Alok Kumar: ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ಇದೀಗ ಹೊಸ ನಿಯಮ

ದಶಪಥ ಹೆದ್ದಾರಿಗೆ ಭೇಟಿ ನೀಡಿ ಕೆಲವು ಕಟ್ಟು ನಿಟ್ಟಿನ ಸೂಚನೆ ನೀಡಿದ ಅಲೋಕ್ ಕುಮಾರ್.

Alok Kumar: ಇತ್ತೀಚಿಗೆ ಸಾಕಷ್ಟು ಸಂಚಾರ ನಿಯಮಗಳು ಜಾರಿಯಾಗಿದೆ. ಆದರೂ ಸಹ ಟ್ರಾಫಿಕ್ ರೂಲ್ಸ್ ಬ್ರೇಕ್ ಆಗುತ್ತಿವೆ. ಬೆಂಗಳೂರಿನಲ್ಲಿ ಹೆಚ್ಚು ಹೆಚ್ಚು ಟ್ರಾಫಿಕ್ ಸಮಸ್ಯೆ ಕಾಣಿಸುತ್ತಿದೆ. ಈ ಸಮಸ್ಯೆಯನ್ನು ಕಡಿಮೆ ಮಾಡಲು ಅಲೋಕ್ ಕುಮಾರ್ ಹೊಸ ನಿಯಮಗಳನ್ನು ಜಾರಿಗೆ ತರುತ್ತಿದ್ದಾರೆ.

ದಶಪಥ ಹೆದ್ದಾರಿಗೆ ಭೇಟಿ ನೀಡಿದ ಅಲೋಕ್ ಕುಮಾರ್
ಬೆಂಗಳೂರು ಮೈಸೂರು ದಶಪಥ ಹೆದ್ದಾರಿ ಸಂಚಾರ ಪ್ರಾರಂಭವಾಗಿ ಕೆಲವೇ ತಿಂಗಳು ಕಳೆದಿವೆ. ಈ ಮಾರ್ಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುತ್ತಿವೆ.

Alok Kumar visited Dasapatha Highway
Image Credit: Deccanherald

ಈ ಹಿನ್ನಲೆಯಲ್ಲಿ ಕಾರಣ ತಿಳಿಯಲು ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ತಂಡವು ಮಂಗಳವಾರ ಹೆದ್ದಾರಿಗೆ ಭೇಟಿ ನೀಡಿ ಅಧ್ಯಯನ ನಡೆಸಿದೆ. ಕೆಲವು ಕಟ್ಟುನಿಟ್ಟಿನ ಸೂಚನೆಯನ್ನು ಅಲೋಕ್ ಕುಮಾರ್ ನೀಡಿದ್ದಾರೆ.

ಇನ್ನು ನಿಯಮಗಳನ್ನು ಪಾಲಿಸದೇ ಇದ್ದರೆ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆಯನ್ನು ನೀಡಲಾಗಿದೆ. ಇನ್ನು ಹೆದ್ದಾರಿಯಲ್ಲಿ ಎಲ್ ಬೋರ್ಡ್ ವಾಹನ ಸವಾರರಿಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ.

ಹೊಸ ಸಂಚಾರಿ ನಿಯಮ
ಇದೀಗ ಯಾರಾದರೂ ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೆ ಡಿ ಎಲ್ ರದ್ದು ಮಾಡುತ್ತೇವೆ. ಡ್ರೈವಿಂಗ್ ವೇಳೆ ಮೊಬೈಲ್ ಬಳಕೆ, ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಹಾಗು ಮಿತಿ ಮೀರಿ ವಾಹನ ಚಾಲನೆ ಮಾಡಿದರೆ ಕೇಸ್ ಹಾಕುವ ಕೆಲಸ ಮಾಡುತ್ತೇವೆ ಎಂದು ಸಂಚಾರಿ ಮತ್ತು ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

Join Nadunudi News WhatsApp Group

Alok Kumar visited Dasapatha Highway
Image Credit: Asianetnews

ಇನ್ನು ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆ ಇಂದು ಏನ್ ಹೆಚ್ ಅಧಿಕಾರಿಗಳ ಜೊತೆ ಅಲೋಕ್ ಕುಮಾರ್ ಹೆದ್ದಾರಿಯ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ನಾನು ರಸ್ತೆಯಲ್ಲಿ ಬಹಳ ಬಾರಿ ಸಂಚರಿಸಿದ್ದೇನೆ. ಕಳೆದ ಐದಾರು ತಿಂಗಳಿನಿಂದ ರಾಮನಗರ ವ್ಯಾಪ್ತಿಯಲ್ಲಿ 58 ಕ್ಕೂ ಹೆಚ್ಚು ಜನ ಮೃತ ಪಟ್ಟಿದ್ದಾರೆ. 48 ಕ್ಕೂ ಹೆಚ್ಚು ಅಪಘಾತಗಳಾಗಿವೆ.

ಬೆಂಗಳೂರು ಮೈಸೂರು ದಶಪಥಗಳಿಗೆ ಹೊಸ ನಿಯಮ
ಎಲ್ಲೆಲ್ಲಿ ಅಪಘಾತ ನಡೆದಿದೆ ಆ ಸ್ಥಳಗಳ ಸಮಸ್ಯೆ ಬಗ್ಗೆ ಪರಿಶೀಲಿಸಿದ್ದೇವೆ. ಹೆದ್ದಾರಿಯಲ್ಲಿ ಆಗಮನ ಮತ್ತು ನಿರ್ಗಮನ ಸಮಸ್ಯೆ ಇದೆ. ಕೆಲವೆಡೆ ರಸ್ತೆಯಲ್ಲಿ ತೀವ್ರ ತಿರುವುಗಳಿವೆ. ಇದರಿಂದ ವಾಹನಗಳು ಡಿವೈಡರ್ ಹಾರುತ್ತಿವೆ. ಹೈವೇಯಲ್ಲಿ ಲೇನ್ ಶಿಸ್ತನ್ನು ಬಳಸಬೇಕು. ಹೀಗಾಗಿ ಹೈವೇ ಪೆಟ್ರೋಲಿಂಗ್ ಅಗತ್ಯ ಎಂದು ಹೇಳಿದರು.

Alok Kumar visited Dasapatha Highway
Image Credit: Mysoorunews

ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ನಾವು ನಾಲ್ಕು ಹೈವೇ ಪೆಟ್ರೋಲಿಂಗ್ ವ್ಯವಸ್ಥೆ ಮಾಡಿದ್ದೇವೆ. ಇನ್ನು ವೇಗದ ಮಿತಿಯನ್ನು ಕಡಿಮೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಇದಕ್ಕಾಗಿ ಹೈ ಸ್ಪೀಡ್ ಲಿಮಿಟೆಡ್ ತರಲು ಚಿಂತನೆ ನಡೆಸಿದ್ದು, ಸ್ಪೀಡ್ ರಾಡಾರ್ ಅನ್ನು ಅಳವಡಿಕೆ ಮಾಡುತ್ತೇವೆ. ಮೊಬೈಲ್ ಬಳಕೆ, ಡ್ರಂಕ್ ಅಂಡ್ ಡ್ರೈವ್ ಕಂಡು ಬಂದರೆ ಕ್ರಮ ಕೈಗೊಳ್ಳುತ್ತೇವೆ. ಲೆಸೆನ್ಸ್ ರದ್ದುಗೊಳಿಸುವ ಕೆಲಸ ಮಾಡುತ್ತೇವೆ ಎಂದು ಅಲೋಕ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

Join Nadunudi News WhatsApp Group