Ration Card: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಇನ್ನೊಂದು ಆದೇಶ, ಇನ್ನುಮುಂದೆ ಈ ಕೆಲಸ ಸಾಧ್ಯವಿಲ್ಲ.
ರೇಷನ್ ಕಾರ್ಡ್ ನಲ್ಲಿ ಹೆಸರು ತಿದ್ದುಪಡಿ ಮಾಡಬೇಕೆಂದು ಕೊಂಡವರಿಗೆ ಅಗತ್ಯ ಮಾಹಿತಿ.
Amendment Of Ration Card In Karnataka: ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಈಗಾಗಲೇ ಆರಂಭಗೊಂಡಿದೆ. ಇನ್ನು ಗೃಹ ಲಕ್ಷ್ಮಿ ಯೋಜನೆಯಡಿ ರಾಜ್ಯ ಸರಕಾರ ಮನೆ ಯಜಮಾನಿಯರಿಗೆ 2000 ಹಣವನ್ನು ಪ್ರತಿ ತಿಂಗಳು ನೀಡಲಿದ್ದು, ಇನ್ನು ಈ ಹಣವನ್ನು ಪಡೆಯಲು ಪಡಿತರ ಚೀಟಿಯಲ್ಲಿ ಮಹಿಳೆಯರು ಮನೆಯ ಯಜಮಾನಿ ಆಗಿರಬೇಕು ಎಂದಿದೆ.
ಪಡಿತರ ಚೀಟಿದಾರರಿಗೆ ಅಗತ್ಯ ಮಾಹಿತಿ
ನಮ್ಮ ಮನೆಯ ರೇಷನ್ ಕಾರ್ಡ್ ನಲ್ಲಿ ನಮ್ಮ ಯಜಮಾನರ ಹೆಸರಿದೆ, ರೇಷನ್ ಕಾರ್ಡ್ ನಲ್ಲಿ ಯಜಮಾನರ ಹೆಸರು ಬದಲಿಸಬೇಕು ಅಂದುಕೊಂಡವರಿಗೆ ಇದೀಗ ಸರ್ಕಾರ ಸಿಹಿ ಸುದ್ದಿಯನ್ನ ನೀಡಿದೆ. ಹೌದು ಇದೀಗ ರಾಜ್ಯದಲ್ಲಿ 1.53 ಕೋಟಿ ಮಂದಿ ಪಡಿತರ ಚೀಟಿಯನ್ನು ಹೊಂದಿದ್ದಾರೆ. ಗೃಹ ಲಕ್ಷ್ಮಿ ಯೋಜನೆಯ ಹಣ ಪಡೆಯಲು ಮಹಿಳೆಯೇ ಮನೆಯ ಮುಖ್ಯಸ್ಥೆ ಆಗಿರಬೇಕು. 1 .22 ಕೋಟಿ ರೇಷನ್ ಕಾರ್ಡ್ ನಲ್ಲಿ ಮಹಿಳೆಯರೇ ಯಜಮಾನಿ ಯಾಗಿದ್ದು ಇವರು ಗೃಹ ಲಕ್ಷ್ಮಿ ಯೋಜನೆಯ ಹಣ ಪಡೆಯಲು ಅರ್ಹರಾಗಿರುತ್ತಾರೆ.
ಇನ್ನುಳಿದ ಪಡಿತರ ಚೀಟಿಗಳಲ್ಲಿ ಪುರುಷರು ಮನೆಯ ಯಜಮಾನರಾಗಿದ್ದು ಅವರು ಗೃಹ ಲಕ್ಷ್ಮಿ ಯೋಜನೆಯ ಹಣ ಪಡೆಯಲು ಸಾಧ್ಯವಿಲ್ಲ. ಹಾಗಾಗಿ ಅಂತವರಿಗೆ ಸರ್ಕಾರ ಪಡಿತರ ಚೀಟಿಯಲ್ಲಿ ಯಜಮಾನಿಯ ಹೆಸರು ನಮೂದಿಸಲು ಅವಕಾಶ ನೀಡಿದೆ. ಪಡಿತರ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡಲು ಆಗಸ್ಟ್ 16 ರಿಂದಲೇ ಅವಕಾಶ ಕಲ್ಪಿಸಲಾಗಿದೆ. ಶ್ರೀಘ್ರದಲ್ಲೇ ಇದರ ಅವಧಿ ಮುಕ್ತಾಯಗೊಳ್ಳಲಿದೆ. ನೀವು ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಕೇಂದ್ರ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಆನ್ಲೈನ್ ಮೂಲಕ ಪಡಿತರ ಚೀಟಿ ತಿದ್ದುಪಡಿ
ಆನ್ಲೈನ್ ಅಲ್ಲಿ ಪಡಿತರ ಚೀಟಿ ತಿದ್ದುಪಡಿಗಾಗಿ http://ahara.kar.nic.in/ವೆಬ್ ಸೈಟ್ ಮೇಲೆ ಕ್ಲಿಕ್ ಮಾಡಿ, ತಿದ್ದುಪಡಿ ಅಥವಾ ಹೊಸ ಸೇರ್ಪಡೆ ಆಯ್ಕೆ ಮೇಲೆ ಕ್ಲಿಕ್ ಮಾಡಿ, ಜಿಲ್ಲೆ ಯನ್ನು ಆಯ್ಕೆ ಮಾಡಿ, ಅಗತ್ಯ ಮಾಹಿತಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿದ ನಂತರ ಫಾರ್ಮ್ ಸಬ್ ಮೀಟ್ ಕೊಡಿ. ನಂತರ ನಿಮಗೆ ಅರ್ಜಿ ಸಲ್ಲಿಕೆಯ ರಿಜಿಸ್ಟರ್ ನಂಬರ್ ಸಿಗಲಿದೆ. ಈ ನಂಬರ್ ಮೂಲಕ ನೀವು ಅರ್ಜಿಯ ಸ್ಟೇಟಸ್ ಅನ್ನು ಟ್ರಕ್ ಮಾಡಬಹುದಾಗಿದೆ.