BPL Card: ಈ ಜಿಲ್ಲೆಗಳಲ್ಲಿ ಇಂದಿನಿಂದ ರೇಷನ್ ಕಾರ್ಡ್ ಹೆಸರು ಸೇರ್ಪಡೆ ಮತ್ತು ತಿದ್ದುಪಡಿಗೆ ಅವಕಾಶ, ಬೇಗ ಕೆಲಸ ಮುಗಿಸಿ.
ಪಡಿತರ ಚೀಟಿಯನ್ನು ತಿದ್ದುಪಡಿ ಮಾಡಿಕೊಳ್ಳಲು ಉತ್ತಮ ಅವಕಾಶ.
Amendment of Ration Card: ರಾಜ್ಯ ಸರ್ಕಾರ ರಾಜ್ಯದ ಬಡ ಜನರಿಗೆ Anna Bhagya ಯೋಜನೆಯಡಿ ಉಚಿತ ಪಡಿತರನ್ನು ನೀಡುತ್ತಿದೆ. ಈ ಯೋಜನೆಯಾಗಿ 5kg ಉಚಿತ ಅಕ್ಕಿ ಹಾಗೂ 5kg ಅಕ್ಕಿಯ ಬದಲಾಯಿ ಹಣವನ್ನು ಸರ್ಕಾರ ನೀಡುತ್ತಿದೆ. ಆದರೆ ಸರ್ಕಾರದ ಈ ಉಚಿತ ಯೋಜನೆಯ ಲಾಭವನ್ನು ಎಲ್ಲ ಅರ್ಹ ಫಲಾನುಭವಿಗಳು ಪಡೆಯಲು ಸಾಧ್ಯವಾಗುತ್ತಿಲ್ಲ. ಅರ್ಹರು ಯೋಜನೆಯಿಂದ ವಂಚಿತರಾಗುತಿರಲು ಒಂದೇ ಕಾರಣ ಎಂದರೆ ಪಡಿತರ ಚೀಟಿಯಲ್ಲಿನ ತಪ್ಪುಗಳು.
ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ
ಇನ್ನು ಯಾವುದೇ ಅರ್ಹ ಫಲಾನುಭವಿಗಳು ಯೋಜನೆಯಿಂದ ವಂಚಿತರಾಗಬಾರದು ಎನ್ನುವ ಕಾರಣ ಸರ್ಕಾರ ಪದೇ ಪದೇ Ration Card ತಿದ್ದುಪಡಿಗೆ ಅವಕಾಶವನ್ನು ನೀಡುತ್ತಿದೆ. ಈಗಾಗಲೇ ಮೂರ್ನಾಲ್ಕು ಬಾರಿ ಸರ್ಕಾರ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಿದ್ದು, ಸದ್ಯ ಇಂದು ಈ ಜಿಲ್ಲೆಯ ಜನರು ತಮ್ಮ Ration Card ತಿದ್ದುಪಡಿ ಮಾಡಿಕೊಳ್ಳಬಹುದು. ನಿಮ್ಮ ಪಡಿತರ ಚೀಟಿಯನ್ನು ತಿದ್ದುಪಡಿ ಮಾಡಿಕೊಳ್ಳಲು ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯ ಹೆಸರು ಇದೆಯೇ? ಎನ್ನುವುದು ತಿಳಿದುಕೊಳ್ಳಿ.
APL, BPL ರೇಷನ್ ಕಾರ್ಡ್ ಹೊಂದಿರುವವರ ಗಮನಕ್ಕೆ
ಈ ಹಿಂದೆ ರಾಜ್ಯದಲ್ಲಿ BPL Card ತಿದ್ದುಪಡಿಗಾಗಿ ಒಟ್ಟು 3.18 ಲಕ್ಷ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಅದರ ಜೊತೆಗೆ ಕಳೆದ ಒಂದು ತಿಂಗಳಿನಿಂದ ಹೊಸದಾಗಿ ತಿದ್ದುಪಡಿಗೆ ಒಟ್ಟು 53,219 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಒಟ್ಟು 3 ಲಕ್ಷ 70 ಸಾವಿರ ಅರ್ಜಿಗಳು ಕಾರ್ಡ್ ತಿದ್ದುಪಡಿಗಾಗಿ ಸಲ್ಲಿಕೆಯಾಗಿದೆ. ಸದ್ಯ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಒಟ್ಟು 1,17,646 BPL Card ಗಳ ತಿದ್ದುಪಡಿಗೆ ಅನುಮತಿ ನೀಡಲಾಗಿದೆ.
ಸದ್ಯ ರಾಜ್ಯ ಸರ್ಕಾರ October 19 ರಿಂದ October 21 ರವರೆಗೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿದೆ. ಬೆಳಿಗ್ಗೆ 10 ರಿಂದ ಸಂಜೆ 7 ರವರೆಗೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದ್ದು, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಗಳಲ್ಲಿ ಆದಷ್ಟು ಬೇಗ ತಿದ್ದುಪಡಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇಂದಿನಿಂದ ಈ ಜಿಲ್ಲೆಯಲ್ಲಿ ರೇಷನ್ ಕಾರ್ಡ್ ಹೆಸರು ಸೇರ್ಪಡೆ ಅಥವಾ ತಿದ್ದುಪಡಿ ಅವಕಾಶ
ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ಇಂದಿನಿಂದ ರೇಷನ್ ಕಾರ್ಡ್ ಹೆಸರು ಸೇರ್ಪಡೆ ಅಥವಾ ತಿದ್ದುಪಡಿ ಅವಕಾಶ ನೀಡಲಾಗಿದೆ. ಫಲಾನುಭವಿಗಳ ಹೆಸರು ಬದಲಾವಣೆ, ಪಡಿತರ ಕೇಂದ್ರ ಬದಲಾವಣೆ, ಕಾರ್ಡ್ ನಲ್ಲಿ ಸದಸ್ಯರ ಹೆಸರನ್ನು ರದ್ದುಗೊಳಿಸುವುದು, ಕಾರ್ಡ್ ನಲ್ಲಿ ಸದಸ್ಯರ ಹೆಸರು ಸೇರ್ಪಡೆ, ಕಾರ್ಡ್ ನಲ್ಲಿನ ಮಹಿಳಾ ಮುಖ್ಯಸ್ಥರ ಹೆಸರು ಬದಲಾವಣೆಗೆ ಸರ್ಕಾರ ಅನುಮತಿ ನೀಡಿದೆ.