Tamannaah: ಬಾಲಯ್ಯನ ಜೊತೆ ಸೊಂಟ ಬಳುಕಿಸಲು ದುಬಾರಿ ಸಂಭಾವನೆ ಪಡೆದ ತಮನ್ನಾ, ಈಕೆ ತುಂಬಾ ಕಾಸ್ಟ್ಲಿ.
ಸಂಭಾವನೆ ಬಗೆಗಿನ ಗಾಸಿಪ್ ಗಳಿಗೆ ಬ್ರೇಕ್ ಹಾಕಿದ ತಮನ್ನಾ, ನೀವು ಸ್ವಲ್ಪ ರಿಸರ್ಚ್ ಮಾಡಿಕೊಳ್ಳಿ ಎಂದ ನಟಿ.
Tamannaah Bhatia About Remuneration: ಬಹುಭಾಷಾ ನಟಿಯಾಗಿ ಮಿಂಚಿರುವ ನಟಿ ತಮನ್ನಾ ಭಾಟಿಯಾ (Tamannaah Bhatia) ಇದೀಗ ಸುದ್ದಿಯಲ್ಲಿದ್ದಾರೆ. ನಟಿ ತಮನ್ನಾ ಭಾಟಿಯಾ ತಮ್ಮ ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ.
ಇದೀಗ ತಮನ್ನಾ ಭಾಟಿಯಾ ಮತ್ತೆ ಸಂಭಾವನೆ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಹಲವು ದಿನಗಳ ಹಿಂದೆ ನಟಿ ತಮನ್ನಾ ಅವರ ಐಟಂ ಸಾಂಗ್ ಸಂಭಾವನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಆಗಿತ್ತು. ಈಗ ಇದೆ ವಿಚಾರದ ಬಗ್ಗೆ ನಟಿ ಗರಂ ಆಗಿ ಮಾತನಾಡಿದ್ದಾರೆ.
ಸಂಭಾವನೆ ಬಗೆಗಿನ ಗಾಸಿಪ್ ಗಳಿಗೆ ಬ್ರೇಕ್ ಹಾಕಿದ ತಮನ್ನಾ
ನಟಿ ತಮನ್ನಾ ಈಗಾಗಲೇ ಹಲವು ಸಿನಿಮಾದಲ್ಲಿ ಐಟಂ ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ. ಇನ್ನು ಈ ನಟಿ ಬಾಲಯ್ಯ ಸಿನಿಮಾದಲ್ಲಿ ಹೆಜ್ಜೆ ಹಾಕಲು 5 ಕೋಟಿ ರೂಪಾಯಿ ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂಬ ಗಾಸಿಪ್ ಹರಡಿತ್ತು. ಇದೀಗ ಈ ಸುದ್ದಿಗೆ ನಟಿ ತಮನ್ನಾ ಭಾಟಿಯಾ ರಿಯಾಕ್ಟ್ ಮಾಡಿದ್ದಾರೆ.
ಬಹುಭಾಷಾ ನಟಿಯಾಗಿ ತೆರೆ ಮೇಲೆ ಮಿಂಚಿರುವ ನಟಿ ತಮನ್ನಾ ಅವರು ಕೆಜಿಎಫ್ ಸೇರಿದಂತೆ ಹಲವು ಸಿನಿಮಾದಲ್ಲಿ ಐಟಂ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ನಾಯಕಿಯಾಗಿಯೂ ಗೆದ್ದಿದ್ದಾರೆ. ಇತ್ತೀಚೆಗೆ ನಂದಮೂರಿ ಬಾಲಯ್ಯ ಅವರ 108ನೇ ಚಿತ್ರಕ್ಕೆ 5 ಕೋಟಿ ರೂ ಸಂಭಾವನೆ ಡಿಮ್ಯಾಂಡ್ ಮಾಡಿದ್ದಾರೆ ಎಂಬ ಸುದ್ದಿಗೆ ನಟಿ ತಮನ್ನಾ ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಗಾಸಿಪ್ ಗಳಿಗೆ ಬ್ರೇಕ್ ಹಾಕಿದ್ದಾರೆ.
ಗಾಸಿಪ್ ಗಳಿಗೆ ಖಡಕ್ ಉತ್ತರ ಕೊಟ್ಟ ನಟಿ ತಮನ್ನಾ ಭಾಟಿಯಾ
ನಿರ್ದೇಶಕ ಅನಿಲ್ ರವಿಪುಡಿ ಅವರ ಜೊತೆ ಕೆಲಸ ಮಾಡುವುದನ್ನು ನಾನು ಯಾವಾಗಲೂ ಎಂಜಾಯ್ ಮಾಡಿದ್ದೇನೆ. ಅದೇ ರೀತಿ ನಂದಮೂರಿ ಬಾಲಕೃಷ್ಣ ಅವರ ಬಗ್ಗೆಯೂ ನನಗೆ ಸಾಕಷ್ಟು ಗೌರವ ಇದೆ.
ಆದರೆ ಅವರ ಸಿನಿಮಾದಲ್ಲಿನ ಹಾಡಿನಲ್ಲಿ ನಾನು ಇರುವುದಾಗಿ ಗಾಸಿಪ್ ಹಬ್ಬಿಸಿರುವುದು ನನಗೆ ಬೇಸರ ಮೂಡಿಸಿದೆ. ಆಧಾರ ಇಲ್ಲದ ಆರೋಪ ಮಾಡುವುದಕ್ಕೂ ಮುನ್ನ ನೀವು ಸ್ವಲ್ಪ ರಿಸರ್ಚ್ ಮಾಡಿಕೊಳ್ಳಿ ಎಂದು ನಟಿ ಖಡಕ್ ರಿಯಾಕ್ಷನ್ ಕೊಟ್ಟಿದ್ದಾರೆ.