Upendra Admit Hospital: ದಿಡೀರ್ ಆಸ್ಪತ್ರೆಗೆ ದಾಖಲಾದ ನಟ ಉಪೇಂದ್ರ, ಉಪೇಂದ್ರ ಆರೋಗ್ಯದಲ್ಲಿ ಏರುಪೇರು.

Upendra Admit Hospital: ಕನ್ನಡ ಚಿತ್ರರಂಗದ ಅತ್ಯುತ್ತಮ ನಟ ಉಪೇಂದ್ರ (Real Star Upendra). ರಿಯಲ್ ಸ್ಟಾರ್ ಎಂದೇ ಪ್ರಸಿದ್ಧರಾಗಿರುವ ಉಪೇಂದ್ರ ಅವರು ಕನ್ನಡದಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿ ಬಹಳಷ್ಟು ಅಭಿಮಾನಿಗಳನ್ನು ಗಳಿಸಿಗೊಂಡಿದ್ದಾರೆ. ಇವರು ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ (kannada Film Industry) ಪರಿಚಿತರಾದರು.

ರಿಯಲ್ ಸ್ಟಾರ್ ಉಪೇಂದ್ರ ಅವರು ನಿರ್ದೇಶಕ ಹಾಗು ನಟ ಇವರು ಕುಂದಾಪುರ ಕೋಟೇಶ್ವರದ ಮದ್ಯಮ ವರ್ಗದ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ಉಪೇಂದ್ರ ಅವರು ತಮ್ಮ ಮತ್ತು ಇತರರ ಚಿತ್ರಗಳಿಗೆ ಹಾಡುಗಳನ್ನು ರಚಿಸಿದ್ದಾರೆ.

Actor Upendra was admitted to Didir Hospital, Upendra's health is deteriorating.
Image Credit: jsnewstimes

1992 ರಲ್ಲಿ ಬಿಡುಗಡೆಯಾದ ತರ್ಲೆ ನನ್ಮಗ ಚಿತ್ರದ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿರುತ್ತಾರೆ. ಇವರ ಬಾಳಸಂಗಾತಿ ಪ್ರಿಯಾಂಕಾ ಉಪೇಂದ್ರ (Priyanka Upendra). ಇದೀಗ ಕನ್ನಡ ಚಿತ್ರರಂಗದ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂಬ ವಿಷಯ ತಿಳಿದು ಬಂದಿದೆ.

ಆಸ್ಪತ್ರೆಗೆ ದಾಖಲಾದ ನಟ ಉಪೇಂದ್ರ

ಸ್ಯಾಂಡಲ್ ವುಡ್ ನ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಆರೋಗ್ಯದಲ್ಲಿ ಏರುಪೇರಾದ ಕರಣ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ತಿಳಿದು ಬಂದಿದೆ. ಉಪೇಂದ್ರ ಅವರಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡ ಕಾರಣದಿಂದಾಗಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಂಗಳೂರಿನ ನೆಲಮಂಗಲದ ಹರ್ಷ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಸುದ್ದಿ ತಿಳಿದುಬಂದಿದೆ.

Join Nadunudi News WhatsApp Group

Actor Upendra was admitted to the hospital due to respiratory problems
Image Credit: firstpost

ಶೂಟಿಂಗ್ ನಲ್ಲಿ ಬ್ಯುಸಿ ಆಗಿದ್ದ ನಟ ಉಪೇಂದ್ರ

ಸದ್ಯ ಉಪೇಂದ್ರ ಅವರು ಶೂಟಿಂಗ್ ನಲ್ಲಿ ಬ್ಯುಸಿ ಆಗಿದ್ದರು. ಉಪೇಂದ್ರ ಅವರ ಯು ಐ ಚಿತ್ರೀಕರಣ ನಡೆಯುತ್ತಿರುವ ಸಂದರ್ಭದಲ್ಲಿ ಉಸಿರಾಟ ತೊಂದರೆ ಕಾಣಿಸಿಕೊಂಡಿತ್ತು ಎಂಬ ವಿಷಯ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಸುದ್ದಿಯಾಗಿತ್ತು.

ಈ ಸಿನಿಮಾದ ಶೂಟಿಂಗ್ ವೇಳೆ ಉಪೇಂದ್ರ ಅವರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಕಾರಣ ಇವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಪೇಂದ್ರ ಅವರ ಅನಾರೋಗ್ಯದ ಸುದ್ದಿ ಕೇಳಿದ ಅಭಿಮಾನಿಗಳು ಬಹಳ ಆತಂಕದಲ್ಲಿದ್ದಾರೆ. ಉಪೇಂದ್ರ ಅವರು ಬೇಗ ಗುಣಮುಖರಾಗಿ ಬರಬೇಕು ಎಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ.

Actor Upendra was admitted to a Bangalore hospital due to breathing problems
Image Credit: timesofindia.indiatimes

ಸದ್ಯ ನಟ ಉಪೇಂದ್ರ ಅವರು ಉಸಿರಾಟದ ಸಮಸ್ಯೆಯ ಕಾರಣ ಆಸ್ಪತ್ರೆಗೆ ದಾಖಲಾಗಿದ್ದು ವೈದ್ಯರಿಂದ ಅವರಿಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ದಿಡೀರ್ ಎಂದು ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ನಟ ಉಪೇಂದ್ರ ಹತ್ತಿರದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಕೆಲವು ದಿನಗಳಿಂದ ಶೂಟಿಂಗ್ ನಲ್ಲಿ ಬಹಳ ಬ್ಯುಸಿ ಇರುವ ಕಾರಣ ಅವರಿಗೆ ಈ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.

ಉಪೇಂದ್ರ ಅವರು ಕನ್ನಡ ಚಿತ್ರರಂಗದ ಹೆಮ್ಮೆಯ ನಟ. ಹಲವಾರು ಚಿತ್ರಗಳಲ್ಲಿ ಅಭಿನಯಿಸಿ ರಿಯಲ್ ಸ್ಟಾರ್ ಎಂಬ ಬಿರುದನ್ನೂ ಪಡೆದುಕೊಂಡಿದ್ದಾರೆ. ಇದೀಗ ಇವರ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದು ಇವರ ಯು ಐ ಚಿತ್ರದ ಶೂಟಿಂಗ್ ಸದ್ಯಕ್ಕೆ ನಡೆಸಲು ಆಗುದಿಲ್ಲ.

Join Nadunudi News WhatsApp Group