APAAR ID: ದೇಶದಲ್ಲಿ ಜಾರಿಗೆ ಬಂತು Apaar ID ಕಾರ್ಡ್, ಇಂತಹ ಜನರಿಗೆ ಮಾತ್ರ ಸಿಗಲಿದೆ ಈ ID ಕಾರ್ಡ್.

ದೇಶದಲ್ಲಿ ಜಾರಿಗೆ ಬಂತು apaar ID ಕಾರ್ಡ್.

APAAR ID Card In India: ಸದ್ಯ ದೇಶದಲ್ಲಿ ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ಜಾರಿಗೆ ತರುತ್ತಿದೆ. ಅದರಲ್ಲೂ ಹೆಚ್ಚಾಗಿ ಸರ್ಕಾರ ವಿದ್ಯಾರ್ಥಿಗಳ್ಗಗಿ ವಿವಿಧ ಯೋಜನೆಯನ್ನು ಪರಿಚಯಿಸಿದೆ. ಸದ್ಯ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಗುರುತಿಗಾಗಿ ವಿಶೇಷ ID ದಾಖಲೆಯನ್ನು ನೀಡಲು ಮುಂದಾಗಿದೆ. ಇದನ್ನು ಕಾರ್ಯಗತಗೊಳಿಸಲು ಕೇಂದ್ರ ಸರ್ಕಾರ ಹೊಸ ಯೋಜನೆಯನ್ನೇ ರೂಪಿಸಲು ಸಜ್ಜಾಗಿದೆ.

ಈ ಯೋಜನೆಯನ್ನು ಜಾರಿಗೊಳಿಸುವುದುದರ ಮೂಲಕ ವಿದ್ಯಾರ್ಥಿಗಳಿಗೆ Aadhaar Card ನ ಬದಲಾಗಿ ವಿಶೇಷ ದಾಖಾಲೆ ನೀಡಲು ಚಿಂತನೆ ನಡೆಸಿದೆ. ಇನ್ನುಮುಂದೆ ವಿದ್ಯಾರ್ಥಿಗಳಿಗೆ ಆಧಾರ್ ರೀತಿಯೇ ಹೊಸ ಗುರಿತಿನ ಚೀಟಿ ನೀಡಲು ಸರ್ಕಾರ ನಿರ್ಧರಿಸಿದೆ. ಅಷ್ಟಕ್ಕೂ ಈ ಹೊಸ ಯೋಜನೆಯ ಯಾವುದು ಎಂದು ಯೋಚಿಸುತ್ತಿದ್ದೀರಾ? ಸರ್ಕಾರ ಈ ಯೋಜನೆ ಬಗ್ಗೆ ಮಾಹಿತಿ ತಿಳಿಯೋಣ.

APAAR ID For Students
Image Credit: Oneindia

One Nation, One Student ID
ಪೋಷಕರು ಒಪ್ಪಿಗೆ ಮೇರೆಗೆ ಶಾಲಾ ವಿದ್ಯಾರ್ಥಿಗಳು ಶೀಘ್ರದಲ್ಲೇ ತಮ್ಮದೇ ಆದ ವಿಶಿಷ್ಟ ಗುರುತಿನ ಸಂಖ್ಯೆಯನ್ನು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020 ರ ಭಾಗವಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಪೂರ್ವ ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗೆ ಪ್ರತಿ ವಿದ್ಯಾರ್ಥಿಗೆ Automatic Permanent Academic Account Registry (APAAR) ಎಂಬ ‘One Nation, One Student ID’ ರಚಿಸಲು ಯೋಜಿಸಿದೆ ಎನ್ನಲಾಗಿದೆ. ದೇಶದ ವಿದ್ಯಾರ್ಥಿಗಳಿಗೆ ವಿಶಿಷ್ಟ ಗುರುತಿನ ಚೀಟಿ ನೀಡುವುದು ಸರ್ಕಾರದ ಉದ್ದೇಶವಾಗಿದೆ.

APAAR ID For Students
Image Credit: Bharatexpress

Automatic Permanent Academic Account Registry
APAAR ID, ಎಜುಕೇಶನ್ ಇಕೋಸಿಸ್ಟಮ್ ರಿಜಿಸ್ಟ್ರಿ ಅಥವಾ ಎಜುಲಾಕರ್ ಅನ್ನು ಜೀವಮಾನದ ID ಸಂಖ್ಯೆ ಎಂದು ಪರಿಗಣಿಸಲಾಗುತ್ತದೆ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಯಾಣ ಮತ್ತು ಸಾಧನೆಗಳನ್ನು ಟ್ರ್ಯಾಕ್ ಮಾಡುತ್ತದೆ. ಶಿಕ್ಷಣ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿದ್ಯಾರ್ಥಿಗಳಿಗೆ APAAR ID ಗಳನ್ನು ರಚಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಿರ್ದೇಶಿಸಿದೆ. APAAR ID ಆಧಾರ್ ರೀತಿಯೇ ಇರಲಿದ್ದು, ಇದು ವಿದ್ಯಾರ್ಥಿಗಳಿಗೆ ಆಧಾರ್ ನ ಪರ್ಯಾಯವಾಗುವುದಿಲ್ಲ. ಆಧಾರ್ ಗೆ ಹೆಚ್ಚುವರಿಯಾಗಿ ವಿದ್ಯಾರ್ಥಿಗಳಿಗೆ ಇದನ್ನು ನೀಡಲಾಗುತ್ತದೆ.

Join Nadunudi News WhatsApp Group

Join Nadunudi News WhatsApp Group