Free Account: ಅನ್ನಭಾಗ್ಯ ಯೋಜನೆಯ ಬೆನ್ನಲ್ಲೇ ಇನ್ನೊಂದು ಘೋಷಣೆ, ಸರ್ಕಾರವೇ ತೆರೆಯಲಿದೆ ಬ್ಯಾಂಕ್ ಖಾತೆ.

ಬ್ಯಾಂಕ್ ಖಾತೆ ಇಲ್ಲದಿರುವವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್.

Anna Bhagya Scheme Bank Account: ರಾಜ್ಯದಲ್ಲಿ ಸದ್ಯ ‘Anna Bhagya’ ಯೋಜನೆಯ ಕುರಿತು ಚರ್ಚೆ ಸಾಕಷ್ಟು ನಡೆಯುತ್ತಿದೆ. ಜುಲೈ ನಿಂದ ಅರ್ಹ ಫಲಾನುಭವಿಗಳು ಅನ್ನ ಭಾಗ್ಯ ಯೋಜನೆಯಡಿ ಉಚಿತ ಅಕ್ಕಿಯ ಜೊತೆ ಹಣದ ಲಾಭವನ್ನು ಪಡೆಯುತ್ತಿದ್ದಾರೆ. ಇನ್ನು ಅನ್ನ ಭಾಗ್ಯ ಯೋಜನೆಯ ಲಾಭ ಪಡೆಯಲು ಜನರು ಸಾಕಷ್ಟು ಕೆಲಸಗಳನ್ನು ಮಾಡಬೇಕಿದೆ.

ಇನ್ನು Anna Bhagya ಯೋಜನೆಯ ಹಣ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಆಗಲಿದೆ. ಆದರೆ ಎರಡು ತಿಂಗಳುಗಳಿಂದ ಕೆಲ ಫಲಾನುಭವಿಗಳಿಗೆ ಹಣ ಖಾತೆಗೆ ಜಮಾ ಆಗುತ್ತಿಲ್ಲ. ಇದೀಗ ರಾಜ್ಯ ಸರ್ಕಾರ ಅಂತವರಿಗೆ ಮಹತ್ವದ ಮಾಹಿತಿಯನ್ನು ಹೊರಡಿಸಿದೆ. ರಾಜ್ಯ ಸರ್ಕಾರದ ಈ ನಿರ್ಧಾರ ಅನ್ನ ಭಾಗ್ಯ ಯೋಜನೆಯ ಲಾಭದಿಂದ ವಂಚಿತರಾದವರಿಗೆ ಸಹಾಯವಾಗಲಿದೆ.

State Govt anna bhagya scheme
Image Credit: Oneindia

ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ
ಸರ್ಕಾರ ಬಡತನ ರೇಖೆಗಿಂತ ಕೆಳಗಿರುವವರು ಉಚಿತ ಪಡಿತರನ್ನು ನೀಡಿತ್ತು. ವಿಧಾನಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಉಚಿತ ಅನ್ನ ಭಾಗ್ಯ ಯೋಜನೆ ಇನ್ನಷ್ಟು ಬೇಡಿಕೆ ಪಡೆದುಕೊಂಡಿದೆ. ಅನ್ನ ಭಾಗ್ಯ ಯೋಜನೆಯಡಿ ಉಚಿತವಾಗಿ 10 ಕೆಜಿ ಅಕ್ಕಿ ನೀಡುವುದಾಗಿ ರಾಜ್ಯಸಾರ್ಕಾರ ಘೋಷಿಸಿತ್ತು. ಆದರೆ ಅನಿವಾರ್ಯ ಕಾರಣಗಳಿಂದ 5 ಕೆಜಿ ಅಕ್ಕಿ ಹಾಗು 5 ಕೆಜಿ ಅಕ್ಕಿಯ ಬದಲಾಗಿ ಹಣವನ್ನು ನೀಡುವುದಾಗಿ ಸರ್ಕಾರ ಘೋಷಣೆ ಹೊರಡಿಸಿದೆ.

ಪ್ರತಿ ಕೆಜಿಗೆ 34 ರೂ. ಗಳಂತೆ 170 ರೂ. ನೀಡುವುದಾಗಿ ಘೋಷಣೆ ಹೊರಡಿಸಿತ್ತು. ಕೇಂದ್ರ ಸರ್ಕಾರ ಜನರಿಗೆ ಆಧಾರ್ ಗೆ ಪಡಿತರ ಲಿಂಕ್ ಮಾಡುವಂತೆ ಆದೇಶ ನೀಡಿತ್ತು. ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡಿದರೆ ಸರ್ಕಾರದಿಂದ ಸಿಗುವ ಉಚಿತ ಪಡಿತರವನ್ನು ಪಡೆಯಬಹುದು.

Anna Bhagya Latest Update
Image Credit: Tribuneindia

ಆಧಾರ್ ಗೆ ಪಡಿತರ ಲಿಂಕ್ ಆದರೆ ಅನ್ನ ಭಾಗ್ಯ ಯೋಜನೆಯಡಿ ಸಿಗುವ ಹಣವನ್ನು ಸರ್ಕಾರ ನೇರವಾಗಿ ನಿಮ್ಮ ಖಾತೆಗೆ ಜಮಾ ಮಾಡುತ್ತದೆ. ಬ್ಯಾಂಕ್ ಖಾತೆ ಹೊಂದಿಲ್ಲದವರು ಅನ್ನ ಭಾಗ್ಯ ಹಣದ ಪ್ರಯಾಯೋಜನ ಪಡೆಯಲು ಸಾಧ್ಯವಾಗಿಲ್ಲ. ಈ ಕಾರಣಕ್ಕೆ ಸರಕಾರ ಬ್ಯಾಂಕ್ ಖಾತೆ ಇಲ್ಲದವರಿಗೆ ಸಿಹಿ ಸುದ್ದಿ ನೀಡಿದೆ.

Join Nadunudi News WhatsApp Group

ಬ್ಯಾಂಕ್ ಖಾತೆ ಇಲ್ಲದವರು ಚಿಂತಿಸುವ ಅಗತ್ಯ ಇಲ್ಲ
ಸದ್ಯ ರಾಜ್ಯ ಸರ್ಕಾರ ಬ್ಯಾಂಕ್ ಖಾತೆ ಇಲ್ಲದವರಿಗೆ ಸಿಹಿಸುದ್ದಿ ನೀಡಿದೆ. ಬ್ಯಾಂಕ್ ಖಾತೆ ಇಲ್ಲದ ಪಡಿತರ ಚೀಟಿದಾರರಿಗೆ ಸರ್ಕಾರವೇ ಬ್ಯಾಂಕ್ ಖಾತೆಯನ್ನು ಮಾಡಿಕೊಡಲಿದೆ. ರಾಜ್ಯದಲ್ಲಿ ಬ್ಯಾಂಕ್ ಖಾತೆ ಇಲ್ಲದ 21 ಲಕ್ಷ ಪಡಿತರ ಚೀಟಿದಾರರಿದ್ದಾರೆ. ಇಂತವರು ಸರ್ಕಾರ ಅನ್ನ ಭಾಗ್ಯ ಯೋಜನೆಯಿಂದ ವಂಚಿತರಬಾರದು ಎನ್ನುವ ಹಿನ್ನಲೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಸದ್ಯದಲ್ಲೇ ಸರ್ಕಾರ ಬ್ಯಾಂಕ್ ಖಾತೆ ಇಲ್ಲದವರಿಗೆ ಹೊಸ ಅಕೌಂಟ್ ತೆರೆಸಲಿದೆ ಎಂದು ಆಹಾರ ಮತ್ತು ನಾಗರೀಕ ಸಚಿವ ಕೆ. ಹೆಚ್ ಮುನಿಯಪ್ಪ ಅವರು ಮಾಹಿತಿ ನೀಡಿದ್ದಾರೆ.

Join Nadunudi News WhatsApp Group