Ration Card Holders: ಡಿಸೆಂಬರ್ ಅಂತ್ಯದೊಳಗೆ ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ನಿಮ್ಮ ರೇಷನ್ ಕಾರ್ಡ್, ಕೇಂದ್ರದ ಆದೇಶ.

Ration Card ಹೊಂದಿರುವವರು December 31 ರೊಳಗೆ ಈ ಕೆಲಸ ಮಾಡಿಕೊಳ್ಳುವುದು ಉತ್ತಮವಾಗಿದೆ.

ration Card Cancellation In Karnataka: ಸದ್ಯ ರಾಜ್ಯದಲ್ಲಿ ಅನುಷ್ಠಾನಗೊಂಡಿರುವ ಕಾಂಗ್ರೆಸ್ ಉಚಿತ ಯೋಜನೆಗಳಿಗೆ Ration Card ಮುಖ್ಯವಾಗಿದೆ. ಇನ್ನು Ration Card ನ ಜೊತೆಗೆ Aadhaar Card ಕೂಡ ಅಷ್ಟೇ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಆಧಾರ್ ಕಾರ್ಡ್ ಮೂಲಕ ನೀವು ಸರ್ಕಾರದ ಎಲ್ಲ  ಸೌಲಭ್ಯವನ್ನು ಪಡೆಯಬಹುದಾಗಿದೆ.

ಇನ್ನು ಇತ್ತೀಚಿಗೆ ರೇಷನ್ ಕಾರ್ಡ್ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಕೇಂದ್ರ ಸರ್ಕಾರದಿಂದ ಮಾಹಿತಿ ಹೊರ ಬಿದ್ದಿದೆ. ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಸುದ್ದಿ ವೈರಲ್ ಆಗುತ್ತಿದ್ದಂತೆ ಸರ್ಕಾರ ಮತ್ತೆ ಗಡುವನ್ನು ಸೂಚಿಸಿದೆ. ಈಗಾಗಲೇ ಸರ್ಕಾರ ಆಧಾರ್ ಹಾಗೂ ರೇಷನ್ ಕಾರ್ಡ್ ಗೆ Septembar ಕೊನೆಯ ದಿನಾಂಕವನ್ನು ನಿಗದಿಪಡಿಸಿತ್ತು. ಇದೀಗ ಮತ್ತೆ ಗಡುವನ್ನು ವಿಸ್ತರಿಸಿದೆ.

Aadhaar Card Link To Ration Card
Image Credit: Informalnewz

Aadhaar Card Link To Ration Card
ದೇಶದಲ್ಲಿ ನಡೆಯುತ್ತಿರುವ ಅಕ್ರಮವನ್ನು ತಡೆಯಲು ಸರ್ಕಾರ ರೇಷನ್ ಕಾರ್ಡ್ ಹಾಗು ಆಧಾರ್ ಕಾರ್ಡ್ ಲಿಂಕ್ ಅನ್ನು ಕಡ್ಡಾಯಗೊಳಿಸಿದೆ. ಹಾಗೆಯೆ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಯಲ್ಲಿ ಪ್ರತಿ ವ್ಯಕ್ತಿಗೆ ಹತ್ತು ಕೆಜಿ ಅಕ್ಕಿ ನೀಡುವುದಾಗಿ ಘೋಷಣೆ ಮಾಡಲಾಗಿತ್ತು. ಆದರೆ ಕೆಲವು ಸಮಸ್ಯೆಗಳಿಂದ ಈಗ ಅಕ್ಕಿ ಬದಲು ಹಣ ನೀಡುವುದಾಗಿ ಸರ್ಕಾರ ಮಾಹಿತಿ ನೀಡಿದೆ.

ಈ ಬೆಳವಣಿಗೆ ಹಿನ್ನಲೆ ಹೊಸ ರೇಷನ್ ಕಾರ್ಡ್ ಅನ್ನು ಪಡೆಯಲು ಹಲವು ಜನ ಕಾಯುತ್ತಿದ್ದಾರೆ. ಇನ್ನು ಅನರ್ಹ ವ್ಯಕ್ತಿಗಳು ಕೂಡ ಪಡಿತರ ವಿತರಣೆಯ ಲಾಭವನ್ನು ಪಡೆಯುತ್ತಿದ್ದಾರೆ. ಇದನ್ನು ತಡೆಗಟ್ಟಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಈ ನಡುವೆ ಕೇಂದ್ರ ಸರ್ಕಾರ ಮಹತ್ವದ ಮಾಹಿತಿ ನೀಡಿದ್ದು, ರೇಷನ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ ಲಿಂಕ್‌ಗೆ ನೀಡಲಾಗಿದ್ದ ಗಡುವನ್ನು ವಿಸ್ತರಣೆ ಮಾಡಿದೆ.

Aadhaar Card And Ration Card Latest Update
Image Credit: Pipanews

ಡಿಸೆಂಬರ್ ಅಂತ್ಯದೊಳಗೆ ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ನಿಮ್ಮ ರೇಷನ್ ಕಾರ್ಡ್
ಪಡಿತರ ಚೀಟಿ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡುವು ಅಗತ್ಯವಾಗಿದೆ. December 31 ರೊಳಗೆ ಈ ಕೆಲಸ ಮಾಡಿಕೊಳ್ಳುವುದು ಉತ್ತಮವಾಗಿದೆ. ಅಂತ್ಯೋದಯ ಯೋಜನೆ, ಆದ್ಯತೆಯ ವಸತಿ ಯೋಜನೆಗಳ ಪ್ರಯೋಜನವನ್ನು ಪಡೆಯಲು ಪಡಿತರ ಚೀಟಿದಾರರು ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಬೇಕಿದೆ.

Join Nadunudi News WhatsApp Group

ಅನರ್ಹರು ಕೂಡ ಉಚಿತ ಪಡಿತರ ಸೌಲಭ್ಯವನ್ನು ಪಡೆದುಕೊಳ್ಳುವ ಮೂಲಕ ವಂಚನೆಯನ್ನು ಮಾಡುತ್ತಿರುವುದು ಸದ್ಯ ಸರ್ಕಾರದ ಗಮನಕ್ಕೆ ಬಂದಿದೆ. ಆಧಾರ್ ಜೊತೆ ರೇಷನ್ ಕಾರ್ಡ್ ಮಾಡುವುದು ಈ ವಂಚನೆಯನ್ನು ತಡೆಯುವ ಮೂಲ ಉದ್ದೇಶವಾಗಿದೆ.

Join Nadunudi News WhatsApp Group