BPL Card: BPL ರೇಷನ್ ಕಾರ್ಡ್ ಹೊಂದಿರುವ ಜನರಿಗೆ ಸರ್ಕಾರದ ಇನ್ನೊಂದು ಆದೇಶ, ಇಂತವರಿಗಿಲ್ಲ ಅನ್ನಭಾಗ್ಯ ಹಣ.

ಕುಟುಂಬದ ಮುಖ್ಯಸ್ತರನ್ನು ನಿಗಧಿಪಡಿಸದ ಪಡಿತರ ಚೀಟಿದಾರರಿಗೆ ನಗದು ವರ್ಗಾವಣೆ ಇಲ್ಲ.

Anna Bhagya Scheme Latest Update: ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯ ಕುರಿತು ಈಗಾಗಲೇ ಸಾಕಷ್ಟು ಅಪ್ಡೇಟ್ ಗಳು ಹೊರ ಬಿದ್ದಿದೆ. ಸರ್ಕಾರ 5 ಕೆಜಿ ಅಕ್ಕಿಯ ಬದಲು ಹಣ ಖಾತೆಗೆ ವರ್ಗಾವಣೆ ಮಾಡುವುದು ತಿಳಿಸಿದೆ. ಆದರೆ 5 ಕೆಜಿಯ ಅಕ್ಕಿಯ ಹಣ ಕೆಲವು ನಿಯಮಗಳ ಮೇರೆಗೆ ವರ್ಗಾಯಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಅನ್ನ ಭಾಗ್ಯ ನಗದು ವರ್ಗಾವಣೆ
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಹೊಂದಿರುವ ಆಹಾರ ತಂತ್ರಾಂಶದಲ್ಲಿ ಲಭ್ಯವಿರುವ ಮಾಹಿತಿಯನ್ನು ಬಳಸಿಕೊಂಡು 2023 ಜುಲೈ ನಿಂದ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಕುಟುಂಬಗಳಿಗೆ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬಗಳಿಗೆ ನಗದು ವರ್ಗಾವಣೆಯನ್ನು ಪ್ರಾರಂಭಿಸಲಾಗಿದೆ.

No cash transfer to ration card holders having more than one head
Image Credit: Thesouthfirst

ಒಂದಕ್ಕಿಂತ ಹೆಚ್ಚು ಮುಖ್ಯಸ್ಥರನ್ನು ಹೊಂದಿರುವ ಪಡಿತರ ಚೀಟಿದಾರರಿಗೆ ನಗದು ವರ್ಗಾವಣೆ ಇಲ್ಲ
ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರನ್ನು ಹೊಂದಿರದ ಅಥವಾ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರನ್ನು ಹೊಂದಿರುವ ಪಡಿತರ ಚೀಟಿ ಕುಟುಂಬಗಳನ್ನು ನಗದು ವರ್ಗಾವಣೆ ಸೌಲಭ್ಯದಿಂದ ಹೊರಗಿರಿಸಲಾಗಿದೆ. ಕುಟುಂಬದ ಮುಖ್ಯಸ್ತರನ್ನು ನಿಗಧಿಪಡಿಸದ ಪಡಿತರ ಕುಟುಂಬಗಳು ಮುಖ್ಯರನ್ನು ಆಯ್ಕೆ ಮಾಡಿಕೊಳ್ಳಬೇಕಾಗಿರುತ್ತದೆ.

ಅಂತ್ಯೋದಯ ಅನ್ನ ಭಾಗ್ಯ ಯೋಜನೆ
ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದಲ್ಲಿ ಮೂರೂ ಅಥವಾ ಮೂರಕ್ಕಿಂತ ಕಡಿಮೆ ಸದಸ್ಯರಿರುವ ಕುಟುಂಬವು ಈಗಾಗಲೇ ಪ್ರತಿ ತಿಂಗಳು 35 ಕೆಜಿ ಆಹಾರ ಧಾನ್ಯವನ್ನು ಪಡೆಯುತ್ತಿರುವುದರಿಂದ ಅಂತಹ ಅಂತ್ಯೋದಯ ಅನ್ನ ಯೋಜನಾ ಪಡಿತರ ಚೀಟಿ ಕುಟುಂಬಗಳಿಗೆ ನಗದು ವರ್ಗಾವಣೆಯ ಸೌಲಭ್ಯವನ್ನು ನೀಡಲಾಗುವುಲ್ಲ.

No cash transfer to ration card holders having more than one head
Image Credit: Deccanherald

ಆದರೆ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಯ ಕುಟುಂಬದಲ್ಲಿ 4 ಸದಸ್ಯರಿದ್ದಾರೆ ಸದರಿ ಕುಟುಂಬವು 170 ರೂಪಾಯಿಗಳನ್ನು 5 ಸದಸ್ಯರನ್ನು ಹೊಂದಿರುವ ಕುಟುಂಬವು 510 ರೂಪಾಯಿಗಳನ್ನು ಮತ್ತು 6 ಸದಸ್ಯರನ್ನು ಹೊಂದಿರುವ ಕುಟುಂಬವು ರೂಪಾಯಿ 510 ಗಳನ್ನೂ ಪಡೆಯುತ್ತದೆ.

Join Nadunudi News WhatsApp Group

ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರು ಸಕ್ರಿಯ ಬ್ಯಾಂಕ್ ಖಾತೆಯನ್ನು ಹೊಂದಿಲ್ಲದಿದ್ದರೆ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆ ಮಾಡದಿದ್ದರೆ, ಬ್ಯಾಂಕ್ ಖಾತೆಯ ಮಾಹಿತಿಯು ಇದುವರೆಗೂ ಲಭ್ಯವಿಲ್ಲದಿದ್ದಲ್ಲಿ, ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯ ಮಾಹಿತಿಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿದ ನಂತರ ನಿಷ್ಕ್ರಿಯ ಬ್ಯಾಂಕ್ ಖಾತೆಯನ್ನು ಮತ್ತೆ ತೆರೆದ ನಂತರ ಅಂತಹ ಪಡಿತರ ಚೀಟಿ ಕುಟುಂಬದ ಮುಖ್ಯಸ್ಥರ ಖಾತೆಗೆ ಮಾತ್ರ ನಗದು ವರ್ಗಾವಣೆ ಮಾಡಲಾಗುವುದು.

Join Nadunudi News WhatsApp Group