New Card: ಹೊಸ BPL ಮತ್ತು APL ರೇಷನ್ ಕಾರ್ಡ್ ಕುರಿತಂತೆ ಇನ್ನೊಂದು ಆದೇಶ ಹೊರಡಿಸಿದ ಸರ್ಕಾರ, 15 ದಿನದಲ್ಲಿ ಸಿಗಲಿದೆ ಕಾರ್ಡ್
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಶುಭ ಸುದ್ದಿ, 15 ದಿನದೊಳಗೆ ನಿಮ್ಮ ಕೈ ಸೇರಲಿದೆ ಪಡಿತರ ಚೀಟಿ
APL And BPL Ration Card New Update 2023: ರಾಜ್ಯದಲ್ಲಿ ಈಗ ಒಂದರ ಮೇಲೊಂದು ಹೊಸ ಹೊಸ ಯೋಜನೆಗಳನ್ನು ಸರಕಾರ ಜಾರಿಗೆ ತರುತ್ತಿದ್ದು, ಈ ಯೋಜನೆಯ ಫಲಾನುಭವಿಗಳಾಗಲು ಪಡಿತರ ಚೀಟಿ ಬಹಳ ಮುಖ್ಯ ಆಗಿದೆ. ಸದ್ಯ ಸಾಕಷ್ಟು ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದ್ದು ಇನ್ನೂ ಕೂಡ ಕಾರ್ಡ್ ಸಿಗದೇ ಕೆಲವು ಯೋಜನೆಗಳಿಂದ ವಂಚಿತರಾಗಿದ್ದಾರೆ ಎಂದು ಹೇಳಬಹುದು.
ಈಗ ಕೆಲವು ತಿಂಗಳಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಯಾವುದೇ ಪಡಿತರ ಚೀಟಿಯನ್ನು ವಿತರಣೆ ಮಾಡಿರಲಿಲ್ಲ, ಆದರೆ ಈಗ ಪಡಿತರ ಚೀಟಿ ವಿತರಣೆ ಕುರಿತು ಹೊಸ ಮಾಹಿತಿಯೊಂದು ಹೊರಬಿದ್ದಿದೆ. ಹೊಸ APL, BPL ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ 15 ದಿನದೊಳಗೆ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.
ಹೊಸ ಪಡಿತರ ಚೀಟಿ ವಿತರಣೆ
ಸಚಿವ ಕೆ.ಹೆಚ್ ಮುನಿಯಪ್ಪ ಅವರು ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಚುನಾವಣೆ ಪ್ರಯುಕ್ತ ಹೊಸದಾಗಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ಕಾರ್ಡ್ ನೀಡುವುದನ್ನು ನಿಲ್ಲಿಸಲಾಗಿತ್ತು. ರಾಜ್ಯದಲ್ಲಿ2.95 ಅರ್ಜಿಗಳು ಬಾಕಿಯಿದ್ದು, ಜಿಲ್ಲೆಯಲ್ಲಿ 12 ಸಾವಿರ ಅರ್ಜಿಗಳು ಬಂದಿವೆ. 15 ದಿನದೊಳಗೆ ಪರಿಶೀಲಿಸಿ ಕಾರ್ಡ್ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ತಿಳಿಸಿದರು.
ಜಾತಿ ಗಣತಿ ನಡೆಸಲಾಗುವ ಕುರಿತು ಮಾಹಿತಿ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಎಲ್ಲಾ ಅರ್ಹ ಕುಟುಂಬಗಳಿಗೆ ಪಡಿತರ ಚೀಟಿ ವಿತರಣೆ ಮಾಡುವ ಕುರಿತಾಗಿ ಹೇಳಿಕೆ ನೀಡಿದ ತರುವಾಯ ಲೋಕ ಸಭಾ ಚುನಾವಣೆ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಇದೇ ವೇಳೆ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಹೊಂದಲಾಗಿದೆ. ಸಾಮಾಜಿಕ ನ್ಯಾಯ ದೊರೆಯಬೇಕು ಎನ್ನುವ ನಿಟ್ಟಿನಲ್ಲಿ ಜಾತಿ ಗಣತಿ ನಡೆಸಲಾಗುತ್ತಿದೆ. ಇದರಿಂದ ಯಾವುದೇ ಸಮಾಜಕ್ಕೆ ಅನ್ಯಾಯ ಆಗಲ್ಲ ಎಂದರು. ಹೀಗೆ ಹಲವು ವಿಚಾರವಾಗಿ ಸಚಿವರು ಮಾತನಾಡಿ ಜನರಿಗೆ ಆಶ್ವಾಸನೆ ನೀಡಿದರು.