Actress Samantha: ವಿಜಯ್ ದೇವರಕೊಂಡ ಅವರಿಗೆ ಸ್ಪೆಷಲ್ ಆಗಿ ವಿಶ್ ಮಾಡಿದ ಸಮಂತಾ.

ಟಾಲಿವುಡ್ ನ ಖ್ಯಾತ ನಟ ವಿಜಯ್ ದೇವರಕೊಂಡ ನಿನ್ನೆ ಅವರ 34 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ವಿಜಯ್ ದೇವರಕೊಂಡ ಹುಟ್ಟುಹಬ್ಬಕ್ಕೆ ನಟಿ ಸಮಂತಾ ರುತ್ ಪ್ರಭು ಅವರು ಸ್ಪೆಷಲ್ ಆಗಿ ವಿಶ್ ಮಾಡಿದ್ದಾರೆ.

Samantha About Vijay Devarakonda: ಖ್ಯಾತ ನಟಿ ಸಮಂತಾ (Samantha) ಹಾಗು ನಟ ವಿಜಯ್ ದೇವರಕೊಂಡ (Vijay Devarakonda) ಜೊತೆಯಾಗಿ ಖುಷಿ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಜೋಡಿ ಮೊದಲ ಬಾರಿಗೆ ತೆರೆ ಹಂಚಿಕೊಂಡಿದ್ದು ಈ ಸಿನಿಮಾ ಮೂಲಕ ಪ್ರೇಕ್ಷರನ್ನು ರಂಜಿಸಲು ಬರುತ್ತಿದ್ದಾರೆ. ಖುಷಿ ಸಿನಿಮಾದ ಮೊದಲ ಹಾಡು ನಿನ್ನೆ ರಿಲೀಸ್ ಆಗಿದ್ದು ಈ ಹಾಡಿನಲ್ಲಿ ವಿಜಯ್ ದೇವರಕೊಂಡ ಮತ್ತು ಸಮಂತಾ ಜೋಡಿಯನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

Samantha About Vijay Devarakonda
Image Source: India Today

ವಿಜಯ್ ದೇವರಕೊಂಡ ಹುಟ್ಟುಹಬ್ಬಕ್ಕೆ ಸ್ಪೆಷಲ್ ಆಗಿ ವಿಶ್ ಮಾಡಿದ ಸಮಂತಾ
ಟಾಲಿವುಡ್ ನ ಖ್ಯಾತ ನಟ ವಿಜಯ್ ದೇವರಕೊಂಡ ನಿನ್ನೆ ಅವರ 34 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ವಿಜಯ್ ದೇವರಕೊಂಡ ಹುಟ್ಟುಹಬ್ಬಕ್ಕೆ ನಟಿ ಸಮಂತಾ ರುತ್ ಪ್ರಭು ಅವರು ಸ್ಪೆಷಲ್ ಆಗಿ ವಿಶ್ ಮಾಡಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ನಟಿ ಸಮಂತಾ ವಿಜಯ್ ದೇವರಕೊಂಡ ಫೋಟೋವನ್ನು ಶೇರ್ ಮಾಡಿದ್ದಾರೆ. ನನ್ನ ಒಳ್ಳೆಯ ಸ್ನೇಹಿತ, ನನ್ನ ನೆಚ್ಚಿನ ಸಹನಟನ ಹುಟ್ಟುಹಬ್ಬದ cdp ಅನ್ನು ಬಿಡುಗಡೆ ಮಾಡಲು ನನಗೆ ತುಂಬಾ ಸಂತೋಷವಾಗಿದೆ ಎಂದು ಸಮಂತಾ ಹೇಳಿದ್ದಾರೆ. ನಿಮಗೆ ಎಲ್ಲಾ ಯಶಸ್ಸು ಸಿಗಲಿ ಎಂದು ಸಮಂತಾ ಬರೆದಿದ್ದಾರೆ.

Samantha About Vijay Devarakonda
Image Source: India Today

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮಿಂಚಲು ರೆಡಿಯಾದ ಖುಷಿ ಸಿನಿಮಾ
ಖುಷಿ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮಿಂಚಲು ರೆಡಿಯಾಗುತ್ತಿದೆ. ಈ ಸಿನಿಮಾ ತೆಲುಗು, ಕನ್ನಡ, ಹಿಂದಿ ಮಲಯಾಳಂ ಹಾಗು ತಮಿಳು ಭಾಷೆಯಲ್ಲಿಯೂ ತೆರೆಗೆ ಬರಲಿದೆ. ಮೈತ್ರಿ ಮೂವಿ ಬ್ಯಾನರ್ ಅಡಿಯಲ್ಲಿ ಅದ್ದೂರಿಯಾಗಿ ನಿರ್ಮಿಸಿರುವ ಈ ಚಿತ್ರಕ್ಕೆ ಮಜಿಲೀ ಹಿಟ್ ನಿರ್ದೇಶಕ ಶಿವ ನಿರ್ವಣ ನಿರ್ದೇಶಿಸುತ್ತಿದ್ದಾರೆ.

Samantha About Vijay Devarakonda
Image Source: Aaj Tak

Join Nadunudi News WhatsApp Group

Join Nadunudi News WhatsApp Group