Amrit Mahotsav: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಸರ್ಕಾರದ ಉಚಿತ ಲ್ಯಾಪ್ ಟಾಪ್ ಗೆ ಈ ರೀತಿಯಲ್ಲಿ ಅರ್ಜಿ ಹಾಕಿ

ರಾಜ್ಯ ಸರ್ಕಾರ ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಇನ್ನಷ್ಟು ವಿಸ್ತರಿಸಿದೆ.

Extension Of Time For Submission Of Application For Laptop: ಸದ್ಯ ರಾಜ್ಯದಲ್ಲಿ ಡಿಜಿಟಲ್ ಶಿಕ್ಷಣವನ್ನು ಉತ್ತೇಜಿಸಲು ಸರ್ಕಾರ ವಿವಿಧ ಸೌಲಭ್ಯವನ್ನು ವಿದ್ಯಾರ್ಥಿಗಳಿಗಾಗಿ ನೀಡುತ್ತಿದೆ. ಈಗಾಗಲೇ ರಾಜ್ಯ ಸರ್ಕಾರ ಈ ಬಾರಿಯ ಶಿಕ್ಷಣ ನೀತಿಯಲ್ಲಿ ಸಾಕಷ್ಟು ಬದಲಾವಣೆಯನ್ನು ಮಾಡಿದೆ. ವಿದ್ಯಾರ್ಥಿಗಳು ಹೊಸ ಶಿಕ್ಷಣ ನೀತಿಯಡಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ.

Amrit Mahotsav Laptop
Image Credit: Oneindia

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ಸದ್ಯ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗಾಗಿ ಲ್ಯಾಪ್ ಟಾಪ್ ಅನ್ನು ನೀಡಲು ಮುಂದಾಗಿದೆ. ಇನ್ನು 2022 -23 ನೇ ಸಾಲಿನ ಪಾಲಿಕೆಯ ಅಮೃತ ಮಹೋತ್ಸವ ಲ್ಯಾಪ್ ಟಾಪ್ (Amrit Mahotsav Laptop Program) ವಿತರಿಸಲು ಸರ್ಕಾರ ಮುಂದಾಗಿದೆ. ಇದೀಗ ರಾಜ್ಯ ಸರ್ಕಾರ ಈ ಅಮೃತ ಮಹೋತ್ಸವ ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಇನ್ನಷ್ಟು ವಿಸ್ತರಿಸಿದೆ. ಈ ಮೂಲಕ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ.

ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
ಸದ್ಯ BBMP ವ್ಯಾಪ್ತಿಯಲ್ಲಿ 2022-23 ನೇ ಸಾಲಿನಲ್ಲಿ ಅಮೃತ ಮಹೋತ್ಸವ ಲ್ಯಾಪ್‌ ಟಾಪ್ ಕಾರ್ಯಕ್ರಮದಡಿ, ವಿದ್ಯಾರ್ಥಿಗಳು ಈಗಾಗಲೇ ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಮತ್ತು ಆನ್‌ ಲೈನ್‌ ನಲ್ಲಿ ಅಗತ್ಯ ದಾಖಲೆಗಳನ್ನು ಸಮರ್ಪಕವಾಗಿ ಸಲ್ಲಿಸದ ವಿದ್ಯಾರ್ಥಿಗಳಿಗೆ ಅರ್ಹ ದಾಖಲೆಗಳನ್ನು ಮತ್ತೆ ಅಪ್‌ ಲೋಡ್ ಮಾಡಲು ಸಮಯ ನೀಡಲಾಗುತ್ತದೆ.

ಪಾಲಿಕೆಯ ವೆಬ್‌ ಸೈಟ್ https://welfare.bbmpgov.in/ ಗೆ ಭೇಟಿ ನೀಡಿ ಅರ್ಜಿಯ ಪ್ರಸ್ತುತ ಸ್ಥಿತಿ ಮತ್ತು ಅರ್ಜಿಯ ತಿದ್ದುಪಡಿಗೆ ನಮೂದಿಸಿರುವ ಮೊಬೈಲ್ ಸಂಖ್ಯೆ ಮತ್ತು ಅರ್ಜಿ ಸಂಖ್ಯೆಯನ್ನು ನಮೂದಿಸುವ ಮೂಲಕ ಸ್ಥಿತಿಗತಿಯನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ.

Amrit Mahotsav Laptop Program
Image Credit: Original Source

ಅಪ್ಲಿಕೇಶನ್‌ ಅನ್ನು ತಿದ್ದುಪಡಿ ಮಾಡಲು ಅಥವಾ ಹೊಸ ದಾಖಲೆಗಳನ್ನು ಅಪ್‌ ಲೋಡ್ ಮಾಡಲು ಅವಕ್ಷ ಕಲ್ಪಿಸಿಕೊಡಲಾಗಿದೆ. ಇನ್ನು ಅಮೃತ ಮಹೋತ್ಸವ ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಸಾಲು ಕೊನೆಯ ದಿನಾಂಕ 19 ಫೆಬ್ರವರಿ ಆಗಿತ್ತು. ಆದರೆ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ದಿನಾಂಕವನ್ನು ಫೆ, 29 ರ ವರೆಗೆ ವಿಸ್ತರಿಸಿದೆ. ಅರ್ಹ ವಿದ್ಯಾರ್ಥಿಗಳು ಫೆ. 29 ರೊಳಗೆ ಅಮೃತ ಮಹೋತ್ಸವ ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಸಬಹುದು.

Join Nadunudi News WhatsApp Group

Join Nadunudi News WhatsApp Group