Aadhar Update: ಈಗ 1 ನಿಮಿಷದಲ್ಲಿ ಬದಲಾಯಿಸಿ ನಿಮ್ಮ ಆಧಾರ್ ಕಾರ್ಡ್ ನಲ್ಲಿ ಇರುವ ಫೋಟೋ, ಹೊಸ ಅಪ್ಡೇಟ್.

ಸುಲಭ ವಿಧಾನದ ಮೂಲಕ ಮನೆಯಲ್ಲೇ ಕುಳಿತು ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬಲಿಸಬಹುದು.

Aadhar Card Photo Update: ಇತ್ತೀಚಿನ ದಿನಗಳಲ್ಲಿ ಆಧಾರ್ ಕಾರ್ಡ್ (Aadhar Card) ಪ್ರಮುಖ ದಾಖಲೆಯಾಗಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ರೀತಿಯ ಕೆಲಸ ಆಗಬೇಕಿದ್ದರು ಕೂಡ ಆಧಾರ್ ಕಾರ್ಡ್ ಮುಖ್ಯ ಪುರಾವೆಯಾಗಿದೆ.

ಆಧಾರ್ ಕಾರ್ಡ್ ಇಲ್ಲದೆ ಯಾವ ರೀತಿಯ ಕೆಲಸಗಳು ಕೂಡ ಪೂರ್ಣಗೊಳ್ಳುವುದಿಲ್ಲ. ಇನ್ನು ಆಧಾರ್ ಕಾರ್ಡ್ ಗೆ ಇನ್ನಿತರ ಮುಖ್ಯ ದಾಖಲೆಗಳನ್ನು ಲಿಂಕ್ ಮಾಡುವಂತೆ ಸರ್ಕಾರ ಸೂಚನೆ ನೀಡಿದೆ. ಇದೀಗ ಆಧಾರ್ ಕಾರ್ಡ್ ಸಂಬಂಧಿತ ಹೊಸ ಮಾಹಿತಿಯೊಂದು ಲಭಿಸಿದೆ.

Change your Aadhaar card photo in 1 minute
Image Credit: News18

ಆಧಾರ್ ಕಾರ್ಡ್ ಫೋಟೋ ಬದಲಾವಣೆ
UIDAI ಇತ್ತೀಚಿಗೆ ಆಧಾರ್ ಕಾರ್ಡ್ ನಲ್ಲಿ ವಿವಿಧ ಸೌಲಭ್ಯವನ್ನು ನೀಡುತ್ತಿದೆ. UIDAI ಆಧಾರ್ ಕಾರ್ಡ್ ಉಚಿತ ನವೀಕರಣದ ಸೌಲಭ್ಯವನ್ನು ನೀಡಿತ್ತು. ಇನ್ನು ಆನ್ಲೈನ್ ನ ಮೂಲಕ ಆಧಾರ್ ಕಾರ್ಡ್ ನಲ್ಲಿ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಸೇರಿದಂತೆ ಇನ್ನಿತರ ತಪ್ಪಗಳನ್ನು ಸರಿಪಡಿಸಲು ಅವಕಾಶ ನೀಡಲಾಗಿತ್ತು.

ಇದೀಗ ನಿಮ್ಮ ಆಧಾರ್ ಕಾರ್ಡ್ ಅಲ್ಲಿನ ಹಳೆಯ ಫೋಟೋವನ್ನು ಕೂಡ ಬದಲಿಸಿಕೊಳ್ಳಬಹುದು. ಸುಲಭ ವಿಧಾನದ ಮೂಲಕ ನೀವು ಮನೆಯಲ್ಲಿ ಕುಳಿತು ನಿಮ್ಮ ಹಳೆಯ ಫೋಟೋವನ್ನು ಬದಲಿಸಿಕೊಳ್ಳಬಹುದು.

Change your Aadhaar card photo in 1 minute
Image Credit: Haribhoomi

ಈಗ 1 ನಿಮಿಷದಲ್ಲಿ ಬದಲಾಯಿಸಿ ನಿಮ್ಮ ಆಧಾರ್ ಕಾರ್ಡ್ ನಲ್ಲಿ ಇರುವ ಫೋಟೋ
*ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಹಳೆಯ ಫೋಟೋವನ್ನು ಬದಲಾಯಿಸಿಕೊಳ್ಳಲು UIDAI ನ ಅಧಿಕೃತ ವೆಬ್ ಸೈಟ ಗೆ ಭೇಟಿ ನೀಡಬೇಕು.

Join Nadunudi News WhatsApp Group

*ಆನ್ಲೈನ್ ನಲ್ಲಿ ಆಧಾರ್ ದಾಖಲಾತಿ ಕೇಂದ್ರವನ್ನು ಜಿಲ್ಲೆಯೊಂದಿಗೆ ಆಯ್ಕೆ ಮಾಡಿಕೊಳ್ಳಿ.

*ಆಧಾರ್ ನಲ್ಲಿನ ಫೋಟೋ ಬದಲಾವಣೆಗೆ ಸಂಬಂಧಿಸಿದ ಫಾರ್ಮ್ ಅನ್ನು ಡೌನ್ಲೋಡ್ ಮಾಡಿ, ಫಾರ್ಮ್ ಅನ್ನು ಭರ್ತಿ ಮಾಡಿದ ನಂತರ ಆಧಾರ್ ನೋಂದಣಿ ಕೇಂದ್ರಕ್ಕೆ ಸಲ್ಲಿಸಬೇಕು.

*ಆಧಾರ್ ಕೇಂದ್ರದಲ್ಲಿ ನಿಮ್ಮ ಬಯೋಮೆಟ್ರಿಕ್ ವಿವರವನ್ನು ಸಂಗ್ರಹಿಸಲಾಗುತ್ತದೆ.

* ಈ ಪ್ರಕ್ರಿಯೆಗೆ 100 ರೂ. ಹಣವನ್ನು ಪಾವತಿಸಬೇಕಾಗುತ್ತದೆ.

*ಆಧಾರ್ ಕೇಂದ್ರದಿಂದ ನೀವು URN ಸಂಖ್ಯೆಯ ಸ್ವೀಕೃತಿ ಸ್ಲಿಪ್ ಅನ್ನು ಪಡೆದುಕೊಳ್ಳುವ ಮೂಲಕ ನಿಮ್ಮ ಫೋಟೋ ನವೀಕರಣ ಪ್ರಕ್ರಿಯೆಯನ್ನು ಪರಿಶೀಲಿಸಿಕೊಳ್ಳಬಹುದು.

*ಆಧಾರ್ ನವೀಕರಣ ಪ್ರಕ್ರಿಯೆ ಪೂರ್ಣಗೊಂಡ 72 ಗಂಟೆಗಳ ನಂತರ ನೀವು UIDAI ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಆಧಾರ್ ಕಾರ್ಡ್ ನ ನಕಲನ್ನು ಪಡೆದುಕೊಳ್ಳಬಹುದು.

Join Nadunudi News WhatsApp Group