Cultivated Land: ಸರ್ಕಾರೀ ಜಾಗದಲ್ಲಿ ವಾಸವಿದ್ದು ವ್ಯವಸಾಯ ಮಾಡುತ್ತಿರುವವರಿಗೆ ಗುಡ್ ನ್ಯೂಸ್, ಅಕ್ರಮ ಸಕ್ರಮಕ್ಕೆ ಅರ್ಜಿ ಆರಂಭ.
ಅಕ್ರಮ ಬಗರ್ ಹುಕುಂ ಸಾಗುವಳಿ ಭೂಮಿ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
Akrama Sakrama Scheme: ಸದ್ಯ ರಾಜ್ಯ ಸರ್ಕಾರ ರಾಜ್ಯದ ಜನತೆಗಾಗಿ ವಿವಿಧ ಸೌಲಭ್ಯವನ್ನು ನೀಡುತ್ತಿದೆ. ರಾಜ್ಯದ ಜನತೆಗೆ ಆರ್ಥಿಕವಾಗಿ ಬೆಂಬಲ ನೀಡಲು ರಾಜ್ಯ್ ಸರ್ಕಾರ ಮುಂದಾಗಿದೆ. ಇದೀಗ ರಾಜ್ಯ ಸರ್ಕಾರ ರೈತರಿಗೆ ಮಹತ್ವದ ಮಾಹಿತಿಯನ್ನು ನೀಡಿದೆ.
ರೈತರ ಏಳಿಗೆಗಾಗಿ ಸರ್ಕಾರ ಮುಂದಾಗಿಗೆ. ರೈತರ ಬಹುದಿನದ ಬೇಡಿಕೆಯನ್ನು ಈಡೇರಿಸಲು ಸರ್ಕಾರ ನಿರ್ಧರಿಸಿದೆ. ಅಕ್ರಮ ಸಕ್ರಮ ಸಾಗುವಳಿ ಭೂಮಿಯ ಬಗ್ಗೆ ರೈತರಿಗೆ ಬಿಗ್ ಅಪ್ಡೇಟ್ ಲಭಿಸಿದೆ. ಅಕ್ರಮ ಬಗರ್ ಹುಕುಂ ಸಾಗುವಳಿ ಭೂಮಿ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್
ಬಗರ್ ಹುಕುಂ ಅಥವ ಕೃಷಿ ಜಮೀನು ಅಕ್ರಮ ಸಕ್ರಮ ಅಂದರೆ ಅನಾದಿ ಕಾಲದಿಂದ ರೈತರು ಸರಕಾರಿ ಜಮೀನಿನಲ್ಲಿ ಕೃಷಿ ಮಾಡಿಕೊಂಡು ಬರುತ್ತಿದ್ದು, ಅವರ ಹೆಸರಿಗೆ ಖಾತೆ ಆಗಿರುವುದಿಲ್ಲ. ಇಂತಹ ಜಮೀನುಗಳನ್ನು ನಿಯಮ ಪ್ರಕಾರ ಕೃಷಿ ಮಾಡುವ ರೈತನಿಗೆ ಕೆಲವು ನಿಬಂಧನೆ ಪ್ರಕಾರ ಖಾತೆ ಅಥವಾ ಅಕ್ರಮ ಸಾಗುವಳಿಯನ್ನು ಸಕ್ರಮ ಮಾಡಿಕೊಡುವುದಾಗಿದೆ.
ಸರ್ಕಾರೀ ಭೂಮಿಗಳಲ್ಲಿ ಸಾಗುವಳಿ ಮಾಡುವ ರೈತರಿಗೆ ಆ ಭೂಮಿಯನ್ನು ರೈತರಿಗೆ ಸಕ್ರಮ ಮಾಡಿಕೊಡಬೇಕು ಎಂದು ರೈತರು ಈಗಾಗಲೇ ಸಾಕಷ್ಟು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಇದೀಗ ರಾಜ್ಯ ಸರ್ಕಾರ ರೈತರ ಈ ಬೇಡಿಕೆಗೆ ಸ್ಪಂದಿಸಿದೆ. ಈ ಮೂಲಕ ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದೆ.
ಶೀಘ್ರವೇ ಸಕ್ರಮವಾಗಲಿದೆ ಅಕ್ರಮ ಬಗರ್ ಹುಕುಂ ಸಾಗುವಳಿ ಭೂಮಿ
ಅಕ್ರಮ ಬಗರ್ ಹುಕುಂ ಸಾಗುವಳಿ ಭೂಮಿ ಶೀಘ್ರವೇ ಸಕ್ರಮಗೊಳಿಸುವಂತೆ ಕಂದಾಯ ಸಚಿವ Krishna Byre Gowda ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌದಧಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವರಿಗೆ ಬಗರ್ ಹುಕುಂ ತಂತ್ರಾಂಶ ಬಳಕೆ ಕುರಿತಾಗಿ ಪ್ರಾತ್ಯಕ್ಷಿತೆ ತೋರಿಸಲಾಗಿದೆ. ಈ ವೇಳೆ ಸಚಿವರು ಅನಧಿಕೃತ ಸಾಗುವಳಿ ಭೂಮಿಯನ್ನು ಬಗರ್ ಹುಕುಂ ಕುತಂತ್ರಾಂಶದ ಮೂಲಕ ಸಕ್ರಮಗೊಳಿಸುವ ಪ್ರಕ್ರಿಯೆಯನ್ನು ಶ್ರೀಘ್ರವೇ ಪೂರ್ಣಗೊಳಿಸಬೇಕು ಎಂದು ಮಾಹಿತಿ ನೀಡಿದ್ದಾರೆ.
ಕಂದಾಯ ಸಚಿವರ ಹೇಳಿಕೆ
ಭೂಪರಿಶೀಲನೆ ಬಗರ್ ಹುಕುಂ ತಂತ್ರಾಂಶವನ್ನು ಕಾರ್ಯಗತಗೊಳಿಸಬೇಕು. ನಮೂನೆ 50, 53, 57 ಅರ್ಜಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅವುಗಳನ್ನು ನ್ಯಾಯಯುತವಾಗಿ ವಿಲೇವಾರಿ ಮಾಡಬೇಕು. ಅನಧಿಕೃತ ಸಾಗುವಳಿದಾರರು ಕೃಷಿಯಲ್ಲಿ ತೊಡಗಿದ್ದರೆ ಅಕ್ರಮ ಸಕ್ರಮ ಅಡಿಯಲ್ಲಿ ಸಾಗುವಳಿ ಚೀಟಿ ನೀಡಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಸಚಿವ ಕೃಷ್ಣಾ ಬೈರೇಗೌಡ ಅವರು ಮಾಹಿತಿ ನೀಡಿದ್ದಾರೆ.