Prabhas Health Upset: ಆಸ್ಪತ್ರೆಗೆ ದಾಖಲಾದ ಖ್ಯಾತ ನಟ ಪ್ರಭಾಸ್, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಸುದ್ದಿ.
Actor Prabhas Health Problem: ಟಾಲಿವುಡ್ ನ ಸ್ಟಾರ್ ನಟ ಪ್ರಭಾಸ್ (Prabhas) ಇದೀಗ ತಮ್ಮ ಶೂಟಿಂಗ್ ಶೆಡ್ಯೂಲ್ ನಲ್ಲಿ ಬ್ಯುಸಿ ಆಗಿದ್ದಾರೆ.
ಪ್ರಭಾಸ್ ಕೈಯಲ್ಲಿ ಸಾಕಷ್ಟು ಹೊಸ ಚಿತ್ರಗಳಿವೆ. ಈ ನಡುವೆ ಪ್ರಭಾಸ್ ಅವರ ಆರೋಗ್ಯದಲ್ಲಿ ಕೊಂಚ ಏರುಪೇರು ಆಗುತ್ತಿದೆ. ಪ್ರಭಾಸ್ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಪ್ರಭಾಸ್ ಅವರ ಅನಾರೋಗ್ಯದ ಸುದ್ದಿ ಕೇಳಿ ಅಭಿಮಾನಿಗಳು ಆತಂಕ ಪಡುತ್ತಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿರುವ ನಟ ಪ್ರಭಾಸ್
ಸಾಲು ಸಾಲು ಸಿನಿಮಾಗಳು ಪ್ರಭಾಸ್ ಅವರ ಕೈಯಲ್ಲಿದೆ. ಪ್ರಭಾಸ್ ಅವರ ಡೇಟ್ಸ್ ಗಾಗಿ ನಿರ್ಮಾಪಕರು ಕಾಯುತ್ತಿದ್ದಾರೆ. ಈ ಹಿಂದೆ ಪ್ರಭಾಸ್ ಅನಾರೋಗ್ಯಕ್ಕೆ ತುತ್ತಾಗಿದ್ದರು. ಸ್ವಲ್ಪ ಸಮಯದ ನಂತರ ಚೇತರಿಸಿಕೊಂಡಿದ್ದರು. ಆದರೆ ಇದೀಗ ಮತ್ತೆ ಪ್ರಭಾಸ್ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ
ಟಾಲಿವುಡ್ ನ ಖ್ಯಾತ ನಟ ಪ್ರಭಾಸ್ ಇದೀಗ ಏಕಾಏಕಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನುವ ವಂದತಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಪ್ರಭಾಸ್ ಅವರ ಆರೋಗ್ಯ ಸ್ಥಿತಿ ತಿಳಿದ ಅಭಿಮಾನಿಗಳು ಅಂತಂಕ ಪಡುತ್ತಿದ್ದಾರೆ.
ಇನ್ನು ಪ್ರಭಾಸ್ ಅವರು ಶೂಟಿಂಗ್ ಗೆ ಬ್ರೇಕ್ ನೀಡಿದ್ದಾರೆ. ಅನಾರೋಗ್ಯದ ಕಾರಣ ನಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ನಟ ವಿದೇಶಕ್ಕೆ ತೆರಳಿದ್ದಾರೆ ಎನ್ನುವ ಮಾತು ಕೂಡ ಕೇಳಿಬರುತ್ತಿದೆ. ಮಂಗಳವಾರ ಮದ್ಯ ರಾತ್ರಿಯಿಂದಲೇ ಪ್ರಭಾಸ್ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ ಎನ್ನಲಾಗುತ್ತಿದೆ.
ತಕ್ಷಣವೇ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ಕೇಳಿ ಬಂದಿದೆ. ಸದ್ಯ ಪ್ರಭಾಸ್ ಅವರು ಆಸ್ಪತ್ರೆಯಲ್ಲಿ ಚಿಕೆತ್ಸೆ ಪಡೆಯುತ್ತಿದ್ದಾರೆ. ಪ್ರಭಾಸ್ ಆರಿಗ್ಯಾ ಸ್ಥಿತಿ ತಿಳಿದ ಅಭಿಮಾನಿಗಳು ಬೇಗ ಗುಣಮುಖವಾಗಿ ಬನ್ನಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಇನ್ನು ಪ್ರಭಾಸ್ ಅವರು ಆಸ್ಪತ್ರೆಗೆ ದಾಖಲಾಗಿರುವುದರ ಬಗ್ಗೆ ಯಾವುದೇ ಖಚಿತ ಮಾಹಿತಿ ಇಲ್ಲವಾದ ಕಾರಣ ಇದೊಂದು ಸುಳ್ಳು ಸುದ್ದಿ ಎಂದು ಹಲವು ಅಭಿಪ್ರಾಯವನ್ನ ಕೂಡ ವ್ಯಕ್ತಪಡಿಸಿದ್ದಾರೆ.