Khushbu Health: ಬಹುಭಾಷಾ ನಟಿ ಖುಷ್ಬೂ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲಾದ ನಟಿ ಖುಷ್ಬೂ.

ಮತ್ತೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾದ ನಟಿ ಖುಷ್ಬೂ.

Actress Khushbu Sundar Hospitalized: ಭಾರತೀಯ ಚಿತ್ರರಂಗದ ಖ್ಯಾತ ನಟಿ, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ನಟಿ ಖುಷ್ಬೂ (Khushbu Sundar) ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ತಮ್ಮ ಅನಾರೋಗ್ಯದ ಸ್ಥಿತಿಯನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಬೆಡ್ ಮೇಲೆ ಮಲಗಿರುವ ಫೋಟೋವನ್ನು ನಟಿ ಹಂಚಿಕೊಂಡಿದ್ದಾರೆ.

ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾದ ನಟಿ ಖುಷ್ಬೂ
ನಟಿ ಖುಷ್ಬೂ ಭಾರತೀಯ ಚಿತ್ರರಂಗದಲ್ಲಿ ಸಾಕಷ್ಟು ಖ್ಯಾತಿ ಪಡೆದಿದ್ದಾರೆ. ಕನ್ನಡ ಸೇರಿದಂತೆ ತಮಿಳು, ಹಿಂದಿ, ತೆಲುಗು, ಮಲಯಾಳಂ ಚಿತ್ರಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ನಟಿ ಇದೀಗ ಚಿತ್ರರಂಗದಲ್ಲಿ ಪೋಷಕ ಪಾತ್ರದ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

Actress Khushbu Sundar Health
Image Credit: News18

ಹೀಗಿರುವ ನಟಿ ಆರೋಗ್ಯ ಸಮಸ್ಯೆಯಿಂದ ನರಳುತ್ತಿರುವ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿರುವ ಕುರಿತು ನಟಿ ಸ್ವತಃ ಮಾಹಿತಿ ನೀಡಿದ್ದಾರೆ.

ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿದ್ದೇನೆ ಎಂದ ನಟಿ
ಕಾಕ್ಸಿಬೋನ್ ಸಮಸ್ಯೆಯಿಂದ ಬಳಲುತ್ತಿದ್ದ ನಟಿ ಖುಷ್ಬೂ ಶಸ್ತ್ರ ಚಿಕಿತ್ಸೆಗೆ ಗುರಿಯಾಗಿದ್ದಾರೆ. ಬೆನ್ನು ಮೂಳೆಯ ಅಡಿಯ ಮೂಳೆಗಳ ಗುಚ್ಛದ ಕೊನೆಯ ಮೂಳೆಯ ಮಾಂಸಖಂಡಗಳಿಗೆ ತಿವಿಯಲು ಪ್ರಾರಂಭಿಸುವ ಕಾರಣ ಆಸಾದ್ಯ ನೋವು ಕೆಳಬೆನ್ನಿನಲ್ಲಿ ಉತ್ಪತ್ತಿಯಾಗುತ್ತದೆ. ಈ ಸಮಸ್ಯೆಯನ್ನು ಶಸ್ತ್ರಚಿಕಿತ್ಸೆಯ ಮೂಲಕ ಮಾತ್ರ ನಿವಾರಿಸಲು ಸಾಧ್ಯ.

Join Nadunudi News WhatsApp Group

ಇನ್ನು ಬಹುಭಾಷಾ ನಟಿ ಖುಷ್ಬೂ ಕೂಡ ಈ ಸಮಸ್ಯೆಯ ಕಾರಣ ಶಸ್ತ್ರ ಚಿಕಿತ್ಸೆಗೆ ಗುರುಯಾಗಿದ್ದಾರೆ. ನಟಿ ಆಸ್ಪತ್ರಯಲ್ಲಿ ಚಿಕೆತ್ಸೆ ಪಡೆಯುತ್ತಿದ್ದು, ತಾವು ಬೆಡ್ ಮೇಲೆ ಮಲಗಿರುವ ಫೋಟೋವನ್ನು ಹಂಚಿಕೊಂಡು ಚೇತರಿಸಿಕೊಳ್ಳುತ್ತಿದ್ದೇನೆ ಎಂದಿದ್ದಾರೆ. ನಟಿಯ ಪೋಸ್ಟ್ ನೋಡಿ ಅಭಿಮಾನಿಗಳು ಆತಂಕ ಪಡುತ್ತಿದ್ದು ಬೇಗ ಗುಣಮುಖವಾಗಲಿ ಎಂದು ಎಲ್ಲರು ಹಾರೈಸುತ್ತಿದ್ದಾರೆ.

Actress Khushbu Sundar Health
Image Credit: Indian Express

ಬಹುಭಾಷಾ ನಟಿ ಖುಷ್ಬೂ ಸುಂದರ್
ನಟಿ ಖುಷ್ಬೂ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿ ಕೂಡ ಸೈ ಎನಿಸಿಕೊಂಡಿದ್ದಾರೆ. ಕನ್ನಡದ ರಣಧೀರ. ಶಾಂತಿ ಕ್ರಾಂತಿ, ಹೃದಯಗೀತೆ, ಪಾಳೇಗಾರ ಸೇರಿದಂತೆ ಪರಭಾಷೆಗಳಲ್ಲೂ ನಟಿ ಖುಷ್ಬೂ ಸುಂದರ್ ನಟಿಸಿ ಸೈ ಎನಿಸಿಕೊಂಡಿದ್ದಾರೆ.

ಸಿನಿಮಾ ರಾಜಕೀಯ ಎರಡು ಕ್ಷೇತ್ರಗಳಲ್ಲೂ ಅವರು ಗುರುತಿಸಿಕೊಂಡಿದ್ದಾರೆ. ನಟಿ ಖುಷ್ಬೂ ಅನಾರೋಗ್ಯದ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ನನ್ನ ಆರೋಗ್ಯದಲ್ಲಿ ಇದೀಗ ಚೇತರಿಕೆ ಕಂಡಿದೆ. ನಾನು ಹುಷಾರಾಗಿದ್ದೇನೆ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Join Nadunudi News WhatsApp Group