಯೋ ಸಿನಿಮಾ, ಜಿಯೋ ಸೆಕ್ಯೂರಿಟಿ ಅಪ್ಲಿಕೇಶನ್ ಗಳಿಗೆ ಉಚಿತ ಚಂದಾದಾರಿಕೆಯನ್ನು ಪಡೆಯಬಹುದು.
336 ದಿನಗಳ ವಾರ್ಷಿಕ ರಿಚಾರ್ಜ್ ಪ್ಲಾನ್ ಘೋಷಿಸಿದ ಜಿಯೋ
ಜಿಯೋ ತನ್ನ ಗ್ರಾಹಕರಿಗಾಗಿ 336 ದಿನಗಳ ಮಾನ್ಯತೆಯ ರಿಚಾರ್ಜ್ ಪ್ಲಾನ್ ಅನ್ನು ಘೋಷಿಸಿದೆ. ರೂ. 2545 ರಿಚಾರ್ಜ್ ಮಾಡಿದರೆ ಅನ್ಲಿಮಿಟೆಡ್ ಪ್ಲಾನ್ ನ ಪ್ರಯೋಜನವನ್ನು ಪಡೆಯಬಹುದು. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿನಿತ್ಯ 1.5GB ಡೇಟಾ ಜೊತೆಗೆ 100 SMS ಹಾಗೂ ಅನಿಯಮಿತ ಕರೆಯ ಪ್ರಯೋಜನವನ್ನು ಪಡೆಯಬಹುದು. ಜಿಯೋ ಅಪ್ಲಿಕೇಶನ್ ಗಳಿಗೆ ಉಚಿತ ಚಂದಾದಾರಿಕೆಯನ್ನು ಪಡೆಯಬಹುದು.