Yash: ಕಿಚ್ಚನ ಜೊತೆ ರಾಜಕೀಯ ಅಖಾಡಕ್ಕೆ ಬರಲಿದ್ದಾರೆ ಯಶ್, ಮತಬೇಟೆಗೆ ನಟ ಯಶ್ ಎಂಟ್ರಿ.

ಕಿಚ್ಚ ಸುದೀಪ್ ರಾಜಕೀಯ ಪ್ರವೇಶದ ಜೊತೆಗೆ ರಾಜಕೀಯದತ್ತ ಮುಖ ಮಾಡಲಿದ್ದಾರೆ ಯಶ್.

Sudeep And Yash Politics Entry: ರಾಜ್ಯ ವಿಧಾನಸಭಾ ಚುನಾವಣೆಗೆ (Assembly Election) ಇನ್ನು ಒಂದು ತಿಂಗಳು ಮಾತ್ರ ಬಾಕಿ ಇದೆ. ರಾಜಕೀಯ ಮುಖಂಡರು ತಮ್ಮ ತಮ್ಮ ರಾಜಕೀಯ ಪಕ್ಷದ ಚುನಾವಣಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ.

ಇತ್ತೀಚೆಗಂತೂ ಬಿಜೆಪಿ ಪ್ರಚಾರಕ್ಕೆ ಸ್ಯಾಂಡಲ್ ವುಡ್ ನ ಸ್ಟಾರ್ ನಟ ಕಿಚ್ಚ ಸುದೀಪ್ (Kiccha Sudeep) ಪ್ರಚಾರ ಮಾಡುತ್ತಿರುವುದು ಗಮನಾರ್ಹವಾಗಿದೆ. ಇದೀಗ ರಾಜಕೀಯ ಪ್ರಚಾರಕ್ಕೆ ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ (Rocking Star Yash) ಎಂಟ್ರಿ ಕೊಡಲಿದ್ದಾರೆ ಎನ್ನುವ ಸುದ್ದಿಗಳು ಹರಡವುತ್ತಿದೆ.

Actor Yash is said to be campaigning in the political arena.
Image Credit: instagram

ಬಿಜಿಪಿ ಪರ ಕಿಚ್ಚನ ಪ್ರಚಾರ
ಈ ಹಿಂದೆ ಕಿಚ್ಚ ಸುದೀಪ್ ಅವರ ರಾಜಕೀಯ ಪ್ರವೇಶದ ಸುದ್ದಿಗಳು ಸಾಕಷ್ಟು ಹರಡಿದ್ದವು. ನಂತರ ಸ್ವತಃ ಕಿಚ್ಚ ಸುದೀಪ್ ಅವರೇ ತಮ್ಮ ರಾಜಕೀಯ ಪ್ರವೇಶದ ಕುರಿತು ಸ್ಪಷ್ಟನೆ ನೀಡಿದ್ದರು. ನಾನು ಬಿಜೆಪಿ ಪರ ಪ್ರಚಾರ ಮಾಡುತ್ತೇನೆ, ಪಕ್ಷದ ಪರವಾಗಿ ಅಲ್ಲ ಬದಲಾಗಿ ವ್ಯಕ್ತಿಯ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದರು.

ಇದೀಗ ಕಿಚ್ಚ ಸುದೀಪ್ ಬಿಜೆಪಿ ಪರ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಇದರ ಬೆನ್ನಲೇ ಇದೀಗ ರಾಕಿಂಗ್ ಸ್ಟಾರ್ ಯಶ್ ಅವರ ರಾಜಕೀಯ ಪ್ರವೇಶದ ಬಗ್ಗೆ ಗುಸು ಗುಸು ಶುರುವಾಗಿದೆ.

ರಾಜಕೀಯ ಪ್ರವೇಶ ಮಾಡಲಿದ್ದಾರಾ ರಾಕಿ ಭಾಯ್
ಪ್ಯಾನ್ ಸ್ಟಾರ್ ನಟ ಆಗಿರುವ ರಾಕಿಂಗ್ ಸ್ಟಾರ್ ಯಶ್ ಕೂಡ ರಾಜಕೀಯದತ್ತ ಮುಖ ಮಾಡಲಿದ್ದಾರೆ ಎನ್ನುವ ಸುದ್ದಿ ಇದೀಗ ವೈರಲ್ ಆಗುತ್ತಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತದಾರರನ್ನು ಸೆಳೆಯಲು ಪಕ್ಷಗಳು ಸ್ಟಾರ್ ನಟರನ್ನು ಪ್ರಚಾರಕ್ಕೆ ಇಳಿಸುವ ತಯಾರಿಯಲ್ಲಿದ್ದಾರೆ.

Join Nadunudi News WhatsApp Group

Actor Yash is said to be campaigning with Sudeep's BJP party.
Image Credit: instagram

ಇನ್ನು ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಯಶ್ ಇನ್ನು ಮಾಹಿತಿ ನೀಡಿಲ್ಲ. ಈ ಹಿಂದೆ ಯಶ್ ಅವರ ಆಪ್ತ ಬಳಗ ಈ ಬಗ್ಗೆ ಪ್ರತಿಕ್ರಿಯಿಸಿತ್ತು. ಇನ್ನು ರಾಜಕೀಯ ಪ್ರವೇಶದ ಬಗ್ಗೆ ಸುದೀಪ್ ಅವರು ಸ್ಪಷ್ಟನೆ ನೀಡಿದ ಹಾಗೆ ಯಶ್ ಅವರು ಕೂಡ ಸ್ಪಷ್ಟನೆ ನೀಡುವ ತನಕ ಕಾದು ನೋಡಬೇಕಿದೆ.

Join Nadunudi News WhatsApp Group