Airtel Recharge: ಡೇಟಾ, ಕರೆ, Disney+ Hotstar ಉಚಿತ, 84 ದಿನಗಳ ರಿಚಾರ್ಜ್ ಪ್ಲಾನ್ ಘೋಷಿಸಿದ ಏರ್ಟೆಲ್.

ಇದೀಗ ಏರ್ ಟೆಲ್ ತನ್ನ ಗ್ರಾಹಕರಿಗೆ 84 ದಿನಗಳ ಮಾನ್ಯತೆಯ ಹೊಸ ರಿಚಾರ್ಜ್ ಪ್ಲಾನ್ ಅನ್ನು ಬಿಡುಗಡೆಗೊಳಿಸಿದೆ.

Airtel Recharge Plan: ಪ್ರತಿಷ್ಠಿತ ಟೆಲಿಕಾಂ ಕಂಪೆನಿಯಾದ ಏರ್ ಟೆಲ್  (Airtel) ಇದೀಗ ಹೊಸ ಹೊಸ ರಿಚಾರ್ಜ್ ಪ್ಲಾನ್ ಗಳನ್ನೂ ಬಿಡುಗಡೆ ಮಾಡುತ್ತಿವೆ. ವಿವಿಧ ರೀತಿಯ ಆಕರ್ಷಕ ರಿಚಾರ್ಜ್ ಪ್ಲಾನ್ ಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ. ಓಟಿಟಿ ಸೌಲಭ್ಯದ ಜೊತೆಗೆ ಹೆಚ್ಚಿನ ಡೇಟಾ ಸೌಲಭ್ಯವನ್ನು ನೀಡುತ್ತಿದೆ. ಇದೀಗ ಏರ್ ಟೆಲ್ ತನ್ನ ಗ್ರಾಹಕರಿಗೆ 84 ದಿನಗಳ ಮಾನ್ಯತೆಯ ಹೊಸ ರಿಚಾರ್ಜ್ ಪ್ಲಾನ್ ಅನ್ನು ಬಿಡುಗಡೆಗೊಳಿಸಿದೆ. ಈ ಯೋಜನೆಯ ಬಗ್ಗೆ ಮಾಹಿತಿ ತಿಳಿಯೋಣ.

Airtel Recharge Plan
Image Credit: indiatvnews

84 ದಿನಗಳ ರಿಚಾರ್ಜ್ ಪ್ಲಾನ್ ಘೋಷಿಸಿದ ಏರ್ ಟೆಲ್
ಏರ್ ಟೆಲ್ ತನ್ನ ಗ್ರಾಹಕರಿಗಾಗಿ 84 ದಿನಗಳ ಮಾನ್ಯತೆಯ ರಿಚಾರ್ಜ್ ಪ್ಲಾನ್ ಅನ್ನು ಘೋಷಿಸಿದೆ. ರೂ. 839 ರಿಚಾರ್ಜ್ ಮಾಡಿದರೆ ಅನ್ಲಿಮಿಟೆಡ್ ಪ್ಲಾನ್ ನ ಪ್ರಯೋಜನವನ್ನು ಪಡೆಯಬಹುದು. ಪ್ರತಿನಿತ್ಯ 2GB ಡೇಟಾ ಜೊತೆಗೆ 100 SMS ಗಳ ಪ್ರಯೋಜನವನ್ನು ಪಡೆಯಬಹುದು.

ದೈನಂದಿನ ಮಿತಿಯ ಬಳಕೆಯ ನಂತರ ಡೇಟಾ ವೇಗವು 64 Kbps ಗೆ ಕಡಿಮೆಯಾಗುತ್ತದೆ. ಏರ್ ಟೆಲ್ ಥ್ಯಾಂಕ್ಸ್ ಅಪ್ಲಿಕೇಶನ್ ನ ಮೂಲಕ ರಿಚಾರ್ಜ್ ಮಾಡುದರಿಂದ ಹೆಚ್ಚಿನ ಲಾಭವನ್ನು ಪಡೆಯಬಹುದು. ಈ ಯೋಜನೆಯಿಂದ ಡಿಸ್ನಿ ಪ್ಲಸ್ ಹೊಟ್ಸ್ಟಾರ್ ಚಂದಾದಾರಿಕೆಯನ್ನು ಉಚಿತವಾಗಿ ಪಡೆಯಬಹುದು. ಇನ್ನು 839 ರಿಚಾರ್ಜ್ ಮಾಡಿದರೆ, 149 ಮೌಲ್ಯದ ಡಿಸ್ನಿ+ ಹಾಟ್ಸ್ಟಾರ್ ಮೊಬೈಲ್ ಗೆ 3 ತಿಂಗಳ ಚಂದಾದಾರಿಕೆಯನ್ನು ಪಡೆಯುತ್ತಾರೆ.

airtel recharge new update
Image Credit: livemint

ಏರ್ ಟೆಲ್ 499 ರೂ. ಯೋಜನೆ
ಏರ್ ಟೆಲ್ ತನ್ನ ಗ್ರಾಹಕರಿಗಾಗಿ 28 ದಿನಗಳ ಮಾನ್ಯತೆಯ ರಿಚಾರ್ಜ್ ಪ್ಲಾನ್ ಅನ್ನು ಘೋಷಿಸಿದೆ. ರೂ. 499 ರಿಚಾರ್ಜ್ ಮಾಡಿದರೆ ಅನ್ಲಿಮಿಟೆಡ್ ಪ್ಲಾನ್ ನ ಪ್ರಯೋಜನವನ್ನು ಪಡೆಯಬಹುದು. ಪ್ರತಿನಿತ್ಯ 3GB ಡೇಟಾ ಜೊತೆಗೆ 100 SMS ಗಳ ಪ್ರಯೋಜನವನ್ನು ಪಡೆಯಬಹುದು. 499 ರೋ. ಚಂದಾದಾರರು ಡಿಸ್ನಿ+ ಹಾಟ್ಸ್ಟಾರ್ ಮೊಬೈಲ್ ಗೆ 3 ತಿಂಗಳ ಚಂದಾದಾರಿಕೆಯನ್ನು ಪಡೆಯುತ್ತಾರೆ.

Airtel Recharge Plan
Image Source: Airtel

Join Nadunudi News WhatsApp Group

Join Nadunudi News WhatsApp Group