Arogya Sanjeevini: ಸರ್ಕಾರೀ ನೌಕರರಿಗೆ ಬಂಪರ್ ಗುಡ್ ನ್ಯೂಸ್ ನೀಡಿದ ಸಿದ್ದರಾಮಯ್ಯ, ಇನ್ನೊಂದು ಗ್ಯಾರೆಂಟಿ ಘೋಷಣೆ

ಸರ್ಕಾರೀ ನೌಕರರಿಗೆ ಬಂಪರ್ ಗುಡ್ ನ್ಯೂಸ್ ನೀಡಿದ ಸಿದ್ದರಾಮಯ್ಯ, ಹೊಸ ಯೋಜನೆಗೆ ಜಾರಿ

Arogya Sanjeevini Yojana: ಸದ್ಯ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ರಾಜ್ಯದಲ್ಲಿ ಸಾಕಷ್ಟು ಯೋಜನೆಯನ್ನು ಜಾರಿಗೊಳಿಸಿದ್ದಾರೆ. ಚುನಾಣೆಯ ಸಮಯದಲ್ಲಿ ಘೋಷಿಸಿರುವ ಹಾಗೆಯೆ ಐದು ಉಚಿತ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವುದರ ಜೊತೆಗೆ ಇನ್ನು ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರೀ ನೌಕರರಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

CM Siddaramaiah Health Scheme
Image Credit: The Southfirst

ಸರ್ಕಾರೀ ನೌಕರರಿಗೆ ಬಂಪರ್ ಗುಡ್ ನ್ಯೂಸ್ ನೀಡಿದ ಸಿದ್ದರಾಮಯ್ಯ
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರೀ ನೌಕರರಿಗೆ ಹಳೆಯ ಪಿಂಚಣಿ ಜಾರಿಯ ಬಗ್ಗೆ ಅಪ್ಡೇಟ್ ನೀಡಿವುದರ ಜೊತೆಗೆ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸುವುದಾಗಿ ಘೋಷಿಸಿದ್ದಾರೆ. ಈಗಾಗಲೇ ಸಾಕಷ್ಟು ಬಾರಿ ಸರ್ಕಾರಿ ನೌಕರರು ಹಳೆಯ ಪಿಂಚಣಿ ಯೋಜನೆನ್ನು ಜಾರಿಗೊಳಿಸಲು ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಹಿನ್ನಲೆ ರಾಜ್ಯ ಸರ್ಕಾರ ಆದಷ್ಟು ಬೇಗ ಹಳೆಯ ಪಿಂಚಣಿ ಜಾರಿ ಮಾಡುವುದಾಗಿ ಹೇಳಿಕೆ ನೀಡಿದೆ. ಶೀಘ್ರದಲ್ಲೇ ನೌಕರರಿಗೆ ಹಳೆಯ ಪಿಂಚಣಿ ಜಾರಿಯಾಗಲಿದೆ.

ಇನ್ನೊಂದು ಗ್ಯಾರೆಂಟಿ ಘೋಷಣೆ
ಹಳೆಯ ಪಿಂಚಣಿಯ ಜಾರಿಯ ಜೊತೆಗೆ ರಾಜ್ಯ ಸರ್ಕಾರ ನೌಕರರರಿಗೆ ಇನ್ನೊಂದು ಯೋಜನೆಯನ್ನು ಕೂಡ ಜಾರಿ ಮಾಡುವುದಾಗಿ ಘೋಷಣೆ ಹೊರಡಿಸಿದೆ. ಕೇಂದ್ರ ಸರ್ಕಾರ ನಿರ್ಧರಿಸಿರುವಂತೆ ರಾಜ್ಯದಲ್ಲಿ ತುಟ್ಟಿಭತ್ಯೆಯನ್ನು ಯಾವುದೇ ವಿಳಂಭವಿಲ್ಲದೆ ನೀಡಲಾಗುತ್ತಿದೆ. NPS ತೆಗೆದು ಹಳೆ ಪಿಂಚಣಿ ಪದ್ಧತಿ ಜಾರಿಗೊಳಿಸುವ ಬಗ್ಗೆಯೂ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.

Arogya Sanjeevini Yojana
Image Credit: Careinsurance

ಸರ್ಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವ ಬಗ್ಗೆಯೂ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು. ಸರಕಾರ ಮತ್ತು ಜನರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿಯುತ ಕೆಲಸವನ್ನು ಸರಕಾರಿ ನೌಕರರು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮ್ಯಯ್ಯ ಅವರು ಹೇಳಿದ್ದಾರೆ. ಈ ಮೂಲಕ ಆರೋಗ್ಯ ಸಂಜೀವಿನಿ ಮರು ಜಾರಿ ಮಾಡುವುದಾಗಿ ಘೋಷಿಸಿದ್ದಾರೆ.

Join Nadunudi News WhatsApp Group

Join Nadunudi News WhatsApp Group