Darshan Request: ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿಕೊಂಡ ನಟ ದರ್ಶನ್.

Actor Darshan Appealed To Fans: ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಅವರು ಈಗ ಕ್ರಾಂತಿ ಸಿನಿಮಾ ಯಶಸ್ಸಿನ ಸಂಭ್ರಮದಲ್ಲಿ ಇದ್ದಾರೆ. ದರ್ಶನ್ ಅಭಿಮಾನಿಗಳು ಫೆಬ್ರವರಿ 16 ಅಂದರೆ ದರ್ಶನ್ ಹುಟ್ಟಹಬ್ಬಕ್ಕಾಗಿ ಕಾಯುತ್ತಿದ್ದಾರೆ ಎನ್ನಬಹುದು.

ಕನ್ನಡದ ಖ್ಯಾತ ನಟ ದರ್ಶನ್ ಹುಟ್ಟುಹಬ್ಬ (Darshan Birthday) ಕ್ಕೆ ದಿನಗಣನೆ ಶುರುವಾಗಿದೆ. ದರ್ಶನ್ ಅಭಿಮಾನಿಗಳು ಆ ದಿನಕ್ಕಾಗಿ ದರ್ಶನ್ ಅವರಿಗೆ ಶುಭ ಹಾರೈಸಲು ಕಾಯುತ್ತಿದ್ದಾರೆ. ಈ ವೇಳೆ ದರ್ಶನ್ ಅಭಿಮಾನಿಗಳಲ್ಲಿ ವಿಶೇಷ ಮನವಿ ಒಂದನ್ನು ಮಾಡಿಕೊಂಡಿದ್ದಾರೆ.

Actor Darshan has made a special request among fans.
Image Source: India Today

ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡ ನಟ ದರ್ಶನ್
ಕಳೆದೆರಡು ವರ್ಷಗಳಿಂದ ಅಭಿಮಾನಿಗಳ ಜೊತೆ ನಟ ದರ್ಶನ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿಲ್ಲ. ಕಳೆದ ವರ್ಷ ಅಪ್ಪು ಅಗಲಿಕೆಯಿಂದ ದರ್ಶನ್ ಸಂಭ್ರಮಾಚರಣೆ ಬೇಡ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು.

ಹಾಗೆ ದರ್ಶನ್ ಈ ಬಾರಿ ಸಹ ತಮ್ಮ ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ನನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ದುಂದು ವೆಚ್ಚ ಮಾಡಬೇಡಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ.

Actor Darshan has made a special request among fans.
Image Source: Instagram

ಕೇಕ್, ಬ್ಯಾನರ್, ಹಾರಗಳನ್ನು ದಯಮಾಡಿ ತರಬೇಡಿ ಎಂದ ದರ್ಶನ್
ಕೇಕ್, ಬ್ಯಾನರ್ ಹಾರಗಳನ್ನು ದಯಮಾಡಿ ತರಬೇಡಿ. ಅದೇ ಹಣದಲ್ಲಿ ಈ ವರ್ಷವೂ ಸಹ ನಿಮ್ಮ ಕೈಲಾದ ಅಕ್ಕಿ ಬೆಳೆ ಸಕ್ಕರೆ ಹಾಗು ಇತರ ದವಸ ಧಾನ್ಯಗಳನ್ನು ದಾನ ನೀಡಿ. ಅದನ್ನು ಒಗ್ಗೂಡಿಸಿ ಸೇರಿಸಬೇಕಾದ ಅನಾಥಾಶ್ರಮ ವೃದ್ಧಾಶ್ರಮಗಳಿಗೆ ತಲುಪಿಸುವ ಜವಾಬ್ದಾರಿ ನನ್ನದು ಎಂದು ದರ್ಶನ್ ಹೇಳಿದ್ದಾರೆ.

Join Nadunudi News WhatsApp Group

ಕಳೆದ ಕೆಲ ವರ್ಷಗಳಿಂದ ಇದನ್ನು ಅಭಿಮಾನಿಗಳು ಕೂಡ ಮಾಡುತ್ತಾ ಬಂದಿದ್ದಾರೆ. ಟನ್‌ ಗಟ್ಟಲೆ ದವಸ ಧಾನ್ಯವನ್ನು ಅವಶ್ಯಕ ಇರುವವರಿಗೆ ತಲುಪುವಂತೆ ಮಾಡಿದ್ದಾರೆ.

Actor Darshan has made a special request among fans.
Image Source: India Today

ಅಭಿಮಾನಿಗಳಲ್ಲಿ ವಿನಂತಿ ಮಾಡಿಕೊಂಡ ನಟ ದರ್ಶನ್
ಸಂಭ್ರಮಾಚರಣೆಯ ಸಂದರ್ಭದಲ್ಲಿ ನಮ್ಮ ಮನೆಯ ಅಕ್ಕಪಕ್ಕದ ನಿವಾಸಿಗಳಿಗೆ ನಿಮ್ಮಿಂದ ತೊಂದರೆಯಾಗುವುದು, ಪಟಾಕಿ ಹೊಡೆಯುವುದು, ಕಂಪೌಂಡ್ ಹತ್ತುವುದು, ಹೂ ಕುಂಡಗಳನ್ನು ಬೀಳಿಸುವುದು ಹಾಗು ಅವರ ಸ್ವತ್ತುಗಳಿಗೆ ಹಾನಿ ಮಾಡುವುದು ಇಂತಹ ಅನುಚಿತ ವರ್ತನೆ ನಡೆಯಬಾರದು.

Actor Darshan has made a special request among fans.
Image Source: India Today

ನನ್ನ ಬಗ್ಗೆ ಇಷ್ಟೆಲ್ಲ ಪ್ರೀತಿ ಅಭಿಮಾನ ಇಟ್ಟಿರುವ ನೀವೆಲ್ಲ ಈ ನನ್ನ ಕೋರಿಕೆಯನ್ನು ನಡೆಸಿಕೊಡುವಿರಿ ಎಂದು ನಂಬಿರುತ್ತೇನೆ. ಹಾಗು ಸಂಘದ ಕಾರ್ಯಕರ್ತರು ಮತ್ತು ಪೊಲೀಸ್ ಸಿಬ್ಬಂದಿ ವರ್ಗದವರಿಗೆ ಸಹಕರಿಸಬೇಕೆಂದು ವಿನಂತಿಸುತ್ತೇನೆ.

 

Join Nadunudi News WhatsApp Group